1:49 PM Tuesday26 - January 2021
ಬ್ರೇಕಿಂಗ್ ನ್ಯೂಸ್
ಎಸ್‌ಡಿಪಿಐ ವತಿಯಿಂದ ಗಣರಾಜ್ಯೋತ್ಸವ ಪ್ರಯುಕ್ತ ರೈತ ಐಕ್ಯತಾ ಸಂಗಮ ಬಿಗ್ ಬಾಸ್ ಖ್ಯಾತಿಯ ನಟಿ ಜಯಶ್ರೀ ರಾಮಯ್ಯ ಆತ್ಮಹತ್ಯೆ: ಕುಟುಂಬದ ಸಮಸ್ಯೆ ಕಾರಣ? ಮಂಗಳೂರಿನ ನರ್ಸಿಂಗ್ ಕಾಲೇಜಿನ 4 ಮಂದಿ ವಿದ್ಯಾರ್ಥಿನಿಯರಿಗೆ ಕೊರೊನಾ: ಪಾಲಕರಲ್ಲಿ ಮತ್ತೆ ಭೀತಿ… ಗಣರಾಜ್ಯೋತ್ಸವ ಪರೇಡ್ ಗೆ ಆಯ್ಕೆಯಾದ ಕರ್ನಾಟಕದ ಟ್ಲಾಬ್ಲೊದಲ್ಲಿ ಕನ್ನಡ ಧ್ವಜ ನಾಪತ್ತೆ ಕಟೀಲು ಮೇಳ ಸೇವೆ ಆಟಗಳು:  ಇಂದು ಎಲ್ಲೆಲ್ಲಿ?  ನೀವೇ ನೋಡಿ ಬಡವರನ್ನು ಬೀದಿ ಪಾಲು ಮಾಡಿದರೆ ಜೋಕೆ: ಪಾಲಿಕೆಗೆ ಇಂಟಕ್ ರಾಷ್ಟ್ರೀಯ ಕಾರ್ಯದರ್ಶಿ ರಾಕೇಶ್… ವಿ.ವಿ ಕಾಲೇಜಿನಲ್ಲಿ ಪ್ರೌಢ ಶಾಲಾ ರಾಷ್ಟ್ರೀಯ ಸೇವಾಯೋಜನೆಯ ಯೋಜನಾಧಿಕಾರಿಗಳಿಗೆ ರಾಜ್ಯ ಮಟ್ಟದ ಕಾರ್ಯಾಗಾರ ಬಲ್ಯ ಸಮೀಪ ಕಾರು- ಬೊಲೆರೋ ಅಪಘಾತ:  ಒಬ್ಬ ಸಾವು, 4 ಮಂದಿ ತೀವ್ರ… ಕಾಸರಗೋಡು: ಮೆಡಿಕಲ್ ಶಾಪ್ ಗೆ ಔಷಧ ಖರೀದಿಸಲು ಬಂದ ವ್ಯಕ್ತಿಯನ್ನು ಗುಂಪೊಂದು ಥಳಿಸಿ… ಕಾಳು ಹಾಕಿ ಕೋಳಿ ಕದಿಯುವ ಭಿಕ್ಷುಕರಿದ್ದಾರೆ ಎಚ್ಚರಿಕೆ: ನಿಮ್ಮ ಮನೆಗೂ ಬಂದಾರು ಜೋಕೆ!…

ಇತ್ತೀಚಿನ ಸುದ್ದಿ

ಸಂಪುಟ ವಿಸ್ತರಣೆ ಕಸರತ್ತು: ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ದಿಲ್ಲಿಗೆ ದೌಡು, ರಾತ್ರಿ ಬೆಂಗಳೂರಿಗೆ

August 18, 2020, 11:55 AM

ಮಂಗಳೂರು(reporterkarnataka news): ರಾಜ್ಯ ಸಚಿವ ಸಂಪುಟ ವಿಸ್ತರಣೆ ವಿಷಯ ಮತ್ತೆ ಮುನ್ನಲೆಗೆ ಬಂದಿದೆ. ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ, ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ. ರವಿ ಸೇರಿದಂತೆ ಹಲವು ಮಂದಿ ಸಚಿವರು ದಿಲ್ಲಿಗೆ ದೌಡಾಯಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಕೂಡ ದಿಲ್ಲಿಗೆ ಪಯಣಿಸಿದ್ದಾರೆ. 

ಕೆಲವರು ಖಾತೆ ಬದಲಾಯಿಸಲು ದಿಲ್ಲಿ ಯಾತ್ರೆ ಕೈಗೊಂಡರೆ ಇನ್ನು ಕೆಲವರು ಸಚಿವ ಸ್ಥಾನ ಉಳಿಸಲು ದಂಡಯಾತ್ರೆ ಕೈಗೊಂಡಿದ್ದಾರೆ.

ರಾಜ್ಯದಲ್ಲಿ ಈ ಹಿಂದೆ ಇದ್ದ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಸರಕಾರವನ್ನು ಪದಚ್ಯುತಗೊಳಿಸಿ ಬಿಜೆಪಿ ಸರಕಾರ ರಚಿಸುವುದರಲ್ಲಿ ಪ್ರಧಾನ ಭೂಮಿಕೆ ನಿರ್ವಹಿಸಿದ

ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ‌ ಅವರು ಉಪ ಮುಖ್ಯಮಂತ್ರಿ ಸ್ಥಾನ ಪಡೆಯಲು ಕಸರತ್ತು ನಡೆಸುತ್ತಿದ್ದಾರೆ. ಅದಕ್ಕಾಗಿ ದೆಹಲಿ ಭೇಟಿ ನಡೆಸಿದ್ದಾರೆ. ಇದು ಅವರ ನಾಲ್ಕನೇ ಭೇಟಿಯಾಗಿದೆ. 

ಬಿಜೆಪಿಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.‌ ಸಂತೋಷ್ ಮತ್ತು ರಾಜ್ಯದಿಂದ ಕೇಂದ್ರ ಸಚಿವರಾಗಿರುವ ಡಿ.ವಿ.‌ ಸದಾನಂದಗೌಡ, ಪ್ರಹ್ಲಾದ್ ಜೋಷಿ ಮತ್ತು ಸುರೇಶ್ ಅಂಗಡಿ ಅವರನ್ನು ಭೇಟಿ ಮಾಡಿ 

ಈಗಾಗಲೇ ಉಪ ಮುಖ್ಯಮಂತ್ರಿ ಸ್ಥಾನಕ್ಕೆ ಬೇಡಿಕೆ ಇಟ್ಟಿದ್ದಾರೆ. ಇದೀಗ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿಯಾಗಲಿದ್ದಾರೆ. ಕಾಂಗ್ರೆಸ್ ‌ಪಕ್ಷದಿಂದ ಶಾಸಕರನ್ನು ಸೆಳೆದು ಸರಕಾರ ರಚಿಸುವಾಗ ಜಾರಕಿಹೊಳಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡುವ ವಾಗ್ದಾನ ಮಾಡಲಾಗಿತ್ತು ಎನ್ನಲಾಗಿದೆ. 

ಇನ್ನು ಕರಾವಳಿ ಜಿಲ್ಲೆಗೆ ಸಂಬಂಧಿಸಿದಂತೆ ಸಂಪುಟ ವಿಸ್ತರಣೆಯ ವೇಳೆ ದಕ್ಷಿಣ ಕನ್ನಡ ಜಿಲ್ಲೆಯ ಹಿರಿಯ ಶಾಸಕ ಸುಳ್ಯದ ಎಸ್. ಅಂಗಾರ ಅವರಿಗೆ ಸಚಿವ ಸ್ಥಾನ ನೀಡುವ ಕುರಿತು ಮಾತು ಕೇಳಿ ಬರುತ್ತಿದೆ. ಹಾಗೆ ಉಡುಪಿ ಜಿಲ್ಲೆಯಿಂದ ಇನ್ನೊಬ್ಬ ಹಿರಿಯ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರಿಗೆ ಸಚಿವ ಸ್ಥಾನ ನೀಡಲಾಗುತ್ತದೆ ಎನ್ನಲಾಗಿದೆ. ಉಡುಪಿ ಜಿಲ್ಲೆಯಿಂದ ಇಬ್ಬರಿಗೆ ಸಚಿವ ಸ್ಥಾನ ನೀಡುವ ಸಾಧ್ಯತೆ ಇಲ್ಲವೇ ಇಲ್ಲ. ಈ ಹಿನ್ನೆಲೆಯಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಕೈಬಿಡಲಾಗುತ್ತದೆ ಎಂಬ ಮಾತು ಕೇಳಿ ಬರುತ್ತಿದೆ. ಈ ಹಿನ್ನೆಲೆಯಲ್ಲಿ ಕೋಟ ಶ್ರೀನಿವಾಸ ಪೂಜಾರಿ ಅವರ ದಿಢೀರ್ ದಿಲ್ಲಿ ಭೇಟಿಗೆ ಮಹತ್ವ ಬಂದಿದೆ.

ಸೋಮವಾರ ದಿಢೀರ್ ಆಗಿ ದಿಲ್ಲಿಗೆ ತೆರಳಿದ ಶ್ರೀನಿವಾಸ ಪೂಜಾರಿ ಅವರ ಈ ಮುನ್ನದ ಕಾರ್ಯಕ್ರಮದಂತೆ ಮಂಗಳವಾರ ಮತ್ತು ಬುಧವಾರ ದಿಲ್ಲಿಯಲ್ಲಿ ತಂಗುವ ಕಾರ್ಯಕ್ರಮವಿತ್ತು. ಆದರೆ ಕೊನೆಯ ಕ್ಷಣದಲ್ಲಿ ಕಾರ್ಯಕ್ರಮ ಬದಲಾಗಿದೆ. ಇಂದು ರಾತ್ರಿ 7 ಗಂಟೆಯ ವಿಮಾನದಲ್ಲಿ ಅವರು ಬೆಂಗಳೂರಿಗೆ ಆಗಮಿಸಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು