ಇತ್ತೀಚಿನ ಸುದ್ದಿ
ರಾಹುಲ್ ಗಾಂಧಿ ನಾಯಕತ್ವಕ್ಕೆ ಬೆಂಬಲ ಘೋಷಿಸಿದ ಮಲ್ಲಿಕಾರ್ಜುನ ಖರ್ಗೆ
August 24, 2020, 2:06 AM

ನವದೆಹಲಿ(reporterkarnataka news): ಕಾಂಗ್ರೆಸ್ ಅಧ್ಯಕ್ಷ ಸ್ಥಾನದಲ್ಲಿ ಸೋನಿಯಾ ಗಾಂಧಿ ಅವರೇ ಮುಂದುವರಿಯಬೇಕು. ಅವರು ಇದಕ್ಕೆ ಸಿದ್ದರಿಲ್ಲದಿದ್ದರೆ ರಾಹುಲ್ ಗಾಂಧಿ ಅವರನ್ನು ಅಧ್ಯಕ್ಷ ಸ್ಥಾನದಲ್ಲಿ ಮುಂದುವರಿಸುವುದೇ ಸೂಕ್ತ. ಪಕ್ಷ ಮತ್ತು ದೇಶಕ್ಕಾಗಿ ಗಾಂಧಿ ಕುಟುಂಬ ಮಾಡಿದ ತ್ಯಾಗವನ್ನು ಯಾರೂ ಮರೆಯಬಾರದು ಎಂದು ಹಿರಿಯ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಮಲ್ಲಿಕಾರ್ಜುನ ಖರ್ಗೆ, ಗಾಂಧಿ ಕುಟುಂಬದ ಮೇಲಿನ ತಮ್ಮ ಅಚಲ ನಿಷ್ಠೆಯನ್ನು ಮತ್ತೊಮ್ಮೆ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಅಧ್ಯಕ್ಷರ ಪದವಿಗೆ ಮಲ್ಲಿಕಾರ್ಜುನ ಖರ್ಗೆ ಅವರ ಹೆಸರು ಕೂಡ ಬಲವಾಗಿ ಕೇಳಿ ಬರುತ್ತಿದೆ.
ಇಂದು ಬೆಳ್ಳಿಗ್ಗೆ 11 ಗಂಟೆಗೆ ಮಹತ್ವದ ಕಾಂಗ್ರೆಸ್ ಕಾರ್ಯಾಕಾರಿ ಸಮಿತಿ ಸಭೆ ನಡೆಯಲಿದೆ. ವರ್ಚುವಲ್ ಸಭೆ ಇದಾಗಲಿದೆ