ಇತ್ತೀಚಿನ ಸುದ್ದಿ
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸಿಬಿಐ ವಶಕ್ಕೆ ಸಾಧ್ಯತೆ
October 5, 2020, 1:04 PM

ಬೆಂಗಳೂರು(reporterkarnataka news): ಸಿಬಿಐ ದಾಳಿಗೆ ಗುರಿಯಾಗಿರುವ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರನ್ನು ಸಿಬಿಐ ಹೆಚ್ಚಿನ ವಿಚಾರಣೆಗೆ ತನ್ನ ವಶಕ್ಕೆ ತೆಗೆದುಕೊಳ್ಳುವ ಸಾಧ್ಯತೆಯಿದೆ.
ಡಿ ಕೆ. ಶಿವಕುಮಾರ್ ಮತ್ತು ಅವರ ಸಹೋದರ ಡಿ ಕೆ ಸುರೇಶ್ ಅವರನ್ನು ಸಿಬಿಐ ವಿಚಾರಣೆಗೆ ಗುರಿಪಡಿಸಲು ನಿರ್ಧರಿಸಿದೆ ಎಂದು ವರದಿಯಾಗಿದೆ. ದಾಳಿ ಸಂದರ್ಭದಲ್ಲಿ ಅಪಾರ ಪ್ರಮಾಣದ ನಗದನ್ನು ವಶಪಡಿಸಿಕೊಳ್ಳಲಾಗಿದೆ ಎಂದು ವರದಿಯಾಗಿದೆ.
ಸೂಕ್ತ ದಾಖಲೆಗಳಿಲ್ಲದ 50 ಲಕ್ಷ ರೂಪಾಯಿ ಹಣವನ್ನು ಜಫ್ತಿ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ಇದೇ ವೇಳೆ ಗಂಗಾನಗರದಲ್ಲಿರುವ ಸಿಬಿಐ ಕಚೇರಿಗೆ ಭದ್ರತೆಯನ್ನು ಹೆಚ್ಚಿಸಲಾಗಿದೆ.