ಇತ್ತೀಚಿನ ಸುದ್ದಿ
ಕೇರಳದಲ್ಲಿ ಸ್ಥಳೀಯಾಡಳಿತ ಚುನಾವಣೆ: ಇಂದು ನಡೆಯಲಿದೆ ಮತ ಎಣಿಕೆ
December 16, 2020, 9:14 AM

ತಿರುವನಂತಪುರಂ(reporterkarnataka news): ಮೂರು ಹಂತಗಳಲ್ಲಿ ನಡೆದ ಸ್ಥಳೀಯಾಡಳಿತ ಸಂಸ್ಥೆಗಳ ಚುನಾವಣೆ ಮತ ಎಣಿಕೆ ಇಂದು ನಡೆಯಲಿದೆ. ಕಾಸರಗೋಡು ಜಿಲ್ಲೆಯಲ್ಲಿ ಜಿಲ್ಲಾ ಪಂಚಾಯತ್, ನಗರ ಸಭೆ ಮತ್ತು ಗ್ರಾಮ ಪಂಚಾಯತ್ ಗಳಿಗೆ ನಡೆದ ಚುನಾವಣೆಯ ಮತ ಎಣಿಕೆಗೆ ಎಲ್ಲ ಸಿದ್ದತೆ ಮಾಡಲಾಗಿದೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿಲ್ಪಾ ಅವರ ಮಾರ್ಗದರ್ಶನದಲ್ಲಿ ಬಿಗಿ ಭದ್ರೆತೆ ಕೈಗೊಳ್ಳಲಾಗಿದೆ.
ಮಧ್ಯಾಹ್ನದೊಳಗೆ ಫಲಿತಾಂಶ ಪ್ರಕಟವಾಗಲಿದೆ.