ಇತ್ತೀಚಿನ ಸುದ್ದಿ
ಕಾಸರಗೋಡಿನಲ್ಲಿ ಭಾರೀ ಮಳೆ: ರೆಡ್ ಅಲರ್ಟ್ ಜಾರಿ, ತುಂಬಿ ಹರಿದ ಚಂದ್ರಗಿರಿ, ತೇಜಸ್ವಿನಿ
August 10, 2020, 3:04 AM

ಕಾಸರಗೋಡು(reporterkarnatakanews): ಕಾಸರಗೋಡಿನಲ್ಲಿ ಭಾರೀ ಮಳೆಯಾಗುತ್ತಿದೆ. ಜಿಲ್ಲೆಯ ಪ್ರಮುಖ ನದಿಗಳು ತುಂಬಿ ಹರಿಯುತ್ತಿವೆ.
ಚಂದ್ರಗಿರಿ, ತೇಜಸ್ವಿನಿ, ಸೇರಿದಂತೆ ಜಿಲ್ಲೆಯ ಪ್ರಮುಖ ನದಿಗಳು ಉಕ್ಕಿ ಹರಿಯುತ್ತಿವೆ. ಮಳೆ ತೀವ್ರವಾಗಿರುವ ಹಿನ್ನೆಲೆಯಲ್ಲಿ ಕಾಸರಗೋಡಿನಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.
ಜಿಲ್ಲಾಧಿಕಾರಿ ನೇತೃತ್ವದ ವಿಶೇಷ ತಂಡ ರಚಿಸಲಾಗಿದೆ. ಇದೇ ವೇಳೆ ಕೇರಳದ ಪ್ರಮುಖ ಅಣೆಕಟ್ಟುಗಳ ಒಳಹರಿವಿನ ಪ್ರಮಾಣ ಕಡಿಮೆಯಾಗಿದೆ.ಮುಲ್ಲಪೆರಿಯಾರ್ ಅಣೆಕಟ್ಟಿನ ಗೇಟ್ ಗಳನ್ನು ಸದ್ಯಕ್ಕೆ ತೆರೆಯದಿರಲು ನಿರ್ಧರಿಸಲಾಗಿದೆ