6:53 PM Wednesday25 - November 2020
ಬ್ರೇಕಿಂಗ್ ನ್ಯೂಸ್
ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾಗಿ ಭೃಂಗೀಶ್ ನೇಮಕ ಡಿಸೆಂಬರ್ 5 ರಾಜ್ಯ ಬಂದ್:  ಕನ್ನಡ ಪರ ಸಂಘಟನೆಗಳ ಸಭೆ ರಮೇಶ್ ಜಾರಕಿಹೊಳಿ ನಿವಾಸಕ್ಕೆ ಶ್ರೀರಾಮುಲು ಭೇಟಿ ಕಾಂಗ್ರೆಸ್ ನ ತಂತ್ರಗಾರಿಕೆ ನಾಯಕ ಅಹಮ್ಮದ್ ಪಟೇಲ್ ಮಾರಕ ಕೊರೊನಾಕ್ಕೆ ಬಲಿ ನಿವಾರ್ ಚಂಡಮಾರುತ: ರಾಜ್ಯದ ಹಲವೆಡೆ ಇನ್ನೆರಡು ದಿನ ಭಾರೀ ಮಳೆ ನಿರೀಕ್ಷೆ, ಯಲ್ಲೋ… ಅಂತಾರಾಷ್ಟ್ರೀಯ ಡ್ರಗ್ಸ್ ಜಾಲ ಬಯಲು: ಬೆಂಗಳೂರಿನಲ್ಲಿ ಬೃಹತ್  ಪ್ರಮಾಣದ ಮಾದಕ ದ್ರವ್ಯ ವಶ ಒಂದೇ ದಿನ ಮಾರಕ ಕೊರೊನಾಕ್ಕೆ 480 ಬಲಿ: 86,04,955 ಮಂದಿ ಗುಣಮುಖ ರೆಬೆಲ್ ಸ್ಟಾರ್  ಅಂಬರೀಷ್ ಎರಡನೆ ಪುಣ್ಯತಿಥಿ ಇಂದು ವಾರಣಾಸಿ ಕ್ಷೇತ್ರದಿಂದ ಪ್ರಧಾನಿ ಮೋದಿ ಆಯ್ಕೆ ಪ್ರಶ್ನಿಸಿ ಅರ್ಜಿ: ಇಂದು ಸುಪ್ರೀಂ ಕೋರ್ಟ್… ಸಹಕಾರ ಹಾಲು ಡೈರಿಗೆ ಕ್ಷೀರ ನೀಡುವ ಮೂಲಕ ವಿವಿಧ ಸೌಲಭ್ಯ ಪಡೆಯಲು ಸಲಹೆ

ಕರ್ನಾಟಕ ಬಂದ್ : ಕರಾವಳಿಯಲ್ಲಿ ನೀರಸ ಪ್ರತಿಕ್ರಿಯೆ, ಹಲವೆಡೆ ರೈತರ ಪರ ಪ್ರತಿಭಟನೆ

September 28, 2020, 3:09 PM

ಮಂಗಳೂರು(reporterkarnataka news): ಭೂ ಸುಧಾರಣೆ ಕಾಯಿದೆ ಹಾಗೂ ಎಪಿಎಂಸಿ ತಿದ್ದುಪಡಿ ಕಾಯಿದೆ ವಿರೋಧಿಸಿ ಸೋಮವಾರ ನಡೆದ ಕರ್ನಾಟಕ ಬಂದ್ ಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಜನಜೀವನ ಎಂದಿನಂತೆ ಇತ್ತು. ಈ ನಡುವೆ ನಗರದ ಮಿನಿ ವಿಧಾನ ಸೌಧ ಬಳಿ ರೈತ ಸಂಘಟನೆ ಹಾಗೂ ಬಿಜೆಪಿಯೇತರ ಪಕ್ಷಗಳ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಿತು.

ಜಿಲ್ಲೆಯಲ್ಲಿ ಸೋಮವಾರ ಎಂದಿನಂತೆ ಸರಕಾರಿ ಹಾಗೂ ಖಾಸಗಿ ಬಸ್ ಗಳ ಓಡಾಟ ನಡೆಸಿತು. ಆಟೋರಿಕ್ಷಾಗಳು ಕೂಡ ಬೀದಿಗೆ ಇಳಿದಿದ್ದವು. ಆದರೆ ನಗರದಲ್ಲಿ ಸಾಮಾನ್ಯಕ್ಕಿಂತ ಜನಸಂಖ್ಯೆ ಕಡಿಮೆ ಇತ್ತು. ಸಿಟಿ, ಸರ್ವಿಸ್ ಹಾಗೂ ಸರಕಾರಿ ಬಸ್ ಗಳಲ್ಲಿ ಪ್ರಯಾಣಿಕರ ಸಂಖ್ಯೆ ಇಳಿಮುಖವಾಗಿತ್ತು.

ಮಂಗಳೂರಿನ ಮಿನಿ ವಿಧಾನಸೌಧ ಎದುರು ನಡೆದ ಬೃಹತ್ ಪ್ರತಿಭಟನೆಯಲ್ಲಿ ಕಾಂಗ್ರೆಸ್, ಕಮ್ಯುನಿಸ್ಟ್, ಜನತಾದಳ ಹಾಗೂ ಇತರ ಪಕ್ಷಗಳ ನಾಯಕರು ಪಾಲ್ಗೊಂಡಿದ್ದರು. ಮೂಡುಬಿದರೆ,

ಬಂಟ್ವಾಳ ಮತ್ತು ಸುಳ್ಯದಲ್ಲಿ ರೈತ ಹಾಗೂ ಕಾರ್ಮಿಕರ ಸಂಘಟನೆಗಳ ಆಶ್ರಯದಲ್ಲಿ ಪ್ರತಿಭಟನೆ ನಡೆಯಿತು.

ಜಾಹೀರಾತು