4:36 AM Monday18 - January 2021
ಬ್ರೇಕಿಂಗ್ ನ್ಯೂಸ್
ಜನವರಿ 27, 28 ರಂದು ನಡೆಯಲಿರುವ ಕೋಲಾರ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಆಹ್ವಾನ… ಮಂಗಳೂರಿನಲ್ಲಿ ಮತ್ತೆ ಸದ್ದು ಮಾಡಿದ ಹನಿಟ್ರ್ಯಾಪ್ : ಇಬ್ಬರು ಯುವತಿಯರು ಸೇರಿದಂತೆ 4… ಹಳ್ಳಿ ಹಳ್ಳಿಗೂ ಬಿಜೆಪಿ ಬೇರು ವ್ಯಾಪಿಸಿರುವುದು ಗ್ರಾಮ ಪಂಚಾಯಿತಿ ಚುನಾವಣೆಯಿಂದ ಸಾಬೀತು: ನಳಿನ್… ರಾಜ್ಯವೇ ಬೆಚ್ಚಿ ಬೀಳುವ ರೀತಿಯಲ್ಲಿ ಕಾಂಗ್ರೆಸ್ – ಜೆಡಿಎಸ್ ನೆಲಸಮ: ಬೆಳಗಾವಿ ಸಮಾವೇಶದಲ್ಲಿ… ಮೋದಿ- ಬಿಎಸ್ ವೈ ಜೋಡಿಗೆ ಜನರ ಆಶೀರ್ವಾದ: ಬೆಳಗಾವಿಯಲ್ಲಿ ಗೃಹ ಸಚಿವ ಅಮಿತ್… ವೆನ್ಲಾಕ್ ಆಸ್ಪತ್ರೆಯಲ್ಲಿ ಎಂ ಫ್ರೆಂಡ್ಸ್ ನ ಕಾರುಣ್ಯ ಯೋಜನೆಗೆ ಜಾಗತಿಕ ಬಂಟರ ಸಂಘಗಳ… ಸಚಿವ ಅಂಗಾರ ತವರಿನಲ್ಲಿ ಕಮಲ ಕದನ: ಬಿಜೆಪಿ ಶಕ್ತಿ ಕೇಂದ್ರದಿಂದ ಸುಳ್ಯ ಮಂಡಲ ಸಮಿತಿಗೆ… ಇಟಗಿಹಾಳ: ಮಧ್ಯದಂಗಡಿ ತೆರವಿಗೆ ಆಗ್ರಹಿಸಿ 3ನೇ ಬಾರಿ ಗ್ರಾಮಸ್ಥರಿಂದ ಭಾರಿ ರಸ್ತೆ ತಡೆ… ಕಾಮಾಜೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ವಿವೇಕಾ ಸಂದೇಶ 2021’ ಕಾರ್ಯಕ್ರಮ ರಾಜ್ಯದ ಎಲ್ಲ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರ ನೇಮಕ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ

ಇತ್ತೀಚಿನ ಸುದ್ದಿ

ಕೇಂದ್ರ ಸರಕಾರದ ಕಾರ್ಪೊರೇಟ್‌ ಪರ ನಿಲುವು ವಿರೋಧಿಸಿ ರೈತ ಸಂಘ ಪ್ರತಿಭಟನೆ

December 5, 2020, 7:09 PM

ಶ್ರೀನಿವಾಸಪುರ(reporterkarnataka news): ಕರ್ನಾಟಕ ಪ್ರಾಂತ ರೈತ ಸಂಘದ ಸದಸ್ಯರು ಕೇಂದ್ರ ಸರ್ಕಾರದ ಕಾರ್ಪೊರೇಟ್‌ ಪರ ನಿಲುವು ವಿರೋಧಿಸಿ ಪ್ರಧಾನಿ ಮೋದಿ, ಉದ್ದಿಮೆದಾರ ಮುಖೇಶ್‌ ಅಂಬಾನಿ ಹಾಗೂ ಅದಾನಿ ಅವರ ಪ್ರತಿಕೃತಿ ದಹಿಸಿದರು.

  ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಪಿ.ಆರ್‌.ಸೂರ್ಯನಾರಾಯಣ ಪ್ರತಿಭಟನ ನಿರತ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿ, ಕೇಂದ್ರ ಸರ್ಕಾರ ಕಾರ್ಪೊರೇಟ್ ವಲಯದ ಕೈಗೊಂಬೆಯಾಗಿದೆ. ರೈತರ ಹಿತ ಬಲಿಗೊಟ್ಟು ಕಾರ್ಪೊರೇಟ್‌ ವಲಯದ ಹಿತ ಕಾಯುತ್ತಿದೆ ಎಂದು ಆಪಾದಿಸಿದರು.

  ಕೃಷಿಕರು, ಕೃಷಿ ಕಾರ್ಮಿಕರು ಹಾಗೂ ಕಾರ್ಮಿಕರು ಕಷ್ಟದ ಜೀವನ ನಡೆಸುತ್ತಿದ್ದಾರೆ. ಕೇಂದ್ರ ಸರ್ಕಾರ ರೈತ ಹಾಗೂ ಕಾರ್ಮಿಕ ವಿರೋಧಿ ನಿಲುವು ಹೊಂದಿದೆ. ವಿನಾಕಾರಣ ವಿವಿಧ ಕಾಯ್ದೆಗಳನ್ನು ತಿದ್ದುಪಡಿ ಮಾಡುವುದರ ಮೂಲಕ ಈ ವಲಯವನ್ನು ನಿಕೃಷ್ಟವಾಗಿ ಕಾಣುತ್ತಿದೆ. ಆದರೆ ಕಾರ್ಪೊರೇಟ್‌ ವಲಯಕ್ಕೆ ಕೆಂಪು ಹಾಸಿದೆ ಎಂದು ಹೇಳಿದರು.

   ಸಂಘದ ಜಿಲ್ಲಾ ಘಟಕದ ಉಪಾಧ್ಯಕ್ಷ ಪಾತಕೋಟ ನವೀನ್‌ ಕುಮಾರ್‌, ಮುಖಂಡರಾದ ಎನ್‌. ವೀರಪ್ಪರೆಡ್ಡಿ, ಮೂರ್ತಿ, ಹಾಗೂ ವಿವಿಧ ಕಾರ್ಮಿಕ ಸಂಘಟನೆಗಳ ಮುಖಂಡರರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು