ಇತ್ತೀಚಿನ ಸುದ್ದಿ
ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಕೊರೊನಾ ಸೋಂಕು
September 16, 2020, 10:25 PM

ನವದೆಹಲಿ(reporterkarnataka news): ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ. ಸಚಿವ ಗಡ್ಕರಿ ಅವರೇ ಸಾಮಾಜಿಕ ಜಾಲ ತಾಣದ ಮೂಲಕ ಈ ಮಾಹಿತಿ ಬಹಿರಂಗಪಡಿಸಿದ್ದಾರೆ. ನಾನು ಆರೋಗ್ಯವಾಗಿದ್ದೇನೆ. ಆದರೂ ಪರೀಕ್ಷೆಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ರೋಗದ ಯಾವುದೇ ಲಕ್ಷಣ ಕಂಡು ಬಂದಿಲ್ಲ ಎಂದು ನಿತೀನ್ ಗಡ್ಕರಿ ಹೇಳಿದ್ದಾರೆ.
ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಸಚಿವ ಗಡ್ಕರಿ ಅವರು ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಭಾಗವಹಿಸುವ ಸಾಧ್ಯತೆ ಕಡಿಮೆಯಾಗಿದೆ.