10:36 PM Friday4 - December 2020
ಬ್ರೇಕಿಂಗ್ ನ್ಯೂಸ್
ಮತ್ತೆ ನರ್ತಿಸಲಿದೆ ಕದ್ರಿ ಸಂಗೀತ ಕಾರಂಜಿ: ಶನಿವಾರ,  ಭಾನುವಾರ ಸಾರ್ವಜನಿಕ ವೀಕ್ಷಣೆಗೆ ಅವಕಾಶ ಕದ್ರಿ –… ದಿಲ್ಲಿಯಲ್ಲಿ ರೈತರ ಮೇಲಿನ ದೌರ್ಜನ್ಯ ಖಂಡಿಸಿ  ಶ್ರೀನಿವಾಸಪುರದಲ್ಲಿ ರಸ್ತೆ ತಡೆದು ಪ್ರತಿಭಟನೆ ಮಾಜಿ ಮೇಯರ್, ಕಾಂಗ್ರೆಸ್ ಹಿರಿಯ ನಾಯಕ, ಸಜ್ಜನ ರಾಜಕಾರಣಿ ಕೆ.ಕೆ. ಮೆಂಡನ್ ಇನ್ನಿಲ್ಲ ದೇಶದ ಜನರಿಗೆ ಶೀಘ್ರವೇ ಕೊರೊನಾ ಲಸಿಕೆ ಸಿದ್ಧ:  ಸರ್ವಪಕ್ಷಗಳ ಸಭೆಯಲ್ಲಿ ಪ್ರಧಾನಿ ಮೋದಿ… ಕನಕ ದಾಸರ ಸಂದೇಶ ಸಮಾಜದ ಕಣ್ಣು ತೆರೆಸುವಂತಿದೆ: ತಹಶೀಲ್ದಾರ್‌ ಎಸ್‌.ಎಂ.ಶ್ರೀನಿವಾಸ್‌ ಅನಾಥ ಮಕ್ಕಳ್ಳನ್ನು ಸ್ವಂತ ಮಕ್ಕಳಂತೆ ಕಾಣುವ ಮೂಲಕ ಉತ್ತಮ ಭವಿಷ್ಯ ರೂಪಿಸಿ: ಡಾ.ಶಾಂತ ಜಾತಿಯ ಹೆಸರಲ್ಲಿ ನಡೆಯುವ ಶೋಷಣೆ ಸಮಾಜ ಹಿತಕ್ಕೆ ಮಾರಕ: ಕುರುಬರ ಅಧ್ಯಕ್ಷ ಎಂ.ವೇಮಣ್ಣ  ಹಿಂಸಾಚಾರ: ಶಿವಮೊಗ್ಗದಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿ, ಬಿಗಿ ಬಂದೋಬಸ್ತ್  ಮಾರಕ ಕೊರೊನಾಕ್ಕೆ ಒಂದೇ ದಿನ 540 ಮಂದಿ ಬಲಿ: 42, 916 ಮಂದಿ… ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆ: 30 ವಾರ್ಡ್ ಗಳಲ್ಲಿ ಬಿಜೆಪಿ ಮುನ್ನಡೆ

ಇತ್ತೀಚಿನ ಸುದ್ದಿ

18 ರಂದು ಕೆಎಂಎಫ್ ವತಿಯಿಂದ ಮಂಗಳೂರು ಡೈರಿಯಲ್ಲಿ ಕೌಶಲ್ಯಾಭಿವೃದ್ಧಿ ದಿನಾಚರಣೆ

November 16, 2020, 2:15 PM

ಮಂಗಳೂರು (reporterkarnataka news)): ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿಯಮಿತ ಮಂಗಳೂರು ಮತ್ತು ದ.ಕ ಜಿಲ್ಲಾಸಹಕಾರಿ ಯೂನಿಯನ್ ನ ಸಂಯುಕ್ತ ಆಶ್ರಯದಲ್ಲಿ 67ನೇ ಅಖಿಲ ಭಾರತ ಸಹಕಾರಿ ಸಪ್ತಾಹದ ಅಂಗವಾಗಿ ‘ಕೊರೋನಾ ಸೋಂಕು-ಆತ್ಮನಿರ್ಭರ  ಭಾರತ -ಸಹಕಾರ ಸಂಸ್ಥೆಗಳು’ ಎಂಬ ಧ್ಯೇಯಯೊಂದಿಗೆ ‘ವ್ಯವಹಾರ ಉದ್ಯೋಗ ಕಳೆದುಕೊಂಡವರು, ಭಾಧಿತರು ಪುನರುದ್ಯೋಗಸ್ಥರಾಗಲು ಕೌಶಲ್ಯಾಭಿವೃದ್ಧಿ’ ದಿನಾಚರಣೆ ನವೆಂಬರ್ 18 ರಂದು ಬೆಳಿಗ್ಗೆ 10.30 ಕ್ಕೆ ಮಂಗಳೂರು ಕುಲಶೇಖರ ಡೇರಿ ಆವರಣದಲ್ಲಿ ನಡೆಯಲಿದೆ.

ಮಂಗಳೂರು ದಕ್ಷಿಣ ವಿಧಾನಸಭಾ ಶಾಸಕ ವೇದವ್ಯಾಸ ಡಿ. ಕಾಮತ್ ಸಹಕಾರ ಸಪ್ತಾಹದ ಉದ್ಘಾಟನೆ ಮಾಡಲಿದ್ದಾರೆ.ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಂಡಳಿಯ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್ ನಂದಿನಿ ಅನ್ ವೀಲ್ಸ್ ವಾಹನಕ್ಕೆ ಚಾಲನೆ ನೀಡಲಿದ್ದಾರೆ. ಮಂಗಳೂರು ಹಾಲು ಒಕ್ಕೂಟದ ಅಧ್ಯಕ್ಷ ರವಿರಾಜ ಹೆಗ್ಡೆ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು