ಇತ್ತೀಚಿನ ಸುದ್ದಿ
ಕುಡುಪು ಅನಂತಪದ್ಮನಾಭ ಕ್ಷೇತ್ರದಲ್ಲಿ ಷಷ್ಠಿ ಮಹೋತ್ಸವ, ರಥೋತ್ಸವ ಸಂಭ್ರಮ
December 20, 2020, 1:04 PM

ಮಂಗಳೂರು(reporterkarnataka news): ಕುಡುಪು ಶ್ರೀ ಅನಂತಪದ್ಮನಾಭ ಕ್ಷೇತ್ರದಲ್ಲಿ ಷಷ್ಠಿ ಮಹೋತ್ಸವ ಹಾಗೂ ಬ್ರಹ್ಮ ರಥೋತ್ಸವ ಭಾನುವಾರ ಭಕ್ತಿ ಸಂಭ್ರಮದಿಂದ ನಡೆಯಿತು.
ಭಾನುವಾರ ಮುಂಜಾನೆಯಿಂದಲೇ ಸಾವಿರಾರು ಭಕ್ತರು ಕ್ಷೇತ್ರಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ನಾಗಬನಕ್ಕೂ ಭೇಟಿ ನೀಡಿ ಸೇವೆ ಸಲ್ಲಿಸಿದರು. ದೇವರ ದರ್ಶನಕ್ಕೆ ಬೆಳಗ್ಗಿನಿಂದಲೇ ಭಕ್ತರು ಸರದಿ ಸಾಲಿನಲ್ಲಿ ನಿಂತಿದ್ದರು. ಕೊರೊನಾ ಹಿನ್ನೆಲೆಯಲ್ಲಿ ಭಕ್ತರೆಲ್ಲ ಮಾಸ್ಕ್ ಧರಿಸಿದ್ದರು.