9:23 AM Sunday17 - January 2021
ಬ್ರೇಕಿಂಗ್ ನ್ಯೂಸ್
ಇಟಗಿಹಾಳ: ಮಧ್ಯದಂಗಡಿ ತೆರವಿಗೆ ಆಗ್ರಹಿಸಿ 3ನೇ ಬಾರಿ ಗ್ರಾಮಸ್ಥರಿಂದ ಭಾರಿ ರಸ್ತೆ ತಡೆ… ಕಾಮಾಜೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ವಿವೇಕಾ ಸಂದೇಶ 2021’ ಕಾರ್ಯಕ್ರಮ ರಾಜ್ಯದ ಎಲ್ಲ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರ ನೇಮಕ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ ಭದ್ರಾವತಿ: ಕ್ಷಿಪ್ರ ಕಾರ್ಯಪಡೆ ಕಚೇರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೂಮಿ… ಕೊರೊನಾ ತಡೆಗೆ ಸ್ವದೇಶಿ ವ್ಯಾಕ್ಸಿನ್ ಭಾರತದ ಸಾಧನೆಯ ಪ್ರತೀಕ: ಪ್ರಧಾನಿ ನರೇಂದ್ರ ಮೋದಿ ಲಿಂಗಸುಗೂರು: ಕೋವಿಡ್ 19 ಲಸಿಕೆ ಬಾಕ್ಸ್ ಗೆ ಪೂಜೆ ಸಲ್ಲಿಸಿ ಬರಮಾಡಿಕೊಂಡ ತಾಲೂಕು… ಬ್ಲ್ಯಾಕ್ ಮೇಲ್ ಮಾಡಿ ಮಂತ್ರಿ ಸ್ಥಾನ: ಹಾಲಿ ನ್ಯಾಯಾಧೀಶರಿಂದ ನ್ಯಾಯಾಂಗ ತನಿಖೆಗೆ ಎಸ್.… ಮಲ್ಪೆಯಲ್ಲಿ ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ್ದ ಬೋಟ್ ನಿಂದ ಬಿದ್ದು ಮೀನುಗಾರ ಸಾವು ಸರಕಾರಿ ನೌಕರರ ಕ್ರೀಡಾಕೂಟದಲ್ಲಿ ಮಹಿಳಾ ಸಿಬ್ಬಂದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಕೋಲಾರ ಜಿಲ್ಲಾಧಿಕಾರಿ… ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷರಾಗಿ  ದೇರಳಕಟ್ಟೆ ರೆಂಜಡಿಯ ಡಾ. ಅಬ್ದುಲ್ ಶಕೀಲ್ ನೇಮಕ

ಇತ್ತೀಚಿನ ಸುದ್ದಿ

ಕೋಲಾರ: 100 ಆಟೋರಿಕ್ಷಾ ಚಾಲಕರಿಗೆ ಸಮವಸ್ತ್ರ ವಿತರಣೆಗೆ ಚಾಲನೆ 

December 27, 2020, 10:15 AM

ಕೋಲಾರ(reporterkarnataka news): ಆಟೋ ಚಾಲಕರು ಸಮವಸ್ತ್ರ ಧರಿಸಿ ಶಿಸ್ತು ಕಾಪಾಡಬೇಕು, ಕಾನೂನನ್ನು ಗೌರವಿಸಬೇಕು, ಕೊರೊನಾದಿಂದ ಆರೋಗ್ಯ ಕಾಪಾಡಿಕೊಳ್ಳಬೇಕೆಂದು ಮಾಜಿ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು.

ನಗರದ ಶ್ರೀಸತ್ಯಸಾಯಿ ಮಂದಿರದಲ್ಲಿ ಶನಿವಾರ ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ಘಟಕದ ಅಧ್ಯಕ್ಷ ಕೆ.ಜಯದೇವ್‍ರ 53 ನೇ ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ಭಾಗವಹಿಸಿ, ನೂರು ಆಟೋ ಚಾಲಕರಿಗೆ ಸಮವಸ್ತ್ರವಿತರಣೆಗೆ ಚಾಲನೆ ನೀಡಿ ಅವರು ಮಾತನಾಡುತ್ತಿದ್ದರು.

ಕೊರೊನಾ ಕಾಲದಲ್ಲಿ ಆಟೋ ಚಾಲಕರು ಸೇರಿದಂತೆ ಸಾರ್ವಜನಿಕವಾಗಿ ಕೆಲಸ ಮಾಡುತ್ತಿರುವ ಕೃಷಿ ಕೂಲಿ ಕಾರ್ಮಿಕರು ಹಾಗೂ ಚಾಲಕರು ಆರೋಗ್ಯ ಕಾಪಾಡಿಕೊಳ್ಳುವತ್ತ ಗಮನಹರಿಸಬೇಕು. ಕೊರೊನಾ ಎರಡನೇ ಹಂತದ ಅಲೆ ಬರುವ ಸೂಚನೆಗಳಿದ್ದು, ಇದನ್ನು ಕೋವಿಡ್ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವ ಮೂಲಕ ಸಮರ್ಥವಾಗಿ ಹಿಮ್ಮೆಟ್ಟಿಸಬೇಕೆಂದರು.

ಬಹಳಷ್ಟು ಆಟೋಚಾಲಕರು ಶಾಲಾ ಮಕ್ಕಳನ್ನು ಬೆಳಿಗ್ಗೆ ಸಂಜೆ ಶಾಲೆಗೆ ಕರೆದೊಯ್ಡು ಮನೆಗೆ ಸೇರಿಸುವ ಜವಾಬ್ದಾರಿಯನ್ನು ಹೊತ್ತುಕೊಂಡಿರುತ್ತಾರೆ, ಪ್ರತಿ ಮಗುವು ತನ್ನ ಆಟೋ ಚಾಲಕ ಹೇಗೆ ರಸ್ತೆ ನಿಯಮಗಳನ್ನು ಪಾಲಿಸುತ್ತಿದ್ದಾರೆ ಎನ್ನುವುದನ್ನು ಗಮನಿಸುತ್ತಿರುತ್ತಾರೆ. ಅದ್ದರಿಂದ ಆಟೋ ಚಾಲಕರು ರಸ್ತೆ ನಿಯಮಗಳನ್ನು ಕಟ್ಟು ನಿಟ್ಟಾಗಿ ಪಾಲಿಸುವ ಮೂಲಕ ಯುವ ಪೀಳಿಗೆಯ ವಿದ್ಯಾರ್ಥಿಗಳಿಗೆ ಮಾರ್ಗದರ್ಶಕರಾಗಬೇಕೆಂದು ಕಿವಿ ಮಾತು ಹೇಳಿದರು.

ಇದೇ ಸಂದರ್ಭದಲ್ಲಿ ಶ್ರೀ ಸತ್ಯಸಾಯಿ ಮಂದಿರದಲ್ಲಿ ಕೆ.ಜಯದೇವ್‍ರ ಹುಟ್ಟುಹಬ್ಬರ ಪ್ರಯುಕ್ತ ವಿಶೇಷ ಪೂಜೆಯನ್ನು ಏರ್ಪಡಿಸಲಾಗಿತ್ತು.

ನಂತರ ನಡೆದ ಸಮಾರಂಭದಲ್ಲಿ ಬೃಹತ್ ಗಾತ್ರದ ಕೇಕು ಕತ್ತರಿಸುವ ಮೂಲಕ ಕೆ.ಜಯದೇವ್ ಹುಟ್ಟು ಹಬ್ಬವನ್ನು ಆಚರಿಸಿಕೊಂಡರು. ಸಾಯಿಮಂದಿರದ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂರು ಮಂದಿ ಆಟೋ ಚಾಲಕರಿಗೆ ಮಾಜಿ ಸಚಿವ ಕೆ.ಎಚ್.ಮುನಿಯಪ್ಪ ಸಮವಸಗಳನ್ನು ವಿತರಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಮುಖಂಡರಾದ ಕುಮಾರ್, ನಾಗರಾಜ್, ಗುಪ್ತ, ಕೆಜಿಎಫ್‍ನ ಜಾನ್, ವಿ.ಕೆ.ರಾಜೇಶ್, ಸಂತೋಷ್, ಕನ್ನಡ ಮಿತ್ರ ವೆಂಕಟಪ್ಪ, ಮಹಾನ್ ನಾರಾಯಣಸ್ವಾಮಿ, ಚೇತನ್‍ಬಾಬು, ಖಾದ್ರಿಪುರ ಬಾಬು, ಪ್ಯಾರೇಜಾನ್, ಇಕ್ಬಾಲ್, ಗೋಕುಲ ಮಿತ್ರಬಳಗದ ಆರ್.ಗೋಪಾಲ್, ಮುನಿವೆಂಕಟಯಾದವ್, ಮಣಿ, ಜ್ಯೂಸ್ ನಾರಾಯಣಸ್ವಾಮಿ, ಕೋಡಿಕಣ್ಣೂರು ಯಲ್ಲಪ್ಪ ಮತ್ತು ಜಯದೇವ್ ಕುಟುಂಬದವರು ಹಾಜರಿದ್ದರು.

ಕೋಲಾರ ನಗರದ ಶ್ರೀಸತ್ಯಸಾಯಿ ಮಂದಿರದಲ್ಲಿ ಗುರುವಾರ ಕಾಂಗ್ರೆಸ್ ಎಸ್ಸಿ ಘಟಕದ ಜಿಲ್ಲಾಧ್ಯಕ್ಷ ಕೆ.ಜಯದೇವ್ 53 ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ಮಾಜಿ ಸಚಿವ ಕೆ.ಎಚ್.ಮುನಿಯಪ್ಪ ನೂರು ಮಂದಿ ಆಟೋ ಚಾಲಕರಿಗೆ ಸಮವಸ್ತ್ರ ವಿತರಿಸುವ ಕಾರ್ಯಕ್ಕೆ ಚಾಲನೆ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು