10:29 AM Friday4 - December 2020
ಬ್ರೇಕಿಂಗ್ ನ್ಯೂಸ್
ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆ: 30 ವಾರ್ಡ್ ಗಳಲ್ಲಿ ಬಿಜೆಪಿ ಮುನ್ನಡೆ ದುರ್ಬಲವಾಗುತ್ತಿರುವ ಬುರೆವಿ ಚಂಡಮಾರುತ: ನಿಟ್ಟುಸಿರು ಬಿಟ್ಟ ಕೇರಳದ ಜನತೆ ದೇಶದಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣ: ಇಂದು ಪ್ರಧಾನಿ ಸರ್ವ ಪಕ್ಷ ಸಭೆ ಪ್ರತಿಷ್ಠಿತ ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆ: ಬಿಗಿ ಭದ್ರತೆಯಲ್ಲಿ ಇಂದು ಮತ ಎಣಿಕೆ ಸುಪ್ರೀಂ ಕೋರ್ಟ್ ನಲ್ಲಿ ಸ್ಯಾಂಡಲ್ ವುಡ್ ನಟಿ ರಾಗಿಣಿ ಜಾಮೀನು ಅರ್ಜಿ ವಿಚಾರಣೆ… ಗೋ ಹತ್ಯೆ ನಿಷೇಧ ಕಾನೂನು ಜಾರಿಗೆ ತರಲು ತಡವೇಕೆ?: ಮಾಜಿ ಸಚಿವ ಖಾದರ್… ದೋಣಿ ದುರಂತದಲ್ಲಿ ಮೃತಪಟ್ಟ ಮೀನುಗಾರರ ಕುಟುಂಬಕ್ಕೆ ತಲಾ 6 ಲಕ್ಷ ರೂ. ಪರಿಹಾರ… ರೈತರ ಬೆಂಬಲಕ್ಕೆ ನಿಂತ ಅಕಾಲಿ ನಾಯಕ  ಬಾದಲ್ :  ಪದ್ಮವಿಭೂಷಣ ಪ್ರಶಸ್ತಿ ವಾಪಸ್ ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕನಕ ಜಯಂತಿ ಆಚರಣೆ ಮಂಗಳೂರಿನಲ್ಲಿ ಉಗ್ರರ ಪರ ಗೋಡೆ ಬರಹ: ಫುಡ್ ಡೆಲಿವರಿ ಬಾಯ್ ಪೊಲೀಸ್ ವಶಕ್ಕೆ

ಇತ್ತೀಚಿನ ಸುದ್ದಿ

ಕೆನರಾ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ದಿನಾಚರಣೆ

September 25, 2020, 7:51 AM

ಚಿತ್ರ :ಅನುಷ್ ಪಂಡಿತ್

ಮಂಗಳೂರು(reporterkarnataka news) : ಕೆನರಾ ಕಾಲೇಜು, ಮಂಗಳೂರು ಎನ್ ಎಸ್ ಎಸ್ ಘಟಕದ ವತಿಯಿಂದ ಎನ್ ಎಸ್ ಎಸ್ ದಿನವನ್ನು ಆಚರಿಸಲಾಯಿತು.
ಕಾರ್ಯಕ್ರಮದ ಗೌರವಾನ್ವಿತ ಅತಿಥಿಯಾಗಿ ಆಗಮಿಸಿದ್ದ ಮಂಗಳೂರು ವಿಶ್ವ ವಿದ್ಯಾನಿಲಯದ ಎನ್ ಎಸ್ ಎಸ್ ಸಂಯೋಜನಾಧಿಕಾರಿ ಡಾ. ನಾಗರತ್ನ ಕೆ. ಎ. ಮಾತನಾಡಿ ರಾ.ಸೇ.ಯೋ. ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವನೆಯನ್ನು ಬೆಳೆಸಲು ಸಹಕಾರಿಯಾಗಿದೆ. ಶಿಕ್ಷಣದೊಂದಿಗೆ ಸೇವೆ ಎನ್ನುವ ಭದ್ರ ಬುನಾದಿಯೊಂದಿಗೆ, ಮಹಾತ್ಮಾ ಗಾಂಧೀಜಿ ಹಾಗೂ ಸ್ವಾಮಿ ವಿವೇಕಾನಂದರ ತತ್ವಾದರ್ಶಗಳ ತಳಹದಿಯೊಂದಿಗೆ ನಿಂತಿದೆ.

ರಾಷ್ಟ್ರೀಯ ಸೇವಾ ಯೋಜನೆ ಯುವ ಜನತೆಯಲ್ಲಿ ನಾಯಕತ್ವ ಹಾಗೂ ಆತ್ಮ ವಿಶ್ವಾಸವನ್ನು ಬೆಳೆಸುವ ಪರಿ ಅತ್ಯದ್ಭುತ. ನನಗಲ್ಲ ನಿಮಗೆ ಎನ್ನುವ ಧ್ಯೇಯ ವಾಕ್ಯದೊಂದಿಗೆ ಸಾಮಾಜಿಕವಾಗಿ ಜವಾಬ್ದಾರಿಯುತ ಪ್ರಜ್ಞೆಯನ್ನು ಯುವ ಮನಸುಗಳಲ್ಲಿ ಅರಳುವಂತೆ ಮಾಡುವುದೇ ರಾಷ್ಟ್ರೀಯ ಸೇವಾ ಯೋಜನೆ. ರಾಷ್ಟ್ರ ಪ್ರೇಮಕ್ಕೆ ಪೂರಕವಾದ ಸಂವಿಧಾನ ಓದು ಹಾಗೂ ಸಾಮಾಜಿಕ ಚಟುವಟಿಕೆಗಳಾದ ಮತದಾನದ ಮಹತ್ವ, ಆರೋಗ್ಯ ಭಾಗ್ಯ, ಡೆಂಗ್ಯು-ಮಲೇರಿಯಾ, ಕೋವಿಡ್-೧೯ ನಂತಹ ಮಾರಕ ರೋಗಗಳ ಅರಿವು ಮೂಡಿಸುತ್ತದೆ. ವಿದ್ಯಾರ್ಥಿಗಳ ಸರ್ವತೋಮುಖ ಏಳಿಗೆಗೆ ರಾಷ್ಟ್ರೀಯ ಸೇವಾ ಯೋಜನೆಯ ಕೊಡುಗೆ ಮಹತ್ತರ” ಎಂದು ನುಡಿದರು.

ಮುಖ್ಯ ಅತಿಥಿಗಳಾದ ವಾಣಿಜ್ಯ ವಿಭಾಗದ ಮುಖ್ಯಸ್ಥೆ ಶ್ರೀಮತಿ ದೇಜಮ್ಮ ಎ. ಎನ್ ಎನ್ ಎಸ್ ಕೇವಲ ಕಾಲೇಜು ಜೀವನಕ್ಕೆ ಸೀಮಿತವಾಗಿರದೆ ಜೀವನದುದ್ದಕ್ಕೂ ಪಾಲಿಸಬೇಕಾದ ತತ್ವ” ಎಂದು ನುಡಿದರು.


ಪ್ರಾಂಶುಪಾಲರಾದ ಡಾ. ಪ್ರೇಮಲತಾ ವಿ. ತಮ್ಮ ಅಧ್ಯಕ್ಷೀಯ ನೆಲೆಯಲ್ಲಿ ಮಾತನಾಡುತ್ತಾ ಸ್ವಯಂ ಸೇವಕರಿಗೆ ಶುಭ ಹಾರೈಸಿದರು.

ವಿವಿಧ ರೀತಿಯಲ್ಲಿ ಕೋವಿಡ್ ವಾರಿಯರ್ ಗಳಾಗಿ ತೊಡಗಿಸಿಕೊಂಡಿದ್ದ ರಾಸೆಯೋ ಸ್ವಯಂಸೇವಕರನ್ನು ಈ ಸಂದರ್ಭದಲ್ಲಿ ಗುರುತಿಸಿ ಗೌರವಿಸಲಾಯಿತು.

ಎನ್ ಎಸ್ ಎಸ್ ಯೋಜನಾಧಿಕಾರಿಗಳಾದ ಶ್ರೀಮತಿ ಸೀಮಾ ಪ್ರಭು ಎಸ್. ಸ್ವಯಂಸೇವಕರಿಗೆ ಪ್ರತಿಜ್ಞಾವಿಧಿಯನ್ನು ಬೋಧಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು