9:25 PM Sunday29 - November 2020
ಬ್ರೇಕಿಂಗ್ ನ್ಯೂಸ್
ಕಲಬುರ್ಗಿಯಲ್ಲಿ ಭೂಮಿ ಕಂಪಿಸಿದ ಅನುಭವ: ಭಯಭೀತರಾದ ಜನ ದಿಕ್ಕೆಟ್ಟು ಓಡಿದರು ಭಾರೀ ಹಿಂಸಾಚಾರ, ವಾಹನಗಳಿಗೆ ಬೆಂಕಿ ಬಂಗಾಳ ಕೊಲ್ಲಿಯಲ್ಲಿ ಮತ್ತೊಂದು ವಾಯುಭಾರ ಕುಸಿತ: ರಾಜ್ಯದ ವಿವಿಧಡೆ ಡಿಸೆಂಬರ್ 1ರಿಂದ ಮಳೆ? ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಗೆಲ್ಲಲು ಕದ್ರಿ ಮಂಜುನಾಥನಿಗೆ ಬಿಜೆಪಿ ಮೊರೆ ಬಿ.ಸಿ.ರೋಡ್ ನಲ್ಲಿ ಗ್ರಾಮ ಸ್ವರಾಜ್ಯ ಸಮಾವೇಶ ಉದ್ಘಾಟನೆಯಲ್ಲಿ ಡಿಸಿಎಂ ಡಾ. ಅಶ್ವಥ್ ನಾರಾಯಣ್ ಬಜಾಲ್ ಆದರ್ಶನಗರದ ಹದಗೆಟ್ಟ ಮುಖ್ಯ ರಸ್ತೆ ಅಭಿವೃದ್ಧಿಗೆ ಗುದ್ದಲಿ ಪೂಜೆ ಕೊಂಚಾಡಿ ಕಾಶೀ ಮಠದಲ್ಲಿ ತುಳಸಿ ಪೂಜೆ: ಪಂಚಾಮೃತ, ಕ್ಷೀರಾಭಿಷೇಕ ಸಂಪನ್ನ ಜಾಮೀನು ಕೋರಿ ಹೈಕೋರ್ಟ್ ಗೆ ಮತ್ತೆ ಅರ್ಜಿ ಸಲ್ಲಿಸಿದ ಸ್ಯಾಂಡಲ್ ವುಡ್ ನಟಿ… ಜಾಮೀನು ಕೋರಿ ಹೈಕೋರ್ಟ್ ಗೆ ಮತ್ತೆ ಅರ್ಜಿ ಸಲ್ಲಿಸಿದ ಸ್ಯಾಂಡಲ್ ವುಡ್ ನಟಿ… ಹೈದರಾಬಾದ್ ತಲುಪಿದ ಪ್ರಧಾನಿ ಮೋದಿ: ಬಯೋಟೆಕೆ ಸಂಸ್ಥೆಗೆ ಭೇಟಿ, ವಿಜ್ಞಾನಿಗಳ ಜತೆ ಸಮಾಲೋಚನೆ 

ಇತ್ತೀಚಿನ ಸುದ್ದಿ

ಕೊರೊನಾ ಸೋಂಕಿತರಿಗೆ ಖಾಸಗಿ ಆಸ್ಪತ್ರೆಗಳು ಶೇ. 50 ಹಾಸಿಗೆ ನೀಡಲೇಬೇಕು: ಸಚಿವ ಕೋಟ ಖಡಕ್ ಸೂಚನೆ

August 6, 2020, 1:29 PM

ಮಂಗಳೂರು(reporterkarnataka news):

ಕೋವಿಡ್ ನಿರ್ವಹಣೆಗೆ ಖಾಸಗಿ ಆಸ್ಪತ್ರೆಗಳು ಹಾಗೂ ಮೆಡಿಕಲ್ ಕಾಲೇಜುಗಳು ತಮ್ಮ ಹಾಸಿಗೆ  ಸಾಮಥ್ಯ೯ದ ಶೇ. 50 ರಷ್ಟನ್ನು ಸರಕಾರಕ್ಕೆ ಬಿಟ್ಟು ಕೊಡಲೇಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚನೆ ನೀಡಿದ್ದಾರೆ.

ಅವರು ಗುರುವಾರ ಕೋವಿಡ್ ನಿರ್ವಹಣೆ ಸಂಬಂಧ ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿ ಅವರ ಮನವಿ ಮೇರೆಗೆ ಎ.ಜೆ. ಆಸ್ಪತ್ರೆ ಹಾಗೂ ಶ್ರೀನಿವಾಸ ವೈದ್ಯಕೀಯ ಕಾಲೇಜುಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. 

ಸಾರ್ವಜನಿಕ ಆರೋಗ್ಯ ರಕ್ಷಣೆ ಸರಕಾರದ ಆದ್ಯತೆಯಾಗಿದೆ. ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕಿತರ ಚಿಕಿತ್ಸೆಗೆ ಖಾಸಗೀ ಆಸ್ಪತ್ರೆಗಳು ಸರಕಾರದೊಂದಿಗೆ ಸಹಕರಿಸಬೇಕು. ರಾಜ್ಯ ಸರಕಾರವು ಆಯುಷ್ಮಾನ್ ಯೋಜನೆಯಡಿ ಕೋವಿಡ್ ರೋಗಿಗಳಿಗೆ ಉಚಿತ ಚಿಕಿತ್ಸೆ ನೀಡಲು ಉದ್ದೇಶಿಸಿದೆ. ಅಲ್ಲದೆ ಖಾಸಗಿಯಾಗಿ ಚಿಕಿತ್ಸೆ ಪಡೆಯುವ ಸೋಂಕಿತರಿಗೆ ಸರಕಾರ ನಿಗದಿಪಡಿಸಿದ ದರದಲ್ಲಿ ಚಿಕಿತ್ಸೆ ನೀಡಬೇಕು ಎಂದು ಸಚಿವರು ತಿಳಿಸಿದರು.

ಖಾಸಗಿ ಆಸ್ಪತ್ರೆಗಳಿಗೆ ಸರಕಾರದಿಂದ ರ್ಯಾಪಿಡ್ ಕಿಟ್ ಗಳನ್ನು ಸರಬರಾಜು ಮಾಡಲಾಗುತ್ತಿದ್ದು, ಉಚಿತವಾಗಿ ಕೋವಿಡ್ ಪರೀಕ್ಷೆ ನಡೆಸಲು ಸೂಚಿಸಲಾಗಿದೆ. ಸರಕಾರಿ ಆಸ್ಪತ್ರೆಗಳಲ್ಲಿ ಈಗಾಗಲೇ ಈ ಪರೀಕ್ಷೆ ನಡೆಯುತ್ತಿದೆ ಎಂದು ಸಚಿವರು ತಿಳಿಸಿದರು. ಜಿಲ್ಲೆಗೆ ರಾಜ್ಯ ಸರಕಾರವು 50 ವೆಂಟಿಲೇಟರ್ ಗಳನ್ನು ಸರಬರಾಜು ಮಾಡಲಿದೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು