12:13 AM Monday15 - September 2025
ಬ್ರೇಕಿಂಗ್ ನ್ಯೂಸ್
ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ

ಇತ್ತೀಚಿನ ಸುದ್ದಿ

ಮಾದಕ ವ್ಯಸನ ತಡೆಗಟ್ಟುವುದು ನಮ್ಮೆಲ್ಲರ ಕರ್ತವ್ಯ: ಕರಾವಳಿ ಪೊಲೀಸ್ ಪಡೆಯ ಇನ್ಸ್ ಪೆಕ್ಟರ್ ಪ್ರಮೋದ್ ಕುಮಾರ್

03/12/2024, 14:39

ಚಿತ್ರ :ಅನುಷ್ ಪಂಡಿತ್ ಮಂಗಳೂರು
ಮಂಗಳೂರು(reporterkarnataka.com): ಮಾದಕ ವ್ಯಸನಿಯು ಅಪರಾಧಿಕ ಕೃತ್ಯಗಳಲ್ಲಿ ಭಾಗವಹಿಸಿ ಜೈಲು ಶಿಕ್ಷೆಯನ್ನು ಅನುಭವಿಸುತ್ತಾನೆ. ಇದನ್ನು ತಡೆಗಟ್ಟುವುದು ನಮ್ಮೆಲ್ಲರ ಕರ್ತ್ಯವ್ಯ ಎಂದು ಕರಾವಳಿ ಪೊಲೀಸ್ ಪಡೆಯ ಇನ್ಸ್ ಪೆಕ್ಟರ್ ಪ್ರಮೋದ್ ಕುಮಾರ್ ಹೇಳಿದರು.
ಕೇಂದ್ರ ಸರ್ಕಾರದ ಯುವಜನ ಮತ್ತು ಕ್ರಿಡಾ ಇಲಾಖೆಯ ನೆಹರು ಯುವಕ ಕೇಂದ್ರದ ಆಶ್ರಯದಲ್ಲಿ ಜಪ್ಪಿನಮೊಗರು ದಕ್ಷಿಣ ಜಿಲ್ಲಾ ಗ್ಯಾರೇಜ್ ಮಾಲಕರ ಸಂಘದ ಸಭಾಭವನದಲ್ಲಿ ಇತ್ತೀಜಿಗೆ ನಡೆದ ಮಾದಕವ್ಯಸನ ಮುಕ್ತ ಸಮಾಜ ನಿರ್ಮಾಣದ ಬಗ್ಗೆ ಜನಜಾಗೃತಿ ಹಾಗೂ ಮಾದಕ ವ್ಯಸನ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ತಾಲೂಕು ವೈದ್ಯಾಧಿಕಾರಿ ಡಾ.|ಸುಜಯ ಭಂಡಾರಿ ಅವರು ಮಾತನಾಡಿ, ಮಾದಕ ದ್ರವ್ಯಗಳ ವ್ಯಸನಿಯು ತನ್ನ ದೈಹಿಕ ಆರೋಗ್ಯ ಮತ್ತು ಮಾನಸಿಕ ಆರೋಗ್ಯವನ್ನು ಕಡಿಸುವುದರ ಜೊತೆಗೆ ಸಮಾಜದ ಸ್ವಾಸ್ಥ್ಯವನ್ನು ಕೆಡಿಸುತ್ತಾನೆ ಎಂದು ನುಡಿದರು.


ಅಧ್ಯಕ್ಷತೆಯನ್ನು ದಕ್ಷಿಣ ಕನ್ನಡ ಜಿಲ್ಲಾ ವೈದ್ಯಾಧಿಕಾರಿ ಡಾ. ಎಚ್. ಆರ್. ತಿಮ್ಮಯ್ಯ ವಹಿಸಿದ್ದರು. ನೆಹರು ಯುವಕ ಕೇಂದ್ರದ ಅಧಿಕಾರಿ ಜಗದೀಶ್ ಪ್ರಸ್ತಾವನೆ ಗೈದರು.


ಅತಿಥಿಗಳಾಗಿ ಸುಧಾಕರ್. ಜೆ, ದೀಪಕ್ ಸುವರ್ಣ, ಎಂ, ದಿವಾಕರ್, ಮುರಳಿ ಕೃಷ್ಣ, ಎ .ಜನಾರ್ಧನ್, ದಿನಕರ್ ಕುಲಾಲ್ ಮೊದಲಾದವರು ಭಾಗವಹಿಸಿದ್ದು, ಜಿ.ಎಂ, ಸ್ಪೋರ್ಟ್ಸ್ ಕ್ಲಬ್ ನ ಪ್ರಧಾನ ಕಾರ್ಯದರ್ಶಿ ಪುಷ್ಪರಾಜ್ ಶೆಟ್ಟಿ ಸ್ವಾಗತಿಸಿದರು. ಸಂಗಮ್ ಫ್ರೆಂಡ್ಸ್ ಕ್ಲಬ್ ನ ಮಾಜಿ ಅಧ್ಯಕ್ಷ ಶ್ರೀನಿವಾಸ್ ಕೆ. ವಂದಿಸಿದರು. ಕೃಷ್ಣ ಶ್ರೀಯಾನ್ ನಿರೂಪಿಸಿದರು. ಕಾರ್ಯಕ್ರಮಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಗ್ಯಾರೇಜು ಮಾಲಕರ ಸಂಘ (ರಿ) ಜಿ. ಎಂ. ಸ್ಪೋರ್ಟ್ಸ್ ಕ್ಲಬ್, ಸಂಗಮ್ ಫ್ರೆಂಡ್ಸ್ ಕ್ಲಬ್ (ರಿ), ಜಪ್ಪಿನಮೊಗರು, ಶ್ರೀ ಸುಬ್ರಮಣ್ಯ ಮಹಾ ಗಣಪತಿ ಸ್ಪೋರ್ಟ್ಸ್ ಕ್ಲಬ್, ಚೋಕುರು ಹಳೆಯಂಗಡಿ ಸಹ ಭಾಗಿತ್ವ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು