ಇತ್ತೀಚಿನ ಸುದ್ದಿ
ಕರಿಪುರಂ ವಿಮಾನ ದುರಂತ: 14 ಮಂದಿ ಗಂಭೀರ, ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚುವ ಭೀತಿ
August 8, 2020, 3:22 AM

ಕಾಸರಗೋಡು(reporterkarnatakanews):
ಕೇರಳದ ಕರಿಪುರಂ ವಿಮಾನ ನಿಲ್ದಾಣದಲ್ಲಿ ಸಂಭವಿಸಿದ ವಿಮಾನ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ ಇನ್ನೂ ಹೆಚ್ಚಾಗುವ ಭೀತಿ ಎದುರಾಗಿದೆ. ಇದುವರೆಗೆ 18 ಮಂದಿ ಮೃತಪಟ್ಟಿದ್ದಾರೆ. ಆದರೆ ದುರಂತದಲ್ಲಿ ಗಾಯಗೊಂಡಿರುವ 14 ಮಂದಿಯ ಸ್ಥಿತಿ ಅತ್ಯಂತ ಗಂಭೀರವಾಗಿದೆ. ಇದು ಆತಂಕ ಸೃಷ್ಟಿಸಿದೆ.
ಈ ಮಧ್ಯೆ ಗಾಯಾಳುಗಳಿಗೆ ಅತ್ಯುತ್ತಮ ಚಿಕಿತ್ಸೆ ಖಾತರಿಪಡಿಸಲಾಗುವುದು ಎಂದು ಮಲಪುರಂ ಜಿಲ್ಲಾಧಿಕಾರಿ ಗೋಪಾಲಕೃಷ್ಣ ತಿಳಿಸಿದ್ದಾರೆ. ಇಂದು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆ ನಡೆಸಿ ಸಂಬಂಧಿಕರಿಗೆ ಹಸ್ತಾಂತರಿಸಲಾಗುವುದು ಎಂದು ಅವರು ಹೇಳಿದ್ದಾರೆ.
ಇದೇ ವೇಳೆ ವಿಮಾನ ದುರಂತ ನಡೆದ ಕೇರಳದ ಕರಿಪುರಂ ವಿಮಾನ ನಿಲ್ದಾಣಕ್ಕೆ ಕೇಂದ್ರ ವಿದೇಶಾಂಗ ಖಾತೆ ರಾಜ್ಯ ಸಚಿವ ವಿ ಮುರಳೀಧರನ್ ಆಗಮಿಸಿದ್ದಾರೆ. ಕೇಂದ್ರ ಸರ್ಕಾರದ ಎಲ್ಲ ನೆರವನ್ನು ಅವರು ಖಾತರಿಪಡಿಸಲಿದ್ದಾರೆ. ದುರಂತ ಕುರಿತು ಉನ್ನತ ಮಟ್ಟದ ತನಿಖೆಗೆ ಕೂಡ ಆದೇಶ ನೀಡಲಾಗಿದೆ. ಮುಂಬೈ ಮತ್ತು ದೆಹಲಿಯಿಂದ ವಿಶೇಷ ವಿಮಾನಗಳಲ್ಲಿ ಅಧಿಕಾರಿಗಳು ಇಂದು ಕರಿಪುರಂ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ.
ಭಾರೀ ಮಳೆಯಿಂದಾಗಿ ವಿಮಾನ ಸ್ಕಿಡ್ ಆದ್ದದೇ ದುರಂತಕ್ಕೆ ಕಾರಣ ಎಂದು ಹೇಳಲಾಗುತ್ತಿದೆ.