11:17 PM Tuesday1 - December 2020
ಬ್ರೇಕಿಂಗ್ ನ್ಯೂಸ್
ಕುಂಚ ಕಲಾವಿದರು ವೃತ್ತಿ ಕೌಶಲ್ಯ ಹೆಚ್ಚಿಸಿ ಆರ್ಥಿಕ ಪರಿಸ್ಥಿತಿ ಉತ್ತಮ ಪಡಿಸಿಕೊಳ್ಳಬೇಕು ರಾಜ್ಯದ 6004 ಗ್ರಾಮ ಪಂಚಾಯಿತಿ ಪೈಕಿ 5762 ಗ್ರಾಪಂಗಳಲ್ಲಿ ನಡೆಯಲಿದೆ ಲೋಕಲ್ ಫೈಟ್  ರಾಜಕೀಯ ಪಕ್ಷ ಸ್ಥಾಪನೆ: ಇಂದು ಸೂಪರ್ ಸ್ಟಾರ್ ರಜನಿಕಾಂತ್ ಸಭೆ ದಿಲ್ಲಿಯಲ್ಲಿ ರೈತರ ಪ್ರತಿಭಟನೆ: ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಸಭೆ ಕಲಬುರ್ಗಿಯಲ್ಲಿ ಭೂಮಿ ಕಂಪಿಸಿದ ಅನುಭವ: ಭಯಭೀತರಾದ ಜನ ದಿಕ್ಕೆಟ್ಟು ಓಡಿದರು ಭಾರೀ ಹಿಂಸಾಚಾರ, ವಾಹನಗಳಿಗೆ ಬೆಂಕಿ ಬಂಗಾಳ ಕೊಲ್ಲಿಯಲ್ಲಿ ಮತ್ತೊಂದು ವಾಯುಭಾರ ಕುಸಿತ: ರಾಜ್ಯದ ವಿವಿಧಡೆ ಡಿಸೆಂಬರ್ 1ರಿಂದ ಮಳೆ? ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಗೆಲ್ಲಲು ಕದ್ರಿ ಮಂಜುನಾಥನಿಗೆ ಬಿಜೆಪಿ ಮೊರೆ ಬಿ.ಸಿ.ರೋಡ್ ನಲ್ಲಿ ಗ್ರಾಮ ಸ್ವರಾಜ್ಯ ಸಮಾವೇಶ ಉದ್ಘಾಟನೆಯಲ್ಲಿ ಡಿಸಿಎಂ ಡಾ. ಅಶ್ವಥ್ ನಾರಾಯಣ್ ಬಜಾಲ್ ಆದರ್ಶನಗರದ ಹದಗೆಟ್ಟ ಮುಖ್ಯ ರಸ್ತೆ ಅಭಿವೃದ್ಧಿಗೆ ಗುದ್ದಲಿ ಪೂಜೆ

ಇತ್ತೀಚಿನ ಸುದ್ದಿ

ಕೆಪಿಟಿ  ಎಸ್ ಆರ್ ಎಸ್ ಕ್ರಾಸ್ ಬಳಿ ಸರಣಿ ಅಪಘಾತ: 3 ಮಂದಿಗೆ ಗಾಯ, ಆಸ್ಪತ್ರೆಗೆ ದಾಖಲು 

August 20, 2020, 5:24 PM

ಮಂಗಳೂರು( reporterkarnataka news):

ನಗರದ ಕೆಪಿಟಿ ಬಳಿ ಗುರುವಾರ ರಾತ್ರಿ ಅತೀ ವೇಗದಿಂದ ಬಂದ ಕಾರೊಂದು ಮತ್ತೊಂದು ಕಾರು ಹಾಗೂ ಲಾರಿಗೆ ಡಿಕ್ಕಿ ಹೊಡೆದು ಸರಣಿ ಅಪಘಾತ ನಡೆದಿದ್ದು, ಮೂವರು ಗಾಯಗೊಂಡಿದ್ದಾರೆ.

ಕೆಪಿಟಿಯ ಎಸ್ ಆರ್ ಎಸ್ ಕ್ರಾಸ್ ಬಳಿ ಈ ಅಪಘಾತ ನಡೆದಿದೆ. ನಂತೂರು ಕಡೆಯಿಂದ ಓವರ್ ಸ್ಪೀಡ್ ನಲ್ಲಿ ಬಂದ ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದು ಉರ್ವ ದಿಂದ ಪಚ್ಚನಾಡಿ ಕಡೆ ಹೋಗುತ್ತಿದ್ದ  ಇನ್ನೊಂದು ಕಾರಿಗೆ ಡಿಕ್ಕಿ ಹೊಡೆಯಿತು. ನಂತರ ಲಾರಿಗೂ ಡಿಕ್ಕಿ ಹೊಡೆದು ಪಲ್ಟಿಯಾಗಿದೆ.

ಎರಡೂ ಕಾರಿನ  ಚಾಲಕರು ಹಾಗೂ ಲಾರಿ ಚಾಲಕರು  ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ನಗರ ಎ. ಜೆ ಆಸ್ಪತ್ರೆಗೆ ದಾಖಲಿಸಲಾಗಿದೆ. 

ಈ ಬಗ್ಗೆ ಗಾಯಾಳು ಜೆಸ್ಸಿ ಪಿಂಟೋ( 55) ಕಾರು ಚಾಲಕನ ವಿರುದ್ಧ ಕದ್ರಿ ಪೊಲೀಸರಿಗೆ ದೂರು ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು