ಇತ್ತೀಚಿನ ಸುದ್ದಿ
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇಗುಲದಲ್ಲಿ ವೈಭವದ ಷಷ್ಠಿ ಮಹೋತ್ಸವ, ರಥೋತ್ಸವ ಸಂಭ್ರಮ
December 20, 2020, 6:24 PM

ಸುಬ್ರಹ್ಮಣ್ಯ (reporterkarnataka news): ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾ ಷಷ್ಠಿ ಮಹೋತ್ಸವ ಹಾಗೂ ಬ್ರಹ್ಮ ರಥೋತ್ಸವ ಭಾನುವಾರ ಭಕ್ತಿ ಸಂಭ್ರಮದಿಂದ ನಡೆಯಿತು.
ಭಾನುವಾರ ಮುಂಜಾನೆಯಿಂದಲೇ ಸಾವಿರಾರು ಭಕ್ತರು ಕ್ಷೇತ್ರಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.
ಆಶ್ಲೇಷ ಬಲಿ, ನಾಗತಂಬಿಲ ಸೇರಿದಂತೆ ವಿವಿಧ ಸೇವೆಗಳು ನಡೆದವು. ದೇವರ ದರ್ಶನಕ್ಕೆ ಬೆಳಗ್ಗಿನಿಂದಲೇ ಭಕ್ತರು ಸರದಿ ಸಾಲಿನಲ್ಲಿ ನಿಂತಿದ್ದರು. ಕೊರೊನಾ ಹಿನ್ನೆಲೆಯಲ್ಲಿ ಭಕ್ತರೆಲ್ಲ ಮಾಸ್ಕ್ ಧರಿಸಿದ್ದರು.