1:17 AM Saturday16 - January 2021
ಬ್ರೇಕಿಂಗ್ ನ್ಯೂಸ್
ರಾಜ್ಯದ ಎಲ್ಲ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರ ನೇಮಕ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ ಭದ್ರಾವತಿ: ಕ್ಷಿಪ್ರ ಕಾರ್ಯಪಡೆ ಕಚೇರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೂಮಿ… ಕೊರೊನಾ ತಡೆಗೆ ಸ್ವದೇಶಿ ವ್ಯಾಕ್ಸಿನ್ ಭಾರತದ ಸಾಧನೆಯ ಪ್ರತೀಕ: ಪ್ರಧಾನಿ ನರೇಂದ್ರ ಮೋದಿ ಲಿಂಗಸುಗೂರು: ಕೋವಿಡ್ 19 ಲಸಿಕೆ ಬಾಕ್ಸ್ ಗೆ ಪೂಜೆ ಸಲ್ಲಿಸಿ ಬರಮಾಡಿಕೊಂಡ ತಾಲೂಕು… ಬ್ಲ್ಯಾಕ್ ಮೇಲ್ ಮಾಡಿ ಮಂತ್ರಿ ಸ್ಥಾನ: ಹಾಲಿ ನ್ಯಾಯಾಧೀಶರಿಂದ ನ್ಯಾಯಾಂಗ ತನಿಖೆಗೆ ಎಸ್.… ಮಲ್ಪೆಯಲ್ಲಿ ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ್ದ ಬೋಟ್ ನಿಂದ ಬಿದ್ದು ಮೀನುಗಾರ ಸಾವು ಸರಕಾರಿ ನೌಕರರ ಕ್ರೀಡಾಕೂಟದಲ್ಲಿ ಮಹಿಳಾ ಸಿಬ್ಬಂದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಕೋಲಾರ ಜಿಲ್ಲಾಧಿಕಾರಿ… ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷರಾಗಿ  ದೇರಳಕಟ್ಟೆ ರೆಂಜಡಿಯ ಡಾ. ಅಬ್ದುಲ್ ಶಕೀಲ್ ನೇಮಕ ನೂತನ ಸಚಿವ ಎಸ್. ಅಂಗಾರರಿಗೆ ಸಿಹಿ ತಿನ್ನಿಸಿ ಶುಭ ಹಾರೈಸಿದ ಬಿಜೆಪಿ ಭೀಷ್ಮ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ

ಇತ್ತೀಚಿನ ಸುದ್ದಿ

ಮಾಜಿ ಸಚಿವ ಯು.ಟಿ.ಖಾದರ್ ಕೊಲೆ ಯತ್ನ ಪ್ರಕರಣ: ಕೊನೆಗೂ ಬಯಲಾಯಿತು ನಿಜಾಂಶ

December 24, 2020, 5:00 PM

ಮಂಗಳೂರು(reporterkarnataka news): ಮಾಜಿ ಸಚಿವ ಯು.ಟಿ.ಖಾದರ್ ಕೊಲೆಗೆ ಯತ್ನ ಪ್ರಕರಣ ಸುಖಾಂತ್ಯ ಕಂಡಿದೆ. ಆರೋಪಿಯನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದಾಗ ವಾಸ್ತವಾಂಶ ಬಹಿರಂಗಗೊಂಡಿದೆ. ಬಂಧಿತ ಆರೋಪಿಸಿದರು ಕಾಂಗ್ರೆಸ್ ಕಾರ್ಯಕರ್ತನಾಗಿದ್ದು , ಕುಚೇಷ್ಠೆಗಷ್ಟೇ ಮಾಜಿ ಸಚಿವರನ್ನು ಹಿಂಬಾಲಿಸಿದ್ದ ಎನ್ನುವುದು ಬಹಿರಂಗವಾಗಿದೆ.

ತುರ್ತಾಗಿ ಬೆಂಗಳೂರಿಗೆ ತೆರಳಬೇಕಾಗಿದ್ದ ಯು.ಟಿ. ಖಾದರ್ ಅವರು ಬುಧವಾರ ಸಂಜೆ ದೇರಳಕಟ್ಟೆಯಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಕಾರಿನಲ್ಲಿ ತೆರಳುತ್ತಿದ್ದರು. ಈ ಸಂದರ್ಭದಲ್ಲಿ ಬೈಕ್ ನಲ್ಲಿ ವ್ಯಕ್ತಿಯೊಬ್ಬ ಖಾದರ್ ಕಾರನ್ನು ಹಿಂಬಾಲಿಸಿದ್ದ. ಎರಡೆರಡು ಬಾರಿ ಕಾರಿನ ಸಮೀಪದಿಂದ ಬೈಕ್ ಪಾಸ್ ಆಗಿತ್ತು. ಇದನ್ನು ಗಮನಿಸಿದ ಬೆಂಗಾವಲು ಪಡೆಯ ಪೊಲೀಸರು ಆತನನ್ನು ಬಂಧಿಸಬೇಕೆನ್ನುವಷ್ಟರಲ್ಲಿ ನಂತೂರು ಬಳಿ ಯು ಟರ್ನ್ ಹೊಡೆದು ತಪ್ಪಿಸಿಕೊಂಡಿದ್ದ. ಬೆಂಗಾವಲು ಪೊಲೀಸರು ಬೈಕ್ ನ ನಂಬರ್ ನಮೂದಿಸಿಕೊಂಡು ಟ್ರಾಫಿಕ್ ಪೊಲೀಸರಿಗೆ ಮಾಹಿತಿ ನೀಡಿದ್ದರು. ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಬೈಕ್ ಪತ್ತೆ ಹಚ್ಚಿ ಆತನ ಬಂಧಿಸಿ ವಿಚಾರಣೆಗೊಳಪಡಿಸಿದಾಗ ನಿಜ ವಿಷಯ ಬಹಿರಂಗಗೊಂಡಿದೆ. ಅರೋಪಿಯು ಕಾಂಗ್ರೆಸ್ ಕಾರ್ಯಕರ್ತೆಯೊಬ್ಬರ ಪುತ್ರ ಎನ್ನಲಾಗಿದೆ. ಯಾವುದೇ ಕ್ರಿಮಿನಲ್ ಹಿನ್ನೆಲೆ ಇಲ್ಲದ ಈ ಯುವಕ ಕೇವಲ ತಮಾಷೆಗಾಗಿ ಖಾದರ್ ಅವರ ಬೈಕ್ ಹಿಂಬಾಲಿಸಿದ್ದಾನೆ ಎಂದು ತಿಳಿದು ಬಂದಿದೆ.

ಈ ಮಧ್ಯೆ ನಿಜಾಂಶ ತಿಳಿಯುತ್ತಿದ್ದಂತೆ ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದ ಎದುರು ಹಮ್ಮಿಕೊಂಡಿರುವ ಪ್ರತಿಭಟನೆಯನ್ನು ಕಾಂಗ್ರೆಸ್ ರದ್ದುಪಡಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು