6:48 PM Saturday23 - January 2021
ಬ್ರೇಕಿಂಗ್ ನ್ಯೂಸ್
ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ ಬೆಳಗಾವಿ ಲೋಕಸಭೆ ಉಪ ಚುನಾವಣೆ: ಬಿಜೆಪಿ ಟಿಕೆಟ್ ಗೆ ಪ್ರಮೋದ್ ಮುತಾಲಿಕ್ ಹಕ್ಕೊತ್ತಾಯ ಮಹಿಳಾ ಪೊಲೀಸ್ ಮೇಲೆ ಹಲ್ಲೆ ಆರೋಪ: ಜಯನಗರ ಶಾಸಕಿ ಸೌಮ್ಯಾ ರೆಡ್ಡಿ ವಿರುದ್ಧ… ಕಾಳ ಸಂತೆಯಲ್ಲಿ ಆಹಾರ ದಾಸ್ತಾನು ಹೆಚ್ಚಾಗುವ ಭೀತಿಯಿದೆ: ಮಾಜಿ ಸಚಿವ ಯು.ಟಿ ಖಾದರ್ ಅರ್ನಾಬ್ ಗೋಸ್ವಾಮಿ ವಾಟ್ಸಾಪ್ ಚಾಟ್ ಬಗ್ಗೆ ಕೇಂದ್ರ ಯಾಕೆ ಮಾತನಾಡುತ್ತಿಲ್ಲ: ಸೋನಿಯಾ ಪ್ರಶ್ನೆ  ಒತ್ತಡ ರಾಜಕೀಯಕ್ಕೆ ಮಣಿದು ಖಾತೆ ಮರು ಹಂಚಿಕೆ  ಮಾಡಿದ ಮುಖ್ಯಮಂತ್ರಿ ಬಿಎಸ್ ವೈ ಶಿವಮೊಗ್ಗದಲ್ಲಿ ನಡೆದದ್ದು ಭೂ ಕಂಪನವಲ್ಲ, ರೈಲ್ವೆ ಕ್ರಷರ್ ಸ್ಫೋಟ: 10ಕ್ಕೂ ಅಧಿಕ ಸಾವು… ಸಾಲು ಮರದ ತಿಮ್ಮಕ್ಕ ವೃಕ್ಷೋದ್ಯಾನವನ ಇಂದು ಸುಬ್ರಹ್ಮಣ್ಯದಲ್ಲಿ ಉದ್ಘಾಟನೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಇಂದು ರಾಜ್ಯ ಧಾರ್ಮಿಕ ಪರಿಷತ್ ವಿಶೇಷ… ಶಿವಮೊಗ್ಗ, ಭದ್ರಾವತಿ, ಚಿಕ್ಕಮಗಳೂರಿನಲ್ಲಿ ಭೂ ಕಂಪನದ ಅನುಭವ: ಮನೆಯಿಂದ ಬೀದಿಗೆ ಓಡಿದ ಜನರು

ಇತ್ತೀಚಿನ ಸುದ್ದಿ

ಕೇಂದ್ರ ಮತ್ತು ರಾಜ್ಯ ಸರಕಾರದಿಂದ ಅಲ್ಪಸಂಖ್ಯಾತರ ಅಭಿವೃದ್ಧಿಗೆ ಹಲವು ಯೋಜನೆ: ಅಬ್ದುಲ್ ಅಜೀಮ್

January 12, 2021, 8:42 PM

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ
info.reporterkarnataka@gmail.com

ಕೋಲಾರ: ಕೇಂದ್ರ ಮತ್ತು ರಾಜ್ಯ ಸರ್ಕಾರವು ಅಲ್ಪಸಂಖ್ಯಾತರ ಅಭಿವೃದ್ಧಿಗೆ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದು , ಈ ಯೋಜನೆಗಳು ಅರ್ಹ ಅಲ್ಪಸಂಖ್ಯಾತ ಫಲಾನುಭವಿಗಳಿಗೆ ದೊರಕಬೇಕು ಎಂದು ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಅಧ್ಯಕ್ಷ ಅಬ್ದುಲ್ ಅಜೀಮ್ ಅವರು ಹೇಳಿದರು.

ಜಿಲ್ಲಾಧಿಕಾರಿಗಳ ಕಚೇರಿಯ ನ್ಯಾಯಾಂಗ ಸಭಾಂಗಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ , ಪ್ರಧಾನ ಮಂತ್ರಿಗಳ 15 ಅಂಶಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸರ್ಕಾರವು ಯೋಜನೆಗಳಲ್ಲಿ ಶೇ . 15 ರಷ್ಟನ್ನು ಅಲ್ಪಸಂಖ್ಯಾತರ ಅಭಿವೃದ್ಧಿಗೆ ಮೀಸಲಿಟ್ಟಿದೆ . ಈ ಯೋಜನೆಗಳಲ್ಲಿ ಜಿಲ್ಲೆಯಲ್ಲಿ ಉತ್ತಮ ಪ್ರಗತಿಯಾಗಿದೆ. ಸಾರ್ವಜನಿಕ ಕುಂದುಕೊರತೆಗಳನ್ನು ಆಲಿಸಿ ಅಹವಾಲುಗಳನ್ನು ಸ್ವೀಕರಿಸಿ ಸಂಬಂಧಿಸಿದ ಇಲಾಖೆಗಳಿಗೆ ರವಾನಿಸಿ ಪರಿಹರಿಸಲಾಗುವುದು. ಇಂದು ಅಧಿಕಾರಿಗಳಿಂದ ಪ್ರಗತಿ ಕುರಿತ ಮಾಹಿತಿಯನ್ನು ಪಡೆದುಕೊಳ್ಳಲಾಗಿದೆ ಎಂದು ತಿಳಿಸಿದರು.

ಕೋಲಾರ ಜಿಲ್ಲೆಯು ಬುದ್ಧಿವಂತರಿಂದ ಕೂಡಿದ ಜಿಲ್ಲೆಯಾಗಿದೆ.  ಕೆಎಎಸ್ ಮತ್ತು ಐಎಎಸ್ ಹುದ್ದೆಗಳಿಗೆ ಜಿಲ್ಲೆಯ ಜನ ಹೆಚ್ಚಾಗಿ ಆಯ್ಕೆಯಾಗುತ್ತಿದ್ದಾರೆ. ಜಿಲ್ಲೆಗೆ ಮುಂದೆ ಉತ್ತಮವಾದ ಭವಿಷ್ಯವಿದೆ. ದೇಶದಲ್ಲಿ ನೀರಿನ ಅಭಾವ ಉಂಟಾದಾಗ ಸಮುದ್ರದ ನೀರನ್ನು ಸಂಸ್ಕರಿಸಿ ಬಳಸಬೇಕಾಗುತ್ತದೆ . ಕೋಲಾರ ಜಿಲ್ಲೆಯು ಸಮುದ್ರಕ್ಕೆ 250 ಕೀ.ಮೀ ದೂರದಲ್ಲಿದ್ದು , ಸಂಸ್ಕರಿಸಿದ ನೀರು ಮೊದಲು ಕೋಲಾರ ಜಿಲ್ಲೆಗೆ ದೊರೆಯುತ್ತದೆ. ಇದರಿಂದ ಜಿಲ್ಲೆ ಅಭಿವೃದ್ಧಿ ಹೊಂದುತ್ತದೆ. ಜಿಲ್ಲೆಯು ಕೆರೆ ಮತ್ತು ಬೆಟ್ಟಗಳಿಂದ ಕೂಡಿದ್ದು , ಬೆಟ್ಟಗಳ ಮೇಲೆ ಬಿದ್ದ ಮಳೆ ನೀರು ಕೆರೆಗೆ ಹರಿಯಲು ಸೂಕ್ತ ಅವಕಾಶವಿಲ್ಲ . ಆದ್ದರಿಂದ ಬೆಟ್ಟಗಳ ಸುತ್ತ ಟ್ರಂಚ್ ಹೊಡೆದು ನೀರು ಸರಾಗವಾಗಿ ಕೆರೆಗೆ ಹರಿಯುವಂತೆ ಮಾಡಬೇಕು . ಇದರಿಂದ ಕೆರೆಗಳು ಬೇಗ ತುಂಬುತ್ತವೆ ಎಂದು ಸಲಹೆ ನೀಡಿದರು.

ಜಿಲ್ಲಾಧಿಕಾರಿ ಸಿ.ಸತ್ಯಭಾಮ ಮಾತನಾಡಿ , ಜಿಲ್ಲೆಯಲ್ಲಿ 6 ಅಲ್ಪಸಂಖ್ಯಾತರ ವಸತಿ ಶಾಲೆಗಳಿದ್ದು , ಅಲ್ಲಿಗೆ ಅಗತ್ಯವಿರುವ ವಿದ್ಯಾರ್ಥಿಗಳ ದಾಖಲಾತಿಗೆ ಜಾಗೃತಿ ಮೂಡಿಸಲಾಗಿದೆ. ಕೊವಿಡ್ ಸಂದರ್ಭದಲ್ಲಿ ಅಲ್ಪಸಂಖ್ಯಾತರ ಪ್ರದೇಶಗಳಲ್ಲಿ ಹೆಚ್ಚು ಹೆಚ್ಚು ಕೊವಿಡ್ ಪರೀಕ್ಷೆಗಳನ್ನು ಮಾಡಲಾಗಿದೆ . ಜಿಲ್ಲೆಯಲ್ಲಿ ಮೌಲಾನ ಅಚಾದ್ ಮಾದರಿ ಶಾಲೆಗಳು 4 ಇದ್ದು , ಎಸ್.ಎಸ್.ಎಲ್.ಸಿ ಫಲಿತಾಂಶದಲ್ಲಿ ಶೇ . 100 ರಷ್ಟು ಫಲಿತಾಂಶ ಬಂದಿದೆ . ಜಿಲ್ಲೆಯಲ್ಲಿ 162 ಅಲ್ಪಸಂಖ್ಯಾತ ಅಂಗನವಾಡಿ ಕೇಂದ್ರಗಳು , 163 ಸರ್ಕಾರಿ ಉರ್ದು ಶಾಲೆಗಳು ಹಾಗೂ 5 ಅನುದಾನಿತ ಉರ್ದು ಶಾಲೆಗಳಿವೆ ಎಂದು ಮಾಹಿತಿ ನೀಡಿದರು.

ಸಭೆಯಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ನಿರ್ದೇಶಕರಾದ ಮೆಹಬೂಬ್ ಸಾಬ್ , ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ನಾಗರಾಜ್ , ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಕಾರ್ತಿಕ್ ರೆಡ್ಡಿ , ಕೆ.ಜಿ.ಎಫ್ ಪೊಲೀಸ್ ವರಿಷ್ಠಾಧಿಕಾರಿಗಳಾದ ಇಲಕ್ಕಿಯಾ ಕರುಣಾಕರನ್ ಸೇರಿದಂತೆ ಅಲ್ಪಸಂಖ್ಯಾತರ ಸಮುದಾಯದ ಮುಖಂಡರು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು .

ಇತ್ತೀಚಿನ ಸುದ್ದಿ

ಜಾಹೀರಾತು