9:17 AM Wednesday27 - January 2021
ಬ್ರೇಕಿಂಗ್ ನ್ಯೂಸ್
ರೇಡಿಯೋ ಸಾರಂಗ್ ಮತ್ತು ಎನ್.ಎಸ್.ಎಸ್. ವಿದ್ಯಾರ್ಥಿಗಳಿಂದ ಬೆಂಗ್ರೆ ಬೀಚ್ ಸ್ವಚ್ಛತೆ ಜಾನಪದ ಕ್ರೀಡೆ ಕಂಬಳ ಜನವರಿ ಅಂತ್ಯದಿಂದ ಪ್ರಾರಂಭ: ಸಂಸದ ನಳಿನ್ ಕುಮಾರ್ ಕಟೀಲ್ ಎಸ್‌ಡಿಪಿಐ ವತಿಯಿಂದ ಗಣರಾಜ್ಯೋತ್ಸವ ಪ್ರಯುಕ್ತ ರೈತ ಐಕ್ಯತಾ ಸಂಗಮ ಬಿಗ್ ಬಾಸ್ ಖ್ಯಾತಿಯ ನಟಿ ಜಯಶ್ರೀ ರಾಮಯ್ಯ ಆತ್ಮಹತ್ಯೆ: ಕುಟುಂಬದ ಸಮಸ್ಯೆ ಕಾರಣ? ಮಂಗಳೂರಿನ ನರ್ಸಿಂಗ್ ಕಾಲೇಜಿನ 4 ಮಂದಿ ವಿದ್ಯಾರ್ಥಿನಿಯರಿಗೆ ಕೊರೊನಾ: ಪಾಲಕರಲ್ಲಿ ಮತ್ತೆ ಭೀತಿ… ಗಣರಾಜ್ಯೋತ್ಸವ ಪರೇಡ್ ಗೆ ಆಯ್ಕೆಯಾದ ಕರ್ನಾಟಕದ ಟ್ಲಾಬ್ಲೊದಲ್ಲಿ ಕನ್ನಡ ಧ್ವಜ ನಾಪತ್ತೆ ಕಟೀಲು ಮೇಳ ಸೇವೆ ಆಟಗಳು:  ಇಂದು ಎಲ್ಲೆಲ್ಲಿ?  ನೀವೇ ನೋಡಿ ಬಡವರನ್ನು ಬೀದಿ ಪಾಲು ಮಾಡಿದರೆ ಜೋಕೆ: ಪಾಲಿಕೆಗೆ ಇಂಟಕ್ ರಾಷ್ಟ್ರೀಯ ಕಾರ್ಯದರ್ಶಿ ರಾಕೇಶ್… ವಿ.ವಿ ಕಾಲೇಜಿನಲ್ಲಿ ಪ್ರೌಢ ಶಾಲಾ ರಾಷ್ಟ್ರೀಯ ಸೇವಾಯೋಜನೆಯ ಯೋಜನಾಧಿಕಾರಿಗಳಿಗೆ ರಾಜ್ಯ ಮಟ್ಟದ ಕಾರ್ಯಾಗಾರ ಬಲ್ಯ ಸಮೀಪ ಕಾರು- ಬೊಲೆರೋ ಅಪಘಾತ:  ಒಬ್ಬ ಸಾವು, 4 ಮಂದಿ ತೀವ್ರ…

ಇತ್ತೀಚಿನ ಸುದ್ದಿ

ಕನಕ ದಾಸರ ಸಂದೇಶ ಸಮಾಜದ ಕಣ್ಣು ತೆರೆಸುವಂತಿದೆ: ತಹಶೀಲ್ದಾರ್‌ ಎಸ್‌.ಎಂ.ಶ್ರೀನಿವಾಸ್‌

December 4, 2020, 12:20 PM

ಶ್ರೀನಿವಾಸಪುರ(reporterkarnataka news): ಕನಕ ದಾಸರ ಸಂದೇಶ ಸಮಾಜದ ಕಣ್ಣು ತೆರೆಸುವಂತಿದೆ ಎಂದು ತಹಶೀಲ್ದಾರ್‌ ಎಸ್‌.ಎಂ.ಶ್ರೀನಿವಾಸ್‌ ಹೇಳಿದರು.

 ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಿದ್ದ ಕನಕದಾಸ ಜಯಂತಿ ಸಮಾರಂಭದಲ್ಲಿ ಕನಕ ದಾಸರ ಭಾವ ಚಿತ್ರಕ್ಕೆ ಮಾಲಾರ್ಪಣೆ ಮಾಡಿ ಮಾತನಾಡಿ, ಕನಕದಾಸರು ತಮ್ಮ ಕೀರ್ತನೆಗಳ ಮೂಲಕ ಸಮಾಜವನ್ನು ತಿದ್ದಲು ಪ್ರಯತ್ನಿಸಿದರು. ಅವರು ಯೋಧನಾಗಿ ಪರಾಕ್ರಮಕ್ಕೆ, ಕವಿಯಾಗಿ ಸಮಾಜ ಸುಧಾರಣೆಗೆ ಹೆಸರಾಗಿದ್ದಾರೆ ಎಂದು ಹೇಳಿದರು.

  ಅವರ ನೆನೆಪು ಜಯಂತಿಗೆ ಸೀಮಿತವಾಗಬಾರದು. ಅವರನ್ನು ಯಾವುದೇ ಒಂದು ಜಾತಿಗೆ ಸೀಮಿತ ಗೊಳಿಸಬಾರದು. ಸಮಾಜದ ಹಿತಕ್ಕೆ ಶ್ರಮಿಸಿದ ವ್ಯಕ್ತಿಗೆ ಜಾತಿ ಮತದ ಭೇದ ಇರುವುದಿಲ್ಲ. ಜಾತಿ ವ್ಯವಸ್ಥೆಯನ್ನು ತಮ್ಮ ಕೀರ್ತನೆಯಲ್ಲಿ ಪ್ರಶ್ನಿಸಿದ ಹಾಗೂ ಜಾತಿ ವ್ಯವಸ್ಥೆಯ ಟೊಳ್ಳುತನವನ್ನು ಬಯಲು ಮಾಡಿದ ಮಹಾ ಸಂತ ಕವಿ ಕನಕದಾಸರು ಎಂದು ಹೇಳಿದರು.

 ಉಪ ತಹಶೀಲ್ದಾರ್‌ ಮಲ್ಲೇಶ್‌, ಹಿರಿಯ ಕಂದಾಯ ನಿರೀಕ್ಷಕ ಬಿ.ವಿ.ಮುನಿರೆಡ್ಡಿ, ತಾಲ್ಲೂಕು ಕುರುಬರ ಸಂಘದ ಅಧ್ಯಕ್ಷ ಎಂ.ವೇಮಣ್ಣ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು