ಇತ್ತೀಚಿನ ಸುದ್ದಿ
ಕೇಂದ್ರ ಸಚಿವ ಸುರೇಶ್ ಅಂಗಡಿ ಕೊರೊನಾ ಸೋಂಕಿಗೆ ಬಲಿ
September 23, 2020, 9:02 PM

ನವದೆಹಲಿ(reporterkarnataka news): ಕೇಂದ್ರ ಸಚಿವ ಸುರೇಶ್ ಅಂಗಡಿ( 65) ಬುಧವಾರ ಕೊರೊನಾ ಸೋಂಕಿನಿಂದ ನಿಧನರಾದರು.
ನವದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಅವರು ಸಾವನ್ನಪ್ಪಿದ್ದಾರೆ.
ಸುರೇಶ್ ಅಂಗಡಿ ಅವರು ರೈಲ್ವೆ ಖಾತೆಯ ರಾಜ್ಯ ಸಚಿವರು. ಬೆಳಗಾವಿ ಲೋಕಸಭೆ ಕ್ಷೇತ್ರದಿಂದ 4ನೇ ಬಾರಿಗೆ ಸಂಸತ್ ಗೆ ಆಯ್ಕೆಗೊಂಡಿದ್ದರು.