ಇತ್ತೀಚಿನ ಸುದ್ದಿ
ಮದುವೆ ಮುಗಿಸಿ ಹಿಂತಿರುಗುತ್ತಿದ್ದ ಯುವತಿ ಮೇಲೆ ಅತ್ಯಾಚಾರ: ಆಟೋ ಚಾಲಕನ ಬಂಧನ
December 18, 2020, 9:37 AM

ಬೆಂಗಳೂರು(reporterkarnataka news): ಯುವತಿ ಮೇಲೆ ಅತ್ಯಾಚಾರ ಎಸಗಿದ ಆಟೋ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಬೆಂಗಳೂರು ಸಮೀಪದ ದೇವನಹಳ್ಳಿಯ ಮುಬಾರಕ್ ಎಂದು ಗುರುತಿಸಲಾಗಿದೆ.
ಯುವತಿ ಶಿಕ್ಷಣದ ಜತೆಗೆ ಮದುವೆಯಲ್ಲಿ ಸ್ವಾಗತಕಾರರಾಗಿ ಪಾರ್ಟ್ ಟೈಂ ಕೆಲಸ ಮಾಡುತ್ತಿದ್ದರು. ಮದುವೆ ಮುಗಿಸಿ ಮನೆಗೆ ಮುಬಾರಕ್ ಆಟೋದಲ್ಲಿ ತೆರಳಿದ್ದರು. ಈ ಸಂದರ್ಭದಲ್ಲಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸರಿಗೆ ದೂರು ನೀಡಲಾಗಿದೆ. ಆರೋಪಿಯನ್ನು ಬಂಧಿಸಲಾಗಿದೆ.
ಬೆಂಗಳೂರಿನ ಸಂಪಿಗೆ ಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ