10:25 AM Sunday7 - March 2021
ಬ್ರೇಕಿಂಗ್ ನ್ಯೂಸ್
ಕುಂಬಳ ಕಾಯಿ ಕಳ್ಳ ಗಾದೆ: ಸೆಕ್ಸ್ ಸಿಡಿ ಬಳಿಕ ತಡೆಯಾಜ್ಞೆ ಕೋರುವ ಸಚಿವರ ಸಂಖ್ಯೆ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ದೆಹಲಿ ಖಾಸಗಿ ಆಸ್ಪತ್ರೆಗೆ ಸಂಸದ ಅನಂತ ಕುಮಾರ್ ಹೆಗಡೆ ದಾಖಲು: ಕಾಲಿಗೆ ಶಸ್ತ್ರ… ತಮಿಳುನಾಡು ವಿಧಾನಸಭೆ ಚುನಾವಣೆ: 243 ಸ್ಥಾನಗಳ ಪೈಕಿ ಬಿಜೆಪಿ 20 ಸ್ಥಾನಗಳಲ್ಲಿ ಸ್ಪರ್ಧೆ?… ಅಸ್ಸಾಂ: 126 ಸ್ಥಾನಗಳಲ್ಲಿ ಬಿಜೆಪಿ 92ರಲ್ಲಿ ಸ್ಪರ್ಧೆ?: ಮಿಕ್ಕ ಸೀಟುಗಳು ಮಿತ್ರ ಪಕ್ಷಕ್ಕೆ? ಹೊರ ದೇಶದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಮೂಡುಗೆರೆಯ ಕುಮಾರ್: ನೆರವಿಗೆ ಬಂದ ಕೆಸಿಎಫ್ ಸೌದಿ… ಕೇರಳ ಬಿಜೆಪಿ ಸಿಎಂ ಕ್ಯಾಂಡಿಡೇಟ್: ಬಿಜೆಪಿ ಹೈಕಮಾಂಡ್ ಇನ್ನೂ ಘೋಷಣೆ ಮಾಡಿಲ್ವಂತೆ! ಸೆಕ್ಸ್ ಸಿಡಿ ಬಳಿಕ ಸಂಕಟದಲ್ಲಿ ಸಾಲು ಸಾಲು ಸಚಿವರು: ಮಾನಹಾನಿ ವರದಿ ತಡೆಯುವಂತೆ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ಡಾ. ಎಂ. ಮೋಹನ್ ಆಳ್ವರಿಗೆ ಕವಿ, ಸಜ್ಜನ ರಾಜಕಾರಣಿ ಬಿ.ಎಂ.ಇದಿನಬ್ಬ ಗೌರವ ಪ್ರಶಸ್ತಿ ಪ್ರದಾನ 

ಇತ್ತೀಚಿನ ಸುದ್ದಿ

ಬೇಡಿಕೆ ಆಗ್ರಹಿಸಿ ಕೋಲಾರ ಜಿಲ್ಲಾ ಮಾಜಿ ಯೋಧರ ಟ್ರಸ್ಟ್ ಸದಸ್ಯರ ಆಗ್ರಹ

November 12, 2020, 9:38 PM

ಶ್ರೀನಿವಾಸಪುರ(reporterkarnataka news): ಇಲ್ಲಿನ ತಾಲ್ಲೂಕು ಕಚೇರಿ ಎದುರು ಬುಧವಾರ ಜಿಲ್ಲಾ ಮಾಜಿ ಯೋಧರ ಟ್ರಸ್ಟ್‌ ಸದಸ್ಯರು ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರವನ್ನು ಆಗ್ರಹಿಸಿ ಧರಣಿ ನಡೆಸಿದರು.

  ಟ್ರಸ್ಟ್‌ನ ಜಿಲ್ಲಾ ಘಟಕದ ಅಧ್ಯಕ್ಷ ಜಗನ್ನಾಥ್‌ ಧರಣಿ ನಿರತ ನಿವೃತ್ತ ಯೋಧರನ್ನು ಉದ್ದೇಶಿಸಿ ಮಾತನಾಡಿ, ದೇಶಕ್ಕಾಗಿ ಜೀವದ ಮೇಲಿನ ಹಂಗು ತೊರೆದು ಹೋರಾಡಿ ನಿವೃತ್ತರಾದ ಯೋಧರ ಪರಿಸ್ಥಿತಿ ತೃಪ್ತಿಕರವಾಗಿಲ್ಲ. ಸರ್ಕಾರ ನಿವೃತ್ತ ಯೋಧರ ಕ್ಷೇಮಾಭಿವೃದ್ಧಿಗೆ ಪೂರಕವಾದ ಯೋಜನೆಗಳನ್ನು ಹಾಕಿಕೊಳ್ಳುತ್ತಿಲ್ಲ. ಇದು ದುರದೃಷ್ಟಕರ ಎಂದು ಹೇಳಿದರು.

  ದೇಶಕ್ಕಾಗಿ ಶ್ರಮಿಸಿದ ಮಾಜಿ ಯೋಧರ ಜೀವನ ನಿರ್ವಹಣೆ ಕಷ್ಟಕರವಾಗಿದೆ. ಹಾಗಾಗಿ ಅವರಿಗೆ ಕೃಷಿ ಕೈಗೊಳ್ಳಲು ಅಗತ್ಯವಾದ ಜಮೀನು ಮಂಜೂರು ಮಾಡಬೇಕು. ಮನೆಗಳನ್ನು ನಿರ್ಮಿಸಿ ಕೊಡಬೇಕು. ಅವರ ಮಕ್ಕಳ ವಿದ್ಯಾಭ್ಯಾಸಕ್ಕೆ ವಿಶೇಷ ಯೋಜನೆ ರೂಪಿಸಿ ಜಾರಿಗೆ ತರಬೇಕು ಎಂದು ಒತ್ತಾಯಿಸಿದರು.

    ತಮ್ಮ ಬೇಡಿಕೆಗಳನ್ನು ಒಳಗೊಂಡ ಮನವಿ ಪತ್ರವನ್ನು ತಹಶೀಲ್ದಾರ್‌ ಎಸ್.ಎಂ.ಶ್ರೀನಿವಾಸ್‌ ಅವರಿಗೆ ನೀಡಲಾಯಿತು. ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಸ್‌.ಆನಂದ್‌ ಇದ್ದರು.

  ನಿವೃತ್ತ ಯೋಧರ ಟ್ರಸ್ಟ್‌ ಮುಖಂಡರಾದ ಎನ್‌.ಅಮರನಾಥ್‌, ಎಂ.ರಾಜಣ್ಣ, ಎನ್‌.ನಾಗರಾಜ್‌, ಕೃಷ್ಣಮೂರ್ತಿ, ಕೇಶವಮೂರ್ತಿ, ರಮೇಶ್‌, ಶ್ರೀನಿವಾಸ್‌, ಪಿ.ಕೃಷ್ಣಯ್ಯ, ಸುರೇಶ್‌ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು