8:04 AM Saturday23 - January 2021
ಬ್ರೇಕಿಂಗ್ ನ್ಯೂಸ್
ಕಾಳ ಸಂತೆಯಲ್ಲಿ ಆಹಾರ ದಾಸ್ತಾನು ಹೆಚ್ಚಾಗುವ ಭೀತಿಯಿದೆ: ಮಾಜಿ ಸಚಿವ ಯು.ಟಿ ಖಾದರ್ ಅರ್ನಾಬ್ ಗೋಸ್ವಾಮಿ ವಾಟ್ಸಾಪ್ ಚಾಟ್ ಬಗ್ಗೆ ಕೇಂದ್ರ ಯಾಕೆ ಮಾತನಾಡುತ್ತಿಲ್ಲ: ಸೋನಿಯಾ ಪ್ರಶ್ನೆ  ಒತ್ತಡ ರಾಜಕೀಯಕ್ಕೆ ಮಣಿದು ಖಾತೆ ಮರು ಹಂಚಿಕೆ  ಮಾಡಿದ ಮುಖ್ಯಮಂತ್ರಿ ಬಿಎಸ್ ವೈ ಶಿವಮೊಗ್ಗದಲ್ಲಿ ನಡೆದದ್ದು ಭೂ ಕಂಪನವಲ್ಲ, ರೈಲ್ವೆ ಕ್ರಷರ್ ಸ್ಫೋಟ: 10ಕ್ಕೂ ಅಧಿಕ ಸಾವು… ಸಾಲು ಮರದ ತಿಮ್ಮಕ್ಕ ವೃಕ್ಷೋದ್ಯಾನವನ ಇಂದು ಸುಬ್ರಹ್ಮಣ್ಯದಲ್ಲಿ ಉದ್ಘಾಟನೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಇಂದು ರಾಜ್ಯ ಧಾರ್ಮಿಕ ಪರಿಷತ್ ವಿಶೇಷ… ಶಿವಮೊಗ್ಗ, ಭದ್ರಾವತಿ, ಚಿಕ್ಕಮಗಳೂರಿನಲ್ಲಿ ಭೂ ಕಂಪನದ ಅನುಭವ: ಮನೆಯಿಂದ ಬೀದಿಗೆ ಓಡಿದ ಜನರು ಮಂಗಳೂರಿನಲ್ಲಿ  ಶ್ರೀ ಸುಧೀಂದ್ರ ತೀರ್ಥ ಸ್ವಾಮೀಜಿಯವರ 5ನೇ ಪುಣ್ಯತಿಥಿ ಆಚರಣೆ ಮಡಿಕೇರಿ ತಾಲೂಕು ಅಕ್ರಮ- ಸಕ್ರಮ ಸಮಿತಿ ಸಭೆಯಲ್ಲಿ ಹಲವು ಅರ್ಜಿಗಳ ವಿಲೇವಾರಿ  … ನಟಿ ರಾಗಿಣಿ ದ್ವಿವೇದಿಗೆ ಕೊನೆಗೂ ಸಿಕ್ಕಿತು ಜಾಮೀನು: 140 ದಿನಗಳ ಬಳಿಕ ಬಿಡುಗಡೆ…

ಇತ್ತೀಚಿನ ಸುದ್ದಿ

ಲವ್ ಜಿಹಾದ್ ಕಾನೂನು ಜಾರಿಗೆ ತರುವ ಬಗ್ಗೆ ಯಾವುದೇ ಗೊಂದಲ ಇಲ್ಲ: ಗೃಹ ಸಚಿವ ಬಸವರಾಜ ಬೊಮ್ಮಾಯಿ

December 3, 2020, 6:19 PM

ಉಡುಪಿ(reporterkarnataka news): ರಾಜ್ಯದಲ್ಲಿ ಲವ್ ಜಿಹಾದ್ ವಿರುದ್ಧ ಕಾನೂನು ಬಂದೇ ಬರುತ್ತದೆ. ಲವ್ ಜಿಹಾದ್ ವಿರುದ್ಧ ಕಾನೂನು ವಿಚಾರ ನಮ್ಮಲ್ಲಿ ಯಾವುದೇ ಗೊಂದಲಗಳು ಇಲ್ಲ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಕೃಷ್ಣ ನಗರಿ ಉಡುಪಿಯಲ್ಲಿ ಲವ್ ಜಿಹಾದ್ ಬಗ್ಗೆ ಮಾತನಾಡಿದ ಅವರು, ಅಲಹಾಬಾದ್ ಹೈಕೋರ್ಟ್ ಲವ್ ಜಿಹಾದ್ ವಿಚಾರದಲ್ಲಿ ಆದೇಶ ಕೊಟ್ಟಿದೆ. ಉತ್ತರ ಪ್ರದೇಶ,  ಹರಿಯಾಣ, ಮಧ್ಯಪ್ರದೇಶ ಸರಕಾರಗಳು ಜಾರಿಗೆ ತರುವ ಚಿಂತನೆ ಮಾಡಿದೆ. ಕರ್ನಾಟಕ ಸರ್ಕಾರ ಕೂಡ ಈ ಬಗ್ಗೆ ಚಿಂತನೆಯನ್ನು ನಡೆಸಿದೆ ಎಂದರು.

ಲವ್ ಜಿಹಾದ್ ಕಾನೂನು ಹೇಗೆ ಜಾರಿಗೆ ತರಬೇಕು? ಯಾವ ಅಂಶಗಳನ್ನು ಸೇರಿಸಬೇಕು? ಎಂಬುವುದರ ಕುರಿತು ಉತ್ತರ ಪ್ರದೇಶ ಸರಕಾರ ಅಧಿಸೂಚನೆಯನ್ನು ಹೊರಡಿಸಿಯಾಗಿದೆ. ಅದರ ಪ್ರತಿಯನ್ನು ಪಡೆಯಲು ನಮ್ಮ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಮುಖ್ಯಮಂತ್ರಿ ಯಡಿಯೂರಪ್ಪ ಇದನ್ನು ಒಪ್ಪಿದ್ದಾರೆ. ಮಂಗಳೂರು ನಲ್ಲಿ ನಡೆದ ಕಾರ್ಯಕಾರಿಣಿಯಲ್ಲಿ ಇದನ್ನು ಘೋಷಣೆ ಮಾಡಿದ್ದಾರೆ ಎಂದು ಗೃಹ ಸಚಿವರು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು