ಇತ್ತೀಚಿನ ಸುದ್ದಿ
ಕುದ್ರೋಳಿಯಲ್ಲಿ ಪೂಜಾರಿ ಭೇಟಿ ಮಾಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್
October 25, 2020, 9:05 AM

ಮಂಗಳೂರು(reporterkarnataka news):
ದಸರಾ ಹಿನ್ನಲೆಯಲ್ಲಿ ಕುದ್ರೋಳಿ ಗೋಕರ್ಣನಾಥ ಕ್ಷೇತ್ರಕ್ಕೆ ಭೇಟಿ ನೀಡಿದ ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರು ಕ್ಷೇತ್ರದ ಅಭಿವೃದ್ಧಿಯ ಹರಿಕಾರ, ಕೇಂದ್ರದ ಮಾಜಿ ಸಚಿವ ಬಿ.ಜನಾರ್ದನ ಪೂಜಾರಿ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಮೇಯರ್ ದಿವಾಕರ್ ಪಾಂಡೇಶ್ವರ, ಶಾಸಕ ವೇದವ್ಯಾಸ ಕಾಮತ್, ರಾಜ್ಯ ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್, ಬಿಜೆಪಿ ಮುಖಂಡರುಗಳಾದ ರವೀಂದ್ರ ಶೆಟ್ಟಿ ಉಳಿದೊಟ್ಟು, ಜಗದೀಶ್ ಶೆಟ್ಟಿ ಬೋಳೂರು ಮತ್ತಿತರರು ಜೊತೆಗಿದ್ದರು