ಇತ್ತೀಚಿನ ಸುದ್ದಿ
ಅಯೋಧ್ಯೆ ಶ್ರೀ ರಾಮನ ನೆಲದಲ್ಲಿ ಓಡಲಿದೆ ಕೋಟೇಶ್ವರದ ಶಿಲ್ಪಿಗಳು ಕೆತ್ತಿದ ರಥ ?
December 31, 2020, 10:05 PM

ಕುಂದಾಪುರ(reporter Karnataka News)
ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಿರ್ಮಾಣಗೊಳ್ಳುತ್ತಿರುವ ಶ್ರೀರಾಮ ಮಂದಿರಕ್ಕೆ ರಥ ನಿರ್ಮಿಸಲು ರಾಷ್ಟ್ರ ಪ್ರಶಸ್ತಿ ಪುರಸ್ಕೃತ ರಥಶಿಲ್ಪಿಗಳಾದ ಕೋಟೇಶ್ವರದ ಲಕ್ಷ್ಮೀನಾರಾಯಣ ಆಚಾರ್ಯ ಅವರಿಗೆ ಅವಕಾಶ ಒದಗಿದೆ ಬಂದಿದೆ ಎನ್ನಲಾಗುತ್ತಿದ್ದು, ಈ ಬಗ್ಗೆ ಅಧಿಕೃತ ಪ್ರಕಟನೆ ಇನ್ನಷ್ಟೇ ಹೊರಬೀಳಬೇಕಿದೆ.
ಅಂಕಣಕಾರ್ತಿ ಶಿಫಾಲಿ ವೈದ್ಯ ಅವರು ಪುರಾತನ ದೇವಸ್ಥಾನಗಳ ರಥಶಿಲ್ಪ ವಿಧಾನ ವೀಕ್ಷಿಸಲು ಇತ್ತೀಚೆಗೆ ಇಲ್ಲಿಗೆ ಭೇಟಿ ನೀಡಿರುವುದು ಇದಕ್ಕೆ ಪುಷ್ಟಿ ನೀಡುತ್ತಿದೆ.
ಲಕ್ಷ್ಮೀನಾರಾಯಣ ಆಚಾರ್ಯ, ಸಹೋದರ ಶಂಕರ ಆಚಾರ್ಯ ಮತ್ತು ಪುತ್ರ ರಾಜಗೋಪಾಲ ಆಚಾರ್ಯ ಅವರ ನೇತೃತ್ವದ ತಂಡ ಈಗಾಗಲೇ ಕುಕ್ಕೆ ಸುಬ್ರಹ್ಮಣ್ಯ, ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ ಸಹಿತ ವಿವಿಧ ದೇವಾಲಯಗಳಿಗೆ ಚಿನ್ನ, ಬೆಳ್ಳಿ ಮತ್ತು ಮರದಿಂದ 127 ರಥಗಳನ್ನು ನಿರ್ಮಿಸಿಕೊಟ್ಟ ಅನುಭವ ಹೊಂದಿದೆ.