5:59 AM Monday1 - March 2021
ಬ್ರೇಕಿಂಗ್ ನ್ಯೂಸ್
ಬಿಜೆಪಿ ಯುವ ಮೋರ್ಚಾ ನರಗುಂದ ಮಂಡಲ ವತಿಯಿಂದ ಗ್ರಾಮದಲ್ಲಿ ಸ್ವಚ್ಚತಾ ಕಾರ್ಯಕ್ರಮ ಜಾತಿ, ಮತ, ಕಟ್ಟುಪಾಡುಗಳನ್ನು ಮೀರಿ ಜನಪದ ಜನಮಾನಸದಲ್ಲಿ ನೆಲೆಗೊಂಡಿದೆ: ಎಡನೀರು ಮಠಾಧೀಶರು ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ಸಚಿವ ಅಂಗಾರ ತವರಿನಲ್ಲಿ ಭಿನ್ನಮತ ಸ್ಫೋಟ: 3 ಮಂದಿ ಹಿರಿಯ ನಾಯಕರು ಬಿಜೆಪಿಯಿಂದ… ಅಥಣಿ ತಾಲೂಕಿನ ರಡೇರಹಟ್ಟಿ ಗ್ರಾಮದಲ್ಲಿ  ಆಕಸ್ಮಿಕವಾಗಿ ಬೆಂಕಿ ತಗುಲಿ ಗುಡಿಸಲು ಭಸ್ಮ: 4… ಒಂದೂವರೆ ತಿಂಗಳ ಅವಧಿಯಲ್ಲಿ 10 ಬಾರಿ ಇಂಧನ ದರ ಏರಿಕೆ: ಕೆಪಿಸಿಸಿ ಅಧ್ಯಕ್ಷ… ವೈದ್ಯಕೀಯ ಸೀಟುಗಳ ಬ್ಲಾಕಿಂಗ್ ದಂಧೆ: ಮಿನಿ ವಿಧಾನ ಸೌಧದ ಎದುರು ಎಬಿವಿಪಿ ಪ್ರತಿಭಟನೆ;… ಮಂಗಳೂರು ಮಹಾನಗರಪಾಲಿಕೆ  2020-21ನೇ  ಸಾಲಿನ ತೆರಿಗೆ ಪೂರ್ತಿ ಪಾವತಿಸಿದರೆ ಶೇ. 5% ವಿನಾಯಿತಿ ಮಹಿಳಾ ಸಿಬ್ಬಂದಿಗೆ ಮಾನಸಿಕ ಕಿರುಕುಳ ಪ್ರಕರಣ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ

ಇತ್ತೀಚಿನ ಸುದ್ದಿ

ಕಾಮಾಜೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ವಿವೇಕಾ ಸಂದೇಶ 2021’ ಕಾರ್ಯಕ್ರಮ

January 17, 2021, 8:30 AM

ಬಂಟ್ವಾಳ(reporterkarnataka news):

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬಂಟ್ವಾಳ ಇದರ ಸಹಯೋಗದಲ್ಲಿ  ಸರಕಾರಿ ಪ್ರಥಮ ದರ್ಜೆ ಕಾಲೇಜು ಕಾಮಾಜೆ  ವಿವೇಕಾನಂದರ 158ನೇ ಜಯಂತಿಯ ಪ್ರಯುಕ್ತ  ಕಾಲೇಜು ಸಭಾಂಗಣದಲ್ಲಿ “ವಿವೇಕಾ ಸಂದೇಶ 2021”  ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

 ಮುಖ್ಯ ಅತಿಥಿಗಳಾಗಿ ಮಾತಾನಾಡಿದ ವಕೀಲರಾದ ಪ್ರಸಾದ್ ಕುಮಾರ್ ರೈ, ಅಧ್ಯಯನ ಶೀಲ, ಕ್ರಾಂತಿಕಾರಿ ಸನ್ಯಾಸಿ ಸ್ವಾಮಿ ವಿವೇಕಾನಂದರು ಕೆಲವೇ  ವರ್ಷ ಬದುಕಿದ್ದರೂ ಕೂಡಾ, ಬಹಳಷ್ಟು ಚಿಂತನೆಗಳನ್ನು ಈ ದೇಶದ ಜನರಿಗೆ ನೀಡಿದ್ದಾರೆ, ಕಾರ್ಯಕ್ರಮಗಳು ಕೇವಲ ಒಂದು ದಿನಕ್ಕೆ ಸೀಮಿತವಾಗದೇ ವಿದ್ಯಾರ್ಥಿಗಳು ವಿವೇಕಾನಂದರ ಚಿಂತನೆಗಳನ್ನ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.

ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಪೊ. ಗಿರೀಶ್ ಭಟ್ ಮಾತಾಡಿ, ಇಂತಹ ಕಾರ್ಯಕ್ರಮಗಳು ವಿವೇಕಾನಂದರನ್ನು ಮತ್ತಷ್ಟು ತಿಳಿಯಲು ಸಹಕಾರಿಯಾಗಿದೆ ಎಂದರು. 

ಎಬಿವಿಪಿ ಬಂಟ್ವಾಳ ನಗರ ಕಾರ್ಯದರ್ಶಿ ನಾಗರಾಜ್ ಶೆಣೈ ಉಪಸ್ಥಿತರಿದ್ದರು..

ವಿದ್ಯಾರ್ಥಿ ಪರಿಷತ್ ನ ವತಿಯಿಂದ ಹಮ್ಮಿಕೊಂಡಿದ್ದ ಸ್ಪರ್ಧೆಯ ವಿಜೇತರಿಗೆ ಇದೇ ಸಂದರ್ಭದಲ್ಲಿ ಬಹುಮಾನ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಪರಿಷತ್ ನ ಪ್ರಮುಖರು ಹಾಗೂ ಕಾಲೇಜಿನ ಅಧ್ಯಾಪಕರೂ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

 ಪ್ರಾಧ್ಯಾಪಕರಾದ ಶಶಿಕಲಾ ಸ್ವಾಗತಿಸಿ, ವಿದ್ಯಾರ್ಥಿನಿ ಭಿಂದು ವಂದಿಸಿದರು. ಸುಶ್ಮಿತಾ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು