ಇತ್ತೀಚಿನ ಸುದ್ದಿ
ಮಾದಕ ದ್ರವ್ಯ ಜಾಲ ತನಿಖೆ: ಐದು ಪಬ್ ಗಳ ಮೇಲೆ ಪೊಲೀಸರ ದಾಳಿ
October 4, 2020, 12:03 PM

ಬೆಂಗಳೂರು(reporterkarnataka news): ಮಾದಕ ದ್ರವ್ಯ ಜಾಲದ ತನಿಖೆ ನಡೆಸುತ್ತಿರುವ ಸಿಸಿಬಿ ಬೆಂಗಳೂರಿನ ಐದು ಪಬ್ ಗಳ ಮೇಲೆ ದಾಳಿ ನಡೆಸಿದೆ. ಪಬ್ ಗಳಲ್ಲಿ ಆಯೋಜಿಸಲಾಗುತ್ತಿರುವ ಪಾರ್ಟಿಗಳಲ್ಲಿ ಮಾದಕ ದ್ರವ್ಯ ಬಳಕೆಯಾಗುತ್ತಿದೆ ಎಂಬ ಆರೋಪ ಕೇಳಿ ಬಂದಿತ್ತು.
ಈ ದಾಳಿ ಬಂಧಿತ ಡ್ರಗ್ಸ್ ಪೆಡ್ಲರ್ ನೀಡಿದ ಮಾಹಿತಿ ಆಧಾರದಲ್ಲಿ ನಡೆಸಲಾಗಿದೆ ಎಂದು ಹೇಳಲಾಗುತ್ತಿದೆ. ಈ ಸಂಬಂಧ ಹೆಚ್ಚಿನ ಮಾಹಿತಿ ನೀಡಲು ಪೊಲೀಸರು ನಿರಾಕರಿಸಿದ್ದಾರೆ