ಇತ್ತೀಚಿನ ಸುದ್ದಿ
ಖ್ಯಾತ ಕ್ರಿಕೆಟಿಗ ಸೌರವ್ ಗಂಗೂಲಿ ಮತ್ತೆ ಆಸ್ಪತ್ರೆಗೆ ದಾಖಲು: ಪುನಃ ಕಾಣಿಸಿಕೊಂಡ ಎದೆನೋವು
January 27, 2021, 4:53 PM

ಕೋಲ್ಕತ್ತಾ(reporterkarnataka news): ಲಘು
ಹೃದಯಾಘಾತಕ್ಕೀಡಾಗಿ ಇತ್ತೀಚೆಗಷ್ಟೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಅಧ್ಯಕ್ಷ ಸೌರವ್ ಗಂಗೂಲಿ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಎದೆನೋವು ಕಾಣಿಸಿಕೊಂಡ ಪರಿಣಾಮ ಗಂಗೋಲಿ ಅವರನ್ನು ಮತ್ತೆ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ಗಂಗೂಲಿ ಅವರು ಜನವರಿ 2ರಂದು ಜಿಮ್ ಮಾಡುತ್ತಿದ್ದ ವೇಳೆಯಲ್ಲಿ ಲಘು ಹೃದಯಾಘಾತವಾಗಿತ್ತು. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆಯಲ್ಲಿ ಆಂಜಿಯೋ ಪ್ಲಾಸ್ಟ್ ಮೂಲಕ ಬ್ಲಾಕ್ ಗಳನ್ನು ತೆರವು ಮಾಡಲಾಗಿತ್ತು. ಖ್ಯಾತ ಹೃದ್ರೋಗ ತಜ್ಞ ಡಾ. ದೇವಿ ಶೆಟ್ಟಿ ಅವರು ಗಂಗೂಲಿ ಅವರನ್ನು ಭೇಟಿ ಮಾಡಿ ಹಲವು ಟಿಪ್ಸ್ ಗಳನ್ನು ನೀಡಿದ್ದರು.
ಆದರೆ ಇದೀಗ ಮತ್ತೆ ಎದೆನೋವು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಅವರನ್ನು ಅಪೋಲೋ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದುಬಂದಿದೆ.