ಇತ್ತೀಚಿನ ಸುದ್ದಿ
ಕಲ್ಯಾಣ ಕರ್ನಾಟಕ ಉತ್ಸವಕ್ಕೆ ಸಿಎಂ ಯಡಿಯೂರಪ್ಪ ಚಾಲನೆ
September 17, 2020, 11:52 AM

ಕಲಬುರ್ಗಿ(reporterkarnataka news): ಮುಖ್ಯಮಂತ್ರಿ ಯಡಿಯೂರಪ್ಪ ಇಂದು ಕಲಬುರ್ಗಿಯಲ್ಲಿ ಕಲ್ಯಾಣ ಕರ್ನಾಟಕ ಉತ್ಸವಕ್ಕೆ ಚಾಲನೆ ನೀಡಿದರು.
ಸರ್ದಾರ್ ಪಟೇಲ್ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಸಿಎಂ, ಕಲ್ಯಾಣ ಕರ್ನಾಟಕದ ಎಲ್ಲ ಜಿಲ್ಲೆಗಳ ಅಭಿವೃದ್ಧಿಗೆ ಸರ್ಕಾರ ಸಂಕಲ್ಪ ಬದ್ಧವಾಗಿದೆ ಎಂದು ಹೇಳಿದರು.
ಈ ಪ್ರದೇಶದಲ್ಲಿ ಪ್ರವಾಸೋದ್ಯಮಕ್ಕೆ ಉತ್ತಮ ಅವಕಾಶಗಳಿದ್ದು, ಅದರ ಗರಿಷ್ಟ ಬಳಕೆಗೆ ಕಾರ್ಯ ಯೋಜನೆ ಸಿದ್ದಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಸೇರಿದಂತೆ ಹಲವು ಗಣ್ಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದರು.