ಇತ್ತೀಚಿನ ಸುದ್ದಿ
ಲೈಂಗಿಕ ದೌರ್ಜನ್ಯ ಆರೋಪ: ಇಂದು ನಿರ್ದೇಶಕ ಅನುರಾಗ್ ಕಶ್ಯಪ್ ವಿಚಾರಣೆ
October 1, 2020, 9:39 AM

ಮುಂಬೈ(reporterkarnataka news): ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿರುವ ನಿರ್ದೇಶಕ ಅನುರಾಗ್ ಕಶ್ಯಪ್ ಅವರನ್ನು ಇಂದು ಪೊಲೀಸರು ವಿಚಾರಣೆಗೆ ಗುರಿಪಡಿಸಲಿದ್ದಾರೆ. ಬೆಳಿಗ್ಗೆ 11 ಗಂಟೆಗೆ ವಿಚಾರಣೆ ಸಂಬಂಧ ಠಾಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ.
ನಟಿ ಪಾಯಲ್ ಘೋಷ್, ನಿರ್ದೇಶಕ ಅನುರಾಗ್ ಕಶ್ಯಪ್ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದಾರೆ. ಪೊಲೀಸರು ತನಿಖೆ ನಡೆಸಲು ಮುಂದಾಗದ ಕಾರಣ ಅವರು ರಾಜ್ಯಪಾಲರನ್ನು ಕೂಡ ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿದ್ದರು.
ಈ ಬೆನ್ನಲ್ಲೆ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ಅನುರಾಗ್ ಕಶ್ಯಪ್ ಅವರಿಗೆ ಸೂಚಿಸಿದ್ದಾರೆ