1:49 PM Sunday7 - December 2025
ಬ್ರೇಕಿಂಗ್ ನ್ಯೂಸ್
Kodagu | ಮಡಿಕೇರಿ: ಆಕಸ್ಮಿಕ ಗುಂಡಿನ ಚೂರು ತಗುಲಿ ಇಬ್ಬರು ಯುವಕರಿಗೆ ಗಾಯ ರಾಷ್ಟ್ರವ್ಯಾಪಿ ನಿಮ್ಹಾನ್ಸ್ ಮಾದರಿಯ ಸಂಸ್ಥೆ ಸ್ಥಾಪನೆಗೆ ಸಚಿವ ಡಾ. ಶರಣಪ್ರಕಾಶ್‌ ಒತ್ತಾಯ ಸೌರಶಕ್ತಿಗೆ 3ನೇ ಅತಿದೊಡ್ಡ ಕೊಡುಗೆದಾರ ಭಾರತ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Shivamogga | ಬಸ್ ಚಾಲಕನ ಅತೀ ವೇಗ, ಅಜಾಗರೂಕತೆ: ಬೈಕ್ ಸವಾರ ಗಂಭೀರ ತೋಟಕ್ಕೆ ತೆರಳಿದ್ದ ಸಂದರ್ಭ ಏಕಾಏಕಿ ಹೆಜ್ಜೇನು ದಾಳಿ: ಮಹಿಳೆ ಸಹಿತ 3 ಮಂದಿಗೆ… ವಿರಾಜಪೇಟೆ | ಕ್ಷುಲ್ಲಕ ಕಾರಣ: ಕುಡಿದ ಮತ್ತಿನಲ್ಲಿ ನಡುರಸ್ತೆಯಲ್ಲಿ ಯುವಕರ ಮಾರಮಾರಿ..!! “ಸ್ವಸ್ಥ ಮೈಸೂರು” ಅಭಿಯಾನ ಒಪ್ಪಂದಕ್ಕೆ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಸಹಿ New Delhi | ಬೆಳ್ಳಿ ವಸ್ತು, ಆಭರಣಗಳಿಗಿನ್ನು BIS ಹಾಲ್‌ಮಾರ್ಕ್‌, HUID ಕಡ್ಡಾಯ ರಾಜ್ಯ ಸರಕಾರ ಅನ್ನದಾತ ರೈತನ ಬಗ್ಗೆ ಕಾಳಜಿ ವಹಿಸುತ್ತಿಲ್ಲ: ಮಾಜಿ ಗೃಹ ಸಚಿವ… ವಿಶೇಷ ಚೇತನರು ಇನ್ನು ವಿಮಾನವೇರುವುದು ಸುಲಭ: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ‘ಮೊಬಿಲಿಟಿ…

ಇತ್ತೀಚಿನ ಸುದ್ದಿ

ಕೋಟೇಶ್ವರ: ಇಬ್ಬರು ಅಂತರ್ ರಾಜ್ಯ ಮನೆಗಳ್ಳರ ಬಂಧನ: 16 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ

07/01/2023, 19:55

ಕೋಟೇಶ್ವರ(reporterkarnataka.com): ಕೋಟೇಶ್ವರದಲ್ಲಿ ನಡೆದ ಮನೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಕುಂದಾಪುರ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತರನ್ನು ಕಾಸರಗೋಡು ಹೊಸದುರ್ಗಿ ಪೆರಿಯಾಟಡುಕಂ ನಿವಾಸಿ ಹಾಸಿಮ್ ಎ. ಎಚ್. (42) ಮತ್ತು ಕುಂಬಳೆ ಮಂಜೇಶ್ವರ ನಿವಾಸಿ ಅಬೂಬಕ್ಕರ್ ಸಿದ್ದೀಕ್ (48) ಎಂದು ಗುರುತಿಸಲಾಗಿದೆ.

2022 ಸಪ್ಟೆಂಬರ್ 17 ರಂದು ರಾತ್ರಿ ವೇಳೆಯಲ್ಲಿ ಕುಂದಾಪುರ ತಾಲೂಕು ಕೋಟೆಶ್ವರ ಗ್ರಾಮದ ಕಾಮತ್ ಪೆಟ್ರೋಲ್ ಹಂಪ್ ಎದುರಿನ ಬೊಬ್ಬರ್ಯ ದೇವಸ್ಥಾನ ಬಳಿ ಇರುವ ಪ್ರಸನ್ನ ನಾರಾಯಣ ಆಚಾರ್ಯ ಅವರ ಮನೆಯ ಎದುರಿನ ಬಾಗಿಲಿನ ಬೀಗವನ್ನು ಮುರಿದು, ಚಿನ್ನಾಭರಣಗಳನ್ನು ಹಾಗೂ ನಗದು ಹಣವು ಕಳವಾದ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ತಂಡ ರಚಿಸಿ ತನಿಖೆಗೆ ಇಳಿದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

ವಿಚಾರಣೆ ವೇಳೆ ಆರೋಪಿಗಳು ಜಿಲ್ಲೆಯ ಉಡುಪಿ ನಗರ ಪೊಲೀಸ್ ಠಾಣೆ, ಮಲ್ಪೆ ಪೊಲೀಸ್ ಠಾಣೆ, ಕುಂದಾಪುರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಮನೆ ಕಳ್ಳತನ ನಡೆಸಿ ಕಳವು ಮಾಡಿರುವ ಬಗ್ಗೆ ಬಾಯಿಬಿಟ್ಟಿದ್ದಾರೆ‌. ಚಿನ್ನಾಭರಣಗಳನ್ನು ಕೇರಳ ಮಂಜೇಶ್ವರ ತಾಲೂಕಿನ ನೀರ್ಚಾಲ್ ಕಾಳಿಕಾಂಬ ಜುವೆಲ್ಸರ್ಸ್ ನಲ್ಲಿ ಮಾರಾಟ ಮಾಡಿದ್ದು, ಅಲ್ಲಿಂದ 15 ಲಕ್ಷ ಮೌಲ್ಯದ ಒಟ್ಟು 300 ಗ್ರಾಂ ಚಿನ್ನ ಹಾಗೂ 1 ಲಕ್ಷ ಮೌಲ್ಯದ ಒಟ್ಟು 1481 ಗ್ರಾಂ ಬೆಳ್ಳಿ ಸೇರಿ ಒಟ್ಟು ಮೌಲ್ಯ 16 ಲಕ್ಷದ ಮೌಲ್ಯದ ಸೊತ್ತುಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು