7:03 PM Sunday28 - February 2021
ಬ್ರೇಕಿಂಗ್ ನ್ಯೂಸ್
ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ಸಚಿವ ಅಂಗಾರ ತವರಿನಲ್ಲಿ ಭಿನ್ನಮತ ಸ್ಫೋಟ: 3 ಮಂದಿ ಹಿರಿಯ ನಾಯಕರು ಬಿಜೆಪಿಯಿಂದ… ಅಥಣಿ ತಾಲೂಕಿನ ರಡೇರಹಟ್ಟಿ ಗ್ರಾಮದಲ್ಲಿ  ಆಕಸ್ಮಿಕವಾಗಿ ಬೆಂಕಿ ತಗುಲಿ ಗುಡಿಸಲು ಭಸ್ಮ: 4… ಒಂದೂವರೆ ತಿಂಗಳ ಅವಧಿಯಲ್ಲಿ 10 ಬಾರಿ ಇಂಧನ ದರ ಏರಿಕೆ: ಕೆಪಿಸಿಸಿ ಅಧ್ಯಕ್ಷ… ವೈದ್ಯಕೀಯ ಸೀಟುಗಳ ಬ್ಲಾಕಿಂಗ್ ದಂಧೆ: ಮಿನಿ ವಿಧಾನ ಸೌಧದ ಎದುರು ಎಬಿವಿಪಿ ಪ್ರತಿಭಟನೆ;… ಮಂಗಳೂರು ಮಹಾನಗರಪಾಲಿಕೆ  2020-21ನೇ  ಸಾಲಿನ ತೆರಿಗೆ ಪೂರ್ತಿ ಪಾವತಿಸಿದರೆ ಶೇ. 5% ವಿನಾಯಿತಿ ಮಹಿಳಾ ಸಿಬ್ಬಂದಿಗೆ ಮಾನಸಿಕ ಕಿರುಕುಳ ಪ್ರಕರಣ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ ಕಾನೂನಿನ ಸಮರ್ಪಕ ಜಾರಿಯಿಂದ ಮಾತ್ರ ಸಮಾಜದಲ್ಲಿ ಅಪರಾಧಗಳನ್ನು ನಿಯಂತ್ರಿಸಲು ಸಾಧ್ಯ: ಗಾಂವ್ಕರ್ ಪಂಚ ರಾಜ್ಯಗಳ ಎಲೆಕ್ಷನ್ ಘೋಷಣೆ: ಪಶ್ಚಿಮ ಬಂಗಾಳದಲ್ಲಿ 8 ಹಂತಗಳ ಚುನಾವಣೆ; ಮೇ…

ಇತ್ತೀಚಿನ ಸುದ್ದಿ

ಬಿಜೆಪಿ ಶಾಸಕರಿಂದ ಸ್ಮಾರ್ಟ್ ಸಿಟಿ ಮೂಲ ಉದ್ದೇಶ ಗಾಳಿಗೆ ತೂರಲಾಗಿದೆ: ಜೆ. ಆರ್. ಲೋಬೊ

September 21, 2020, 9:53 PM

ಮಂಗಳೂರು(reporterkarnataka news):

ನಗರದ ಕದ್ರಿ ಪಾರ್ಕ್  ಅಭಿವೃದ್ಧಿಪಡಿಸಲು ಅದಕ್ಕೆ ಬೇಕಾದ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿ ಪಡಿಸುವ ಬದಲು 4 ಕೋಟಿಗೆ ನಿಗದಿಯಾದ ಅಭಿವೃದ್ಧಿ ಕಾರ್ಯವನ್ನು ಸ್ಮಾರ್ಟ್ ಸಿಟಿ ಯೋಜನೆಯಲ್ಲಿ 12 ಕೋಟಿಗೆ ಏರಿಸಿ ಯಾವುದೇ ದೂರದೃಷ್ಟಿಯಿಲ್ಲದೆ,  ಮೂಲಭೂತ ಉದ್ದೇಶಗಳನ್ನು ಗಾಳಿಗೆ ತೂರಿ ಕಾಮಗಾರಿಯನ್ನು ವಿಳಂಬ ಮಾಡಿ ಜನ ಸಾಮಾನ್ಯರಿಗೆ ತೊಂದರೆ ನೀಡಲಾಗುತ್ತಿದೆ ಎಂದು ಮಾಜಿ ಶಾಸಕ ಜೆ.ಆರ್. ಲೋಬೊ ಆರೋಪಿಸಿದರು.

ಮಂಗಳೂರು ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಕದ್ರಿ ಪಾರ್ಕ್ ರಸ್ತೆ ಕಾಮಗಾರಿ ವಿಳಂಬವನ್ನು ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.

ನಾನು ಶಾಸಕನಾಗಿದ್ದಾಗ, ಕಾಂಗ್ರೆಸ್ ಸರಕಾರ ಆಡಳಿತದಲ್ಲಿದ್ದಾಗ, ರಮಾನಾಥ ರೈ ಹಾಗೂ ಯು.ಟಿ.ಖಾದರ್  ಅವರು ಮಂತ್ರಿಯಾಗಿದ್ದಾಗ ನಗರವನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಸ್ಮಾರ್ಟ್ ಯೋಜನೆ ಮಂಗಳೂರಿಗೆ ಬರುವಂತೆ ಮಾಡಿದ್ದೆವು.

ಆದರೇ ಇವತ್ತು ಬಿಜೆಪಿ ಶಾಸಕರು ಸ್ಮಾರ್ಟ್ ಸಿಟಿ ಮೂಲ ಉದ್ದೇಶವನ್ನು ಗಾಳಿಗೆ ತೂರಿ ಅದನ್ನು ಅನುಷ್ಠಾನ ಗೊಳಿಸುವಲ್ಲಿ ಸಂಪೂರ್ಣವಾಗಿ ವಿಫಲರಾಗಿದ್ದಾರೆ ಎಂದು ಆರೋಪಿಸಿದರು.

ನಾನು ಶಾಸಕನಾಗಿರುವ ಸಂದರ್ಭದಲ್ಲಿ ಅಮೃತ್ ಯೋಜನೆಯಲ್ಲಿ ಸುಮಾರು150 ಕೋಟಿ, ಎಡಿಬಿ 2ನೇ ಯೋಜನೆಯಲ್ಲಿ ಸುಮಾರು 600 ಕೋಟಿ ರೂಪಾಯಿಯನ್ನು ನಗರದ ಮೂಲಭೂತ ಸೌಕರ್ಯಕ್ಕಾಗಿ ಸರಕಾರದಿಂದ ಮಂಜೂರು ಮಾಡಿಸಿದ್ದೇನೆ. ಆದರೆ ಅದನ್ನು ಅನುಷ್ಠಾನ ಗೊಳಿಸುವಲ್ಲಿ ಸ್ಥಳೀಯ ಶಾಸಕರು ವಿಫಲರಾಗಿದ್ದಾರೆ. ಕದ್ರಿ ಪಾರ್ಕ್ ಬಳಿ ನಡೆಯುವ ಕಾಮಗಾರಿ ಇವರ ವಿಫಲತೆಗೆ ಹಿಡಿದ ಕೈಗನ್ನಡಿ ಎಂದು ಹೇಳಿದರು.

ಇನ್ನಾದರೂ ಶಾಸಕರು ಎಚ್ಚೆತ್ತುಕೊಂಡು ನಗರದ ಅಭಿವೃದ್ಧಿಯನ್ನು  ದೂರದೃಷ್ಟಿ ಚಿಂತನೆಯೊಂದಿಗೆ ನಡೆಸಬೇಕು. ಅಧಿಕಾರಿಗಳ ಮೇಲೆ ಹಿಡಿತವಿರಬೇಕು. ನಾನು ಶಾಸಕನಾಗಿದ್ದಾಗ ತಂದಿರುವ ಹಲವಾರು ಯೋಜನೆಗಳು ಇನ್ನು ಆರಂಭವಾಗಿಲ್ಲ. ಯಾವುದೇ ಹೊಸ ಯೋಜನೆಗಳು ಬಂದಿಲ್ಲ. ಶಾಸಕರು ಈ ಬಗ್ಗೆ ಗಮನ ಹರಿಸಿ.ಕೇವಲ ಬ್ಯಾನರ್, ಪ್ಲಕ್ಸ್ ಹಾಕಿ ಪೋಸ್ ಕೊಡುವ ಬದಲು ಮಂಗಳೂರಿಗೆ ಹೊಸ ಯೋಜನೆಯನ್ನು ತರುವುದರ ಬಗ್ಗೆ ಚಿಂತಿಸಿ ಎಂದು ಖಾರವಾಗಿ ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು