7:29 PM Friday4 - December 2020
ಬ್ರೇಕಿಂಗ್ ನ್ಯೂಸ್
ದೇಶದ ಜನರಿಗೆ ಶೀಘ್ರವೇ ಕೊರೊನಾ ಲಸಿಕೆ ಸಿದ್ಧ:  ಸರ್ವಪಕ್ಷಗಳ ಸಭೆಯಲ್ಲಿ ಪ್ರಧಾನಿ ಮೋದಿ… ಕನಕ ದಾಸರ ಸಂದೇಶ ಸಮಾಜದ ಕಣ್ಣು ತೆರೆಸುವಂತಿದೆ: ತಹಶೀಲ್ದಾರ್‌ ಎಸ್‌.ಎಂ.ಶ್ರೀನಿವಾಸ್‌ ಅನಾಥ ಮಕ್ಕಳ್ಳನ್ನು ಸ್ವಂತ ಮಕ್ಕಳಂತೆ ಕಾಣುವ ಮೂಲಕ ಉತ್ತಮ ಭವಿಷ್ಯ ರೂಪಿಸಿ: ಡಾ.ಶಾಂತ ಜಾತಿಯ ಹೆಸರಲ್ಲಿ ನಡೆಯುವ ಶೋಷಣೆ ಸಮಾಜ ಹಿತಕ್ಕೆ ಮಾರಕ: ಕುರುಬರ ಅಧ್ಯಕ್ಷ ಎಂ.ವೇಮಣ್ಣ  ಹಿಂಸಾಚಾರ: ಶಿವಮೊಗ್ಗದಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿ, ಬಿಗಿ ಬಂದೋಬಸ್ತ್  ಮಾರಕ ಕೊರೊನಾಕ್ಕೆ ಒಂದೇ ದಿನ 540 ಮಂದಿ ಬಲಿ: 42, 916 ಮಂದಿ… ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆ: 30 ವಾರ್ಡ್ ಗಳಲ್ಲಿ ಬಿಜೆಪಿ ಮುನ್ನಡೆ ದುರ್ಬಲವಾಗುತ್ತಿರುವ ಬುರೆವಿ ಚಂಡಮಾರುತ: ನಿಟ್ಟುಸಿರು ಬಿಟ್ಟ ಕೇರಳದ ಜನತೆ ದೇಶದಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣ: ಇಂದು ಪ್ರಧಾನಿ ಸರ್ವ ಪಕ್ಷ ಸಭೆ ಪ್ರತಿಷ್ಠಿತ ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆ: ಬಿಗಿ ಭದ್ರತೆಯಲ್ಲಿ ಇಂದು ಮತ ಎಣಿಕೆ

ಇತ್ತೀಚಿನ ಸುದ್ದಿ

ಕರಾವಳಿಯಲ್ಲಿ ಮತ್ತೆ ರೆಡ್ ಅಲರ್ಟ್: ಅತೀ ಭಾರಿ ಮಳೆ ಸಾಧ್ಯತೆ

August 8, 2020, 11:14 AM

ಮಂಗಳೂರು(reporterkarnataka news): ರಾಜ್ಯದಲ್ಲಿ ಕಳೆದ ಮೂರು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ಕರಾವಳಿಯ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಆ. 9ರಂದು ಬೆಳಗ್ಗೆ 8.30ರ ವರೆಗೆ ಮತ್ತೆ ರೆಡ್ ಅಲರ್ಟ್ ಘೋಷಿಸಲಾಗಿದೆ.

ಆ.8ರಂದು ಮಧ್ಯಾಹ್ನ 1 ಗಂಟೆಯಿಂದ ಆ. 9ರ ಬೆಳಗ್ಗೆ 8.30ರ ವರೆಗೆ ರೆಡ್ ಅಲರ್ಟ್ ಜಾರಿಯಲ್ಲಿರುತ್ತದೆ. ಈ ಸಂದರ್ಭದಲ್ಲಿ ಭಾರಿಯಿಂದ ಅತೀ ಭಾರಿ ಮಳೆಯಾಗಲಿದೆ. 204.5 ಮಿಮೀ ಗಿಂತ ಹೆಚ್ಚು ಮಳೆ ಬೀಳುವ ಸಾಧ್ಯತೆಗಳಿವೆ. ಮೀನುಗಾರರು ಹಾಗೂ ಪ್ರವಾಸಿಗರು ಸಮುದ್ರಕ್ಕೆ ತೆರಳದಂತೆ, ನದಿ ತಟದ ವಾಸಿಗಳು ಎಚ್ಚರಿಕೆಯಿಂದ ಇರುವಂತೆ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
ಉಭಯ ಜಿಲ್ಲೆಗಳಲ್ಲಿ ಆ. 9ರಂದು ಬೆಳಗ್ಗೆ 8 30ರಿಂದ ಆ.12ರಂದು ಬೆಳಗ್ಗೆ 8.30ರ ವರೆಗೆ ಆರೆಂಜ್ ಅಲರ್ಟ್ ಇರುತ್ತದೆ.
ಎರಡೂ ಜಿಲ್ಲೆಯಲ್ಲಿ 115.6 ಮಿಮೀ. ನಿಂದ 204.4 ಮಿಮೀ. ಮಳೆಯಾಗುವ ಸಾಧ್ಯತೆಗಳಿವೆ. ಆ. 12ರಂದು ಬೆಳಗ್ಗೆ 8.30ರಿಂದ ಆ.13ರ ಬೆಳಗ್ಗೆ 8.30ರ ವರೆಗೆ ಯೆಲ್ಲೊ ಅಲರ್ಟ್ ಜಾರಿಯಲ್ಲಿದ್ದು, 64.5 ಮಿಮೀ.ನಿಂದ 115.5 ಮಿಮೀ. ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು