4:12 PM Thursday3 - December 2020
ಬ್ರೇಕಿಂಗ್ ನ್ಯೂಸ್
ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕನಕ ಜಯಂತಿ ಆಚರಣೆ ಮಂಗಳೂರಿನಲ್ಲಿ ಉಗ್ರರ ಪರ ಗೋಡೆ ಬರಹ: ಫುಡ್ ಡೆಲಿವರಿ ಬಾಯ್ ಪೊಲೀಸ್ ವಶಕ್ಕೆ ಪಿಎಫ್ಐ ಅಧ್ಯಕ್ಷರ ಎರಡೂ ನಿವಾಸಗಳ ಮೇಲೆ ಇಡಿ ದಾಳಿ: ಶೋಧ ಕಾರ್ಯ ಆರಂಭ ಮಾಜಿ ಸಚಿವ ವರ್ತೂರ್ ಪ್ರಕಾಶ್ ಅಪಹರಣ ಪ್ರಕರಣ: ಓರ್ವನ ವಿಚಾರಣೆ ಆರದಿರಲಿ ಬದುಕು ಆರಾಧನ ತಂಡದ ನವೆಂಬರ್ ತಿಂಗಳ ಸಹಾಯ ಧನ ಹಸ್ತಾಂತರ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆ ರೈತ ಮುಖಂಡರೊಂದಿಗೆ ಇಂದು ಕೇಂದ್ರ ಸರಕಾರ ಚರ್ಚೆ: 35 ಸಂಘಟನೆಗಳಿಗೆ ಆಹ್ವಾನ ಬುರವಿ ಚಂಡಮಾರುತದಿಂದ ಶ್ರೀಲಂಕಾದಲ್ಲಿ ವ್ಯಾಪಕ ಹಾನಿ, ಹಲವು ಮನೆಗಳಿಗೆ ಧ್ವಂಸ ಬೆಂಗಳೂರು ಹಿಂಸಾಚಾರ ಪ್ರಕರಣ: ಮಾಜಿ ಮೇಯರ್ ಆಪ್ತ, ಕಾರ್ಪೋರೇಟರ್ ಜಾಕೀರ್ ಬಂಧನ ಗ್ರಾಮ ಪಂಚಾಯಿತಿ ಚುನಾವಣೆ: ಶಸ್ತ್ರಾಸ್ತ್ರಗಳನ್ನು ಠೇವಣಿ  ಇಡಲು ಜಿಲ್ಲಾಧಿಕಾರಿ ಆದೇಶ 

ಇತ್ತೀಚಿನ ಸುದ್ದಿ

ಮಂಗಳೂರು ದಸರಾಕ್ಕೆ ಸರಳ ರೀತಿಯಲ್ಲಿ ತೆರೆ: ಮೊದಲ ಬಾರಿಗೆ ಮೆರವಣಿಗೆ ಇಲ್ಲದೆ ನವದುರ್ಗೆಯರ ವಿಸರ್ಜನೆ

October 27, 2020, 1:07 AM

ಮಂಗಳೂರು(reporterkarnataka news):

ರಾಜ್ಯದಲ್ಲೇ ಮೈಸೂರು ಬಿಟ್ಟರೆ  ಎರಡನೇ ಅತೀ ದೊಡ್ಡ ದಸರಾ ಎಂದು ಕರೆಸಿಕೊಳ್ಳುವ ಮಂಗಳೂರು ದಸರಾ ಉತ್ಸವಕ್ಕೆ ತೆರೆ ಬಿದ್ದಿದೆ. ಇತಿಹಾಸದಲ್ಲೇ ಮೊದಲ ಬಾರಿಗೆ ದಸರಾ ಮೆರವಣಿಗೆ ಇಲ್ಲದೆ ನವದುರ್ಗೆಯರ ವಿಸರ್ಜನೆ ಕುದ್ರೋಳಿ ದೇಗುಲದ ಪುಷ್ಕರಣಿಯಲ್ಲಿ ನಡೆದಿದೆ.

ಶಾರದಾ ಮಾತೆ ಸೇರಿದಂತೆ ನವದುರ್ಗೆಯರು ಹಾಗೂ ಗಣಪತಿಯ ಅಲಂಕೃತ ಮೂರ್ತಿಯನ್ನು ದೇಗುಲದ ಹೊರಾಂಗಣದಲ್ಲಿ ದೇವಾಲಯಕ್ಕೆ ಮೆರವಣಿಗೆಯಲ್ಲಿ ಪ್ರದಕ್ಷಿಣೆ ಹಾಕಿ ಪುಷ್ಕರಣಿಯಲ್ಲಿ ಶಾಸ್ತ್ರೋಕ್ತವಾಗಿ ವಿಸರ್ಜಿಸಲಾಯಿತು.

ಕೋವಿಡ್ ಗೈಡ್‌ಲೈನ್ಸ್ ಪ್ರಕಾರ ಅತ್ಯಂತ ಸರಳವಾಗಿ ಈ ಬಾರಿ ದಸರಾ ಉತ್ಸವ ನೆರವೇರಿಸಲಾಯಿತು. ಈ ಹಿಂದಿನ ವರ್ಷಗಳಲ್ಲಿ ಕುದ್ರೋಳಿ ಗೋಕರ್ಣನಾಥ ದೇವಸ್ಥಾನದಲ್ಲಿ ಆರಾಧನೆಗೊಂಡ ನವದುರ್ಗೆಯರ ಭವ್ಯ ಶೋಭಾಯಾತ್ರೆ ನಡೆಯುತ್ತಿತ್ತು.

ರಾತ್ರಿ ಪೂರ್ತಿ ಅದ್ದೂರಿ ಟ್ಯಾಬ್ಲೋ ಮೂಲಕ ನಗರ ಪ್ರದಕ್ಷಿಣೆ ಮಾಡಿ ಮುಂಜಾನೆ ವೇಳೆಗೆ ದೇವಳದ ಕೆರೆಯಲ್ಲಿ ವಿಸರ್ಜನೆ ಮಾಡಲಾಗುತಿತ್ತು. ಆದ್ರೆ ಈ ಬಾರಿ ಕೊರೊನಾ ಕಾರಣದಿಂದ ಮೆರವಣಿಗೆಯನ್ನು ರದ್ದುಗೊಳಿಸಲಾಗಿತ್ತು. ದೇವಸ್ಥಾನದಲ್ಲೇ ವಿಸರ್ಜನಾ ಪೂಜೆ ನೆರವೇರಿಸಿ ಹೊರಾಂಗಣದಲ್ಲೇ ಪ್ರದಕ್ಷಿಣೆ ಹಾಕಿ ಕ್ಷೇತ್ರದ ಪುಷ್ಕರಣಿಯಲ್ಲಿ ವಿಸರ್ಜಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು