ಇತ್ತೀಚಿನ ಸುದ್ದಿ
ಕೇಂದ್ರ ಸರಕಾರದ ಕೃಷಿ ವಿಧೇಯಕ: ರೈತರ ಜತೆ ಇಂದು ಎಂಟನೇ ಸುತ್ತಿನ ಮಾತುಕತೆ
January 8, 2021, 8:49 AM

ನವದೆಹಲಿ(reporterkarnataka news): ಪ್ರತಿಭಟನಾ ನಿರತ ರೈತರ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಇಂದು ಕೇಂದ್ರ ಸರ್ಕಾರ ಮತ್ತು ರೈತರ ಮಧ್ಯೆ ಎಂಟನೆ ಸುತ್ತಿನ ಮಾತುಕತೆ ನಡೆಯಲಿದೆ.
ಆದರೆ ಈ ಮಾತುಕತೆ ಯಶಸ್ವಿಯಾಗುವ ಸಾಧ್ಯತೆ ಕಡಿಮೆಯಾಗಿದೆ. ಸರ್ಕಾರ ಮೊದಲು ಕೃಷಿ ತಿದ್ದುಪಡಿ ಕಾನೂನು ರದ್ದು ಪಡಿಸಬೇಕು ಎಂದು ರೈತ ಸಂಘಟನೆಗಳು ಆಗ್ರಹಿಸಿವೆ.
ಇಂದು ಮಾತುಕತೆ ವಿಫಲವಾದರೆ ಮುಂದಿನ ದಿನಗಳಲ್ಲಿ ಪ್ರತಿಭಟನೆ ಉಗ್ರ ಸ್ವರೂಪ ಪಡೆಯುವ ಸಾಧ್ಯತೆಗಳಿವೆ.