11:06 AM Friday27 - November 2020
ಬ್ರೇಕಿಂಗ್ ನ್ಯೂಸ್
ಸಂಸದರ ಜತೆ ಇಂದು ಮುಖ್ಯಮಂತ್ರಿ ಯಡಿಯೂರಪ್ಪ ಮಹತ್ವದ ಚರ್ಚೆ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ. ಟಿ. ರವಿ ಕಚೇರಿ ಇಂದು ಉದ್ಘಾಟನೆ ನಿವಾರ್ ಚಂಡಮಾರುತದ ಪ್ರಭಾವ: ಬೆಂಗಳೂರಿನಲ್ಲಿ  ಸೇರಿ 6 ಜಿಲ್ಲೆಗಳಲ್ಲಿ ಯಲ್ಲೊ ಅಲರ್ಟ್  ಕೋವಿಡ್ ಆಸ್ಪತ್ರೆಯಲ್ಲಿ ಬೆಂಕಿ: 5 ಮಂದಿ ರೋಗಿಗಳು ಸಜೀವ ದಹನ, ತನಿಖೆಗೆ ಆದೇಶ ರಾಜ್ಯ ಸಚಿವ ಸಂಪುಟದ ಮಹತ್ವದ ಸಭೆ ಇಂದು: ವಿಜಯ ನಗರ ಜೆಲ್ಲೆ ರಚನೆ… ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ದೇವಳದ ನೂತನ ಮೇಳದ ಪ್ರಥಮ ವರ್ಷದ ತಿರುಗಾಟ 27ರಂ ವಿದ್ಯುತ್ ಸಂಪರ್ಕವೇ ಕಾಣದ 2 ಮನೆಗಳಿಗೆ  ಕೊನೆಗೂ ಬಂತು ಬೆಳಕು ! ಶ್ರೀನಗರದಲ್ಲಿ ಭದ್ರತಾ ಪಡೆಯ ಮೇಲೆ ಭಯೋತ್ಪಾದಕರ ದಾಳಿ: ಸ್ಥಳಕ್ಕೆ ಹೆಚ್ಚುವರಿ ಸೇನೆ ಚಿಕ್ಕಬಳ್ಳಾಪುರದ ಬಳಿ ಕಾರುಗಳಿಗೆ ಡಿಕ್ಕಿ ಹೊಡೆದು ಅಂಗಡಿಗೆ ನುಗ್ಗಿದ  ಕ್ಯಾಂಟರ್ : ನಾಲ್ವರ… ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ: ನಾಳೆ ಸಂಸದರ ಸಭೆ ಕರೆದ ಸಿಎಂ ಯಡಿಯೂರಪ್ಪ

ಇತ್ತೀಚಿನ ಸುದ್ದಿ

ಕಿರಿಕ್ ಪಾರ್ಟಿ’ ಸಂಯುಕ್ತ ಹೆಗಡೆ ಪರ ಚಿತ್ರನಟಿ ರಮ್ಯಾ ಬ್ಯಾಟಿಂಗ್: ನೈತಿಕ ಪೊಲೀಸ್ ಗಿರಿಗೆ ಟೀಕೆ

September 7, 2020, 11:43 AM

ಬೆಂಗಳೂರು(reporterkarnataka news): ಸ್ಯಾಂಡಲ್ ವುಡ್ ಕ್ವೀನ್, ಕಾಂಗ್ರೆಸ್ ನಾಯಕಿ ರಮ್ಯಾ ಅವರು ಕಿರಿಕ್ ಪಾರ್ಟಿ ನಟಿ ಸಂಯುಕ್ತಾ ಹೆಗಡೆ ಪರ ಬ್ಯಾಟಿಂಗ್ ಮಾಡಿದ್ದಾರೆ. ಕಾರಣ ಏನೇ ಇದ್ದರೂ ನೈತಿಕ ಪೊಲೀಸ್ ಗಿರಿ, ಇನ್ನೊಬ್ಬರ ನಿಂದನೆ ಮಾನವ ಹಕ್ಕುಗಳ ಉಲ್ಲಂಘನೆ ಎಂದು ಖಡಕ್ ಆಗಿ ಪ್ರತಿಕ್ರಿಯಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ನಟಿ ಸಂಯುಕ್ತ ಹೆಗ್ಡೆ ಅವರು ಹಾಕಿದ ವೀಡಿಯೊ ಕ್ಲಿಪಿಂಗ್ 

ಪೂರ್ತಿ ನೋಡಿದ್ದೇನೆ. ಸಂಯುಕ್ತ ಹೆಗ್ಡೆ ಮತ್ತು ಆಕೆಯ ಗೆಳತಿಯರನ್ನು ನಡೆಸಿಕೊಂಡ ರೀತಿ ನೋಡಿ ನನಗೆ ಶಾಕ್ ಆಗಿದೆ. ಕಾರಣ ಏನೇ ಇರಬಹುದು. ಆದರೆ ನೈತಿಕ ಪೊಲೀಸ್ ಗಿರಿ ಮತ್ತು ಇನ್ನೊಬ್ಬರನ್ನ ನಿಂದನೆ ಮಾಡುವ ಹಕ್ಕು ಯಾರಿಗೂ ಇಲ್ಲ ಎಂದು ನಟಿ ರಮ್ಯಾ ತಮ್ಮ ಅನಿಸಿಕೆಯನ್ನು ಹೇಳಿಕೊಂಡಿದ್ದಾರೆ.

ಸಂಯುಕ್ತ ಹೆಗಡೆ ಅವರನ್ನು ನಿಂದಿಸಿದ ಕವಿತಾ ಗೌಡ ಅವರು ಸ್ವಪಕ್ಷೀಯರೇ ಆದರೂ ರಮ್ಯಾ ಅವರ ಬೆಂಬಲಕ್ಕೆ ನಿಲ್ಲದಿರುವುದು ಮತ್ತು ನೈತಿಕ ಪೊಲೀಸ್ ಗಿರಿಯನ್ನು ಖಂಡಿಸಿರುವುದು ಎಲ್ಲರಿಗೂ ಖುಷಿಕೊಟ್ಟಿದೆ. ಚಿತ್ರನಟ ಜಗ್ಗೇಶ್ ಅವರು ಕೂಡ ಸಂಯುಕ್ತ ಹೆಗಡೆ ಪರ ನಿಂತಿದ್ದಾರೆ. ಈ ನಡುವೆ ಕವಿತಾ ಗೌಡ ಅವರು ಕ್ಷಮೆಯಾಚಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು