ಇತ್ತೀಚಿನ ಸುದ್ದಿ
ಡ್ಯಾನ್ಸರ್ ಕಿಶೋರ್ ಶೆಟ್ಟಿ ಸ್ನೇಹಿತೆ ಪೊಲೀಸ್ ವಶದಲ್ಲಿ?
September 22, 2020, 10:43 AM

ಮಂಗಳೂರು(reporterkarnataka news): ಮಾದಕ ದ್ರವ್ಯ ಜಾಲಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರು ಬಂಧಿಸಿರುವ ಡ್ಯಾನ್ಸರ್ ಕಿಶೋರ್ ಶೆಟ್ಟಿ ಸ್ನೇಹಿತೆ ಎನ್ನಲಾದ ಯುವತಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ವರದಿಯಾಗಿದೆ. ಆದರೆ ಈ ಕುರಿತು ಯಾವುದೇ ಅಧಿಕೃತ ಹೇಳಿಕೆ ಬಿಡುಗಡೆಮಾಡಿಲ್ಲ.
ಯುವತಿ ಮಣಿಪುರ ಮೂಲದವಳು ಮತ್ತು ನಗರದ ಸ್ಪಾ ಒಂದರಲ್ಲಿ ಕೆಲಸ ಮಾಡುತ್ತಿದ್ದಳು ಎಂದು ಹೇಳಲಾಗಿದೆ. ಲಾಕ್ ಡೌನ್ ಸಂದರ್ಭದಲ್ಲಿ ಕಿಶೋರ್ ಶೆಟ್ಟಿ ಆಯೋಜಿಸಿದ್ದ ಪಾರ್ಟಿಯಲ್ಲಿ ಈ ಯುವತಿ ಕೂಡ ಭಾಗವಹಿಸಿದ್ದಳು ಎಂಬ ಆರೋಪ ಕೇಳಿ ಬಂದಿದೆ.
ನಗರದಲ್ಲಿ ಲಾಕ್ ಡೌನ್ ಸಂದರ್ಭದಲ್ಲಿ ಪಾರ್ಟಿ ಆಯೋಜಿಸಲಾಗಿತ್ತೇ ಎಂಬ ಬಗ್ಗೆ ಆ ಯುವತಿಯನ್ನು ವಿಚಾರಣೆಗೆ ಗುರಿಪಡಿಸುವ ಸಾಧ್ಯತೆಯಿದೆ.