ಇತ್ತೀಚಿನ ಸುದ್ದಿ
ಕಾಸರಗೋಡಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಹತ್ಯೆ ಪ್ರಕರಣ: ಸಿಬಿಐ ತನಿಖೆಗೆ ಆದೇಶ
August 25, 2020, 5:37 AM

ಕೊಚ್ಚಿ(reporterkarnataka NEWS):
ಕಾಸರಗೋಡಿನ ಪೆರಿಯ ಎಂಬಲ್ಲಿ ಇಬ್ಬರು ಕಾಂಗ್ರೆಸ್ ಕಾರ್ಯಕರ್ತರ ಬರ್ಬರ ಹತ್ಯೆ ಪ್ರಕರಣದ ಕುರಿತು ಸಿಬಿಐ ತನಿಖೆಗೆ ಕೇರಳ ಹೈಕೋರ್ಟ್ ಆದೇಶ ನೀಡಿದೆ. ಈ ಸಂಬಂಧ ಕೇರಳ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ನ್ಯಾಯಾಲಯ ತಳ್ಳಿಹಾಕಿದೆ.
2019 ಸಪ್ಟೆಂಬರ್ 30ರಂದು ಮನೆಯ ಬಳಿ ಕಾಂಗ್ರೆಸ್ ಕಾರ್ಯಕರ್ತರಾಗಿದ್ದ ಕೃಪೇಶ್ ಮತ್ತು ಶರತ್ ಲಾಲ್ ಎಂಬವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದರು. ರಾಜಕೀಯ ದ್ವೇಷಕ್ಕಾಗಿ ಸಿಪಿಎಂ ಪಕ್ಷದ ಕೆಲವು ನಾಯಕರು ಈ ಕೊಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು.
ಇದೀಗ ವಿಚಾರಣೆ ಪೂರ್ಣಗೊಳಿಸಿ 9 ತಿಂಗಳ ಬಳಿಕ ಕೇರಳ ಹೈಕೋರ್ಟ್ ತೀರ್ಪು ನೀಡಿದೆ. ಇಬ್ಬರು ಕಾಂಗ್ರೆಸ್ ಕಾರ್ಯಕರ್ತರ ಬರ್ಬರ ಹತ್ಯೆ ಕಾಸರಗೋಡನ್ನು ನಡುಗಿಸಿತ್ತು.