11:35 PM Thursday3 - December 2020
ಬ್ರೇಕಿಂಗ್ ನ್ಯೂಸ್
ಗೋ ಹತ್ಯೆ ನಿಷೇಧ ಕಾನೂನು ಜಾರಿಗೆ ತರಲು ತಡವೇಕೆ?: ಮಾಜಿ ಸಚಿವ ಖಾದರ್… ದೋಣಿ ದುರಂತದಲ್ಲಿ ಮೃತಪಟ್ಟ ಮೀನುಗಾರರ ಕುಟುಂಬಕ್ಕೆ ತಲಾ 6 ಲಕ್ಷ ರೂ. ಪರಿಹಾರ… ರೈತರ ಬೆಂಬಲಕ್ಕೆ ನಿಂತ ಅಕಾಲಿ ನಾಯಕ  ಬಾದಲ್ :  ಪದ್ಮವಿಭೂಷಣ ಪ್ರಶಸ್ತಿ ವಾಪಸ್ ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕನಕ ಜಯಂತಿ ಆಚರಣೆ ಮಂಗಳೂರಿನಲ್ಲಿ ಉಗ್ರರ ಪರ ಗೋಡೆ ಬರಹ: ಫುಡ್ ಡೆಲಿವರಿ ಬಾಯ್ ಪೊಲೀಸ್ ವಶಕ್ಕೆ ಪಿಎಫ್ಐ ಅಧ್ಯಕ್ಷರ ಎರಡೂ ನಿವಾಸಗಳ ಮೇಲೆ ಇಡಿ ದಾಳಿ: ಶೋಧ ಕಾರ್ಯ ಆರಂಭ ಮಾಜಿ ಸಚಿವ ವರ್ತೂರ್ ಪ್ರಕಾಶ್ ಅಪಹರಣ ಪ್ರಕರಣ: ಓರ್ವನ ವಿಚಾರಣೆ ಆರದಿರಲಿ ಬದುಕು ಆರಾಧನ ತಂಡದ ನವೆಂಬರ್ ತಿಂಗಳ ಸಹಾಯ ಧನ ಹಸ್ತಾಂತರ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆ ರೈತ ಮುಖಂಡರೊಂದಿಗೆ ಇಂದು ಕೇಂದ್ರ ಸರಕಾರ ಚರ್ಚೆ: 35 ಸಂಘಟನೆಗಳಿಗೆ ಆಹ್ವಾನ

ಇತ್ತೀಚಿನ ಸುದ್ದಿ

ಕುದ್ರೋಳಿ ಕ್ಷೇತ್ರದ ಮಂಗಳೂರು ದಸರಾದ ಈ ಬಾರಿಯ ವಿಶೇಷ ಏನು? ನವರಾತ್ರಿ ಉತ್ಸವ ಹೇಗೆ ಆಚರಿಸಲಾಗುತ್ತಿದೆ?

October 17, 2020, 11:42 AM

ಅನುಷ್ ಪಂಡಿತ್

Mangaluru(reporterkarnataka): ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಈ ಬಾರಿ ನವರಾತ್ರಿ ಮಹೋತ್ಸವ ವಿಶಿಷ್ಟ ರೀತಿಯಲ್ಲಿ ನಡೆಯುತ್ತಿದೆ. ಕೊರೊನಾ ಎಂಬ ಮಹಾಮಾರಿ ಇಡೀ ಜಗತ್ತನ್ನೇ ಬೆಚ್ಚಿಬೀಳಿಸಿದ ಹಿನ್ನೆಲೆಯಲ್ಲಿ ಅಗತ್ಯ ಸುರಕ್ಷಾ ಕ್ರಮಗಳೊಂದಿಗೆ ದಸರಾ ಮಹೋತ್ಸವಕ್ಕೆ ಚಾಲನೆ ನೀಡಲಾಗಿದೆ

‘ನಮ್ಮ ದಸರಾ- ನಮ್ಮ ಸುರಕ್ಷೆ’ ಘೋಷ ವಾಕ್ಯದೊಂದಿಗೆ ಉತ್ಸವ ಆರಂಭಿಸಲಾಗಿದೆ. ಕೊರೊನಾದ ಬಳಿಕ ತುಳುನಾಡಿನ ಪ್ರಸಿದ್ಧ ಕ್ಷೇತ್ರವಾದ ಕುದ್ರೋಳಿಯಲ್ಲಿ ನಡೆಯುತ್ತಿರುವ ಮೊದಲ ಬಹಳ ದೊಡ್ಡ ಉತ್ಸವ ಇದಾಗಿದೆ. ಇದರ ಕುರಿತು ಕಾರ್ಪೊರೇಟರ್ ಅನಿಲ್ ಕುಮಾರ್ ಏನು ಹೇಳುತ್ತಾರೆ ಕೇಳೋಣ…

ಉತ್ಸವದ ಸಂದರ್ಭದಲ್ಲಿ ಕ್ಷೇತ್ರಕ್ಜೆ ಆಗಮಿಸುವ ಭಕ್ತಾದಿಗಳು ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಸೇರಿದಂತೆ ದೇಗುಲದ ಸ್ವಯಂಸೇವಕರಿಗೆ ಎಲ್ಲ ರೀತಿಯ ಸಹಕಾರ ನೀಡುವಂತೆ ದೇವಸ್ಥಾನದ ಆಡಳಿತ ಮಂಡಳಿ ಈಗಾಗಲೇ ಭಕ್ತ ಸಮೂಹದಲ್ಲಿ ವಿನಂತಿ ಮಾಡಿಕೊಂಡಿದೆ. ಈ ನಿಟ್ಟಿನಲ್ಲಿ ಸ್ವಯಂಸೇವಕರ ತಂಡ ದೊಡ್ಡ ಜವಾಬ್ದಾರಿಯನ್ನು ವಹಿಸಿಕೊಂಡಿದೆ.

ಮಹೋತ್ಸವದ ಸಂದರ್ಭದಲ್ಲಿ ಭಕ್ತಾಧಿಗಳು ಕೆಲವು ನಿಯಮ ಕಡ್ಡಾಯವಾಗಿ ಪಾಲಿಸುವ ಮೂಲಕ ಇಡೀ ರಾಜ್ಯಕ್ಕೆ ಕುದ್ರೋಳಿ ಕ್ಷೇತ್ರದ ದಸರಾ ಮಹೋತ್ಸವ ಮಾದರಿಯಾಗುವಂತೆ ದೇಗುಲದ ಆಡಳಿತ ಮಂಡಳಿ ಕ್ಷಣ ಕ್ಷಣಕ್ಕೂವಿನಂತಿ ಮಾಡಿಕೊಳ್ಳುತ್ತಿದೆ.

ಆರೋಗ್ಯದ ಸುರಕ್ಷತೆಯ ದೃಷ್ಟಿಯಿಂದ ಕುದ್ರೋಳಿ ದೇವಾಲಯದಲ್ಲಿ ಕೆಲವು ಪ್ರಮುಖ ಕ್ರಮಗಳನ್ನು ಕೈಗೊಳ್ಳಲಾಗಿದೆ.

 * ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ 6 ವರ್ಷದ ಒಳಗಿನ ಮಕ್ಕಳನ್ನು 10 ದಿನದ ಉತ್ಸವಕ್ಕೆ ಬರುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ.

 ಪ್ರತಿಯೊಬ್ಬರು ಕಡ್ಡಾಯವಾಗಿ ಮಾಸ್ಕ್ ಧರಿಸಿಕೊಂಡು ಬರಬೇಕು. ಮಾಸ್ಕ್ ಇಲ್ಲದವರಿಗೆ ಪ್ರವೇಶ ಕಡ್ಡಾಯ ನಿಷೇಧವಿದೆ.

  • ದೇವಸ್ಥಾನ ಪ್ರವೇಶ ಮೊದಲು ಥರ್ಮಲ್ ಸ್ಕ್ಯಾನ್ ಮಾಡಲಾಗುತ್ತದೆ.
  • ಜ್ವರ, ಶೀತ ಇದ್ದವರು ದೇವಳ ಪ್ರವೇಶ ನಿಷೇಧಿಸಲಾಗಿದೆ. ಒಂದು ವೇಳೆ ಥರ್ಮಲ್ ಸ್ಕ್ಯಾನ್ ವೇಳೆ ಟೆಂಪರೇಚರ್ ಹೆಚ್ಚು ಇದ್ದರೆ ಅವರಿಗೆ ದೇವಳ ಪ್ರವೇಶಕ್ಕೆ ಅನುಮತಿ ನೀಡುವುದಿಲ್ಲ.
  • ದೇವರ ದರ್ಶನವನ್ನು ಅಂತರ ಕಾಯ್ದುಕೊಂಡೇ ಮಾಡತಕ್ಕದ್ದು.
  • ಗುಂಪು ಸೇರಲು ಅವಕಾಶವಿಲ್ಲ
  • ದೇವಸ್ಥಾನದ ಆವರಣ ಸೇರಿದಂತೆ ನವದುರ್ಗೆಯರ ಪ್ರತಿಷ್ಠಾಪನೆ ಜಾಗದಲ್ಲಿ ಮೊಬೈಲ್‌ನಲ್ಲಿ ಸೆಲ್ಫಿ ಅಥವಾ ಫೋಟೋ ತೆಗೆಯುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ.
  • ಹಿರಿಯರನ್ನು ಗೌರವಿಸುವುದು ಸಂಪ್ರದಾಯವಾಗಿರುವುದರಿಂದ

 ಉತ್ಸವಕ್ಕೆ ಆಗಮಿಸುವ ಹಿರಿಯ ನಾಗರಿಕರಿಗೆ ಯಾವುದೇ ರೀತಿಯ ಅಡೆ ತಡೆ ಆಗದಂತೆ ಅವರಿಗೆ ಮೊದಲ ಪ್ರಾಶಸ್ತ್ಯ ನೀಡಲಾಗುತ್ತಿದೆ.

  • ಉತ್ಸವಕ್ಕೆ ಬರುವ ಭಕ್ತಾಧಿಗಳು  ಮೂರ್ತಿಗಳನ್ನು ಸ್ಪರ್ಶ ಮಾಡದೆ ಸಹಕರಿಸಲು ಕೋರಲಾಗಿದೆ

*60 ವರ್ಷದ ಮೇಲ್ಪಟ್ಟವರು, ಅನಾರೋಗ್ಯ ಪೀಡಿತರು ಈ ವರ್ಷದ ಮಟ್ಟಿಗೆ ಮನೆಯಲ್ಲೇ ಕುಳಿತು ದೇವರ ದರ್ಶನ ಪಡೆದುಕೊಳ್ಳಲು ಟಿ.ವಿ, ಆನ್‌ಲೈನ್ ಮೂಲಕ ವ್ಯವಸ್ಥೆ ಮಾಡಲಾಗಿದೆ.

  • ಪ್ರಸಾದ ವಿತರಣೆಗೆ ದೇವಳದ ಗ್ಲಾಸ್ ಹೌಸ್‌ನಲ್ಲಿ ವ್ಯವಸ್ಥೆ ಮಾಡಲಾಗಿದೆ.
  • ಮಧ್ಯಾಹ್ನದ ಮಹಾಪೂಜೆ ಬಳಿಕ 2.30ರ ತನಕ ದೇವಸ್ಥಾನದ ಹೊರಹೋಗುವ ಗೇಟಿನಲ್ಲಿ ಹಾಳೆಯ ಬೌಲ್‌ನಲ್ಲಿ ಅನ್ನಪ್ರಸಾದ ವಿತರಿಸುವ ವ್ಯವಸ್ಥೆ ಇದೆ..
  • ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ವರ್ಚುವಲ್ ಆಗಿ ಮಾಡಲಾಗುತ್ತಿದ್ದು, ಮನೆಯಲ್ಲೇ ಕುಳಿತು ಆಸ್ವಾಧಿಸಬಹುದಾಗಿದೆ. ಒಟ್ಟಿನಲ್ಲಿ ಕೊರೊನಾ ಮಹಾಮಾರಿಯ ಹಿನ್ನೆಲೆಯಲ್ಲಿ ಎಲ್ಲ ಸುರಕ್ಷತಾ ಕ್ರಮಗಳನ್ನು ಕೈಗೊಂಡು ಮಹೋತ್ಸವ ಆಚರಿಸಲಾಗುತ್ತದೆ.

ಇತ್ತೀಚಿನ ಸುದ್ದಿ

ಜಾಹೀರಾತು