6:57 PM Monday18 - January 2021
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲಿ ಮತ್ತೆ ಸದ್ದು ಮಾಡಿದ ಹನಿಟ್ರ್ಯಾಪ್ : ಇಬ್ಬರು ಯುವತಿಯರು ಸೇರಿದಂತೆ 4… ಹಳ್ಳಿ ಹಳ್ಳಿಗೂ ಬಿಜೆಪಿ ಬೇರು ವ್ಯಾಪಿಸಿರುವುದು ಗ್ರಾಮ ಪಂಚಾಯಿತಿ ಚುನಾವಣೆಯಿಂದ ಸಾಬೀತು: ನಳಿನ್… ರಾಜ್ಯವೇ ಬೆಚ್ಚಿ ಬೀಳುವ ರೀತಿಯಲ್ಲಿ ಕಾಂಗ್ರೆಸ್ – ಜೆಡಿಎಸ್ ನೆಲಸಮ: ಬೆಳಗಾವಿ ಸಮಾವೇಶದಲ್ಲಿ… ಮೋದಿ- ಬಿಎಸ್ ವೈ ಜೋಡಿಗೆ ಜನರ ಆಶೀರ್ವಾದ: ಬೆಳಗಾವಿಯಲ್ಲಿ ಗೃಹ ಸಚಿವ ಅಮಿತ್… ವೆನ್ಲಾಕ್ ಆಸ್ಪತ್ರೆಯಲ್ಲಿ ಎಂ ಫ್ರೆಂಡ್ಸ್ ನ ಕಾರುಣ್ಯ ಯೋಜನೆಗೆ ಜಾಗತಿಕ ಬಂಟರ ಸಂಘಗಳ… ಸಚಿವ ಅಂಗಾರ ತವರಿನಲ್ಲಿ ಕಮಲ ಕದನ: ಬಿಜೆಪಿ ಶಕ್ತಿ ಕೇಂದ್ರದಿಂದ ಸುಳ್ಯ ಮಂಡಲ ಸಮಿತಿಗೆ… ಇಟಗಿಹಾಳ: ಮಧ್ಯದಂಗಡಿ ತೆರವಿಗೆ ಆಗ್ರಹಿಸಿ 3ನೇ ಬಾರಿ ಗ್ರಾಮಸ್ಥರಿಂದ ಭಾರಿ ರಸ್ತೆ ತಡೆ… ಕಾಮಾಜೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ವಿವೇಕಾ ಸಂದೇಶ 2021’ ಕಾರ್ಯಕ್ರಮ ರಾಜ್ಯದ ಎಲ್ಲ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರ ನೇಮಕ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ ಭದ್ರಾವತಿ: ಕ್ಷಿಪ್ರ ಕಾರ್ಯಪಡೆ ಕಚೇರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೂಮಿ…

ಇತ್ತೀಚಿನ ಸುದ್ದಿ

‘ಕಮಲ’ ಬಿಟ್ಟು ‘ಕೈ’ ಹಿಡಿದರು: ಬಂಟ್ವಾಳದಲ್ಲಿ ಮಾಜಿ ಸಚಿವ ರೈ ಸಮ್ಮುಖದಲ್ಲಿ ಹಲವು ಮಂದಿ ಸೇರ್ಪಡೆ

December 26, 2020, 5:10 PM

ಬಂಟ್ವಾಳ(reporterkarnataka news):

ಬಂಟ್ವಾಳ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಪಂಚಾಯಿತಿ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ ಎಲ್ಲಾ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಿಗೆ ಮಾಜಿ ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ನೇತೃತ್ವದಲ್ಲಿ ಸ್ಪರ್ಶ ಕಲಾ ಮಂದಿರ ಸಭಾಂಗಣದಲ್ಲಿ ಅಭಿನಂದನಾ ಕಾರ್ಯಕ್ರಮ ಜರಗಿತು ಹಾಗೂ  ಬಂಟ್ವಾಳ ವಿಧಾನಸಭೆ ವ್ಯಾಪ್ತಿಯಲ್ಲಿ ಅನೇಕ ಜನ ಪಂಚಾಯಿತಿ ಚುನಾವಣೆಯಲ್ಲಿ ಬಿಜೆಪಿ ಬಿಟ್ಟು ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಗೊಂಡಿದ್ದಾರೆ.



ಮಾಜಿ ಸಚಿವರ ಸಮ್ಮುಖದಲ್ಲಿ ಅವರಿಗೆ ಪಕ್ಷದ ಶಾಲು ಹೊದಿಸಿ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಳಿಸಲಾಯಿತು .



ಎಪಿಎಂಸಿ ಮಾಜಿ ಅಧ್ಯಕ್ಷ ಪದ್ಮನಾಭ ರೈ, ಜಿಲ್ಲಾ ಪಂಚಾಯಿತಿ ಸದಸ್ಯರುಗಳಾದ ಚಂದ್ರಪ್ರಕಾಶ್ ಶೆಟ್ಟಿ, ಎಂ. ಎಸ್. ಮೊಹಮ್ಮದ್, ಪದ್ಮಶೇಖರ್ ಜೈನ್, ತಾಲೂಕು ಪಂಚಾಯಿತಿ ಉಪಾಧ್ಯಕ್ಷರಾದ ಅಬ್ಬಾಸ್ ಅಲಿ, ಬಂಟ್ವಾಳ ಪುರಸಭೆ ಅಧ್ಯಕ್ಷ ಶರೀಫ್, ತಾಲೂಕು ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷರಾದ ಮಲ್ಲಿಕಾ ವಿ. ಶೆಟ್ಟಿ, ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷರು ಹಾಗೂ ಭೂ ಅಭಿವೃದ್ಧಿ ಬ್ಯಾಂಕ್ ನಿಕಟ ಪೂರ್ವ ಅಧ್ಯಕ್ಷರು ಸುದರ್ಶನ್ ಜೈನ್, ಪುರಸಭಾ ಸದಸ್ಯರಾದ ಜನಾರ್ದನ್ ಚಂಡ್ತಿಮಾರ್,ಮಹಿಳಾ ಬ್ಲಾಕ್ ಕಾಂಗ್ರೆಸ್  ಅಧ್ಯಕ್ಷರಾದ ಜಯಂತಿ ವಿ. ಪೂಜಾರಿ, ಬ್ಲಾಕ್ ಅಧ್ಯಕ್ಷರಾದ ಬೇಬಿ ಕುಂದರ್ ಮತ್ತು ಸುದೀಪ್ ಕುಮಾರ್ ಶೆಟ್ಟಿ, ಬಂಟ್ವಾಳ ಯುವ ಕಾಂಗ್ರೆಸ್ ಅಧ್ಯಕ್ಷರಾದ ಪ್ರಶಾಂತ್ ಕುಲಾಲ್, ಮಾಜಿ ಬ್ಲಾಕ್ ಅಧ್ಯಕ್ಷರಾದ ಮಾಯಿಲಪ್ಪ ಸಾಲಿಯಾನ್ ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು