5:11 AM Saturday16 - January 2021
ಬ್ರೇಕಿಂಗ್ ನ್ಯೂಸ್
ರಾಜ್ಯದ ಎಲ್ಲ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರ ನೇಮಕ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ ಭದ್ರಾವತಿ: ಕ್ಷಿಪ್ರ ಕಾರ್ಯಪಡೆ ಕಚೇರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೂಮಿ… ಕೊರೊನಾ ತಡೆಗೆ ಸ್ವದೇಶಿ ವ್ಯಾಕ್ಸಿನ್ ಭಾರತದ ಸಾಧನೆಯ ಪ್ರತೀಕ: ಪ್ರಧಾನಿ ನರೇಂದ್ರ ಮೋದಿ ಲಿಂಗಸುಗೂರು: ಕೋವಿಡ್ 19 ಲಸಿಕೆ ಬಾಕ್ಸ್ ಗೆ ಪೂಜೆ ಸಲ್ಲಿಸಿ ಬರಮಾಡಿಕೊಂಡ ತಾಲೂಕು… ಬ್ಲ್ಯಾಕ್ ಮೇಲ್ ಮಾಡಿ ಮಂತ್ರಿ ಸ್ಥಾನ: ಹಾಲಿ ನ್ಯಾಯಾಧೀಶರಿಂದ ನ್ಯಾಯಾಂಗ ತನಿಖೆಗೆ ಎಸ್.… ಮಲ್ಪೆಯಲ್ಲಿ ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ್ದ ಬೋಟ್ ನಿಂದ ಬಿದ್ದು ಮೀನುಗಾರ ಸಾವು ಸರಕಾರಿ ನೌಕರರ ಕ್ರೀಡಾಕೂಟದಲ್ಲಿ ಮಹಿಳಾ ಸಿಬ್ಬಂದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಕೋಲಾರ ಜಿಲ್ಲಾಧಿಕಾರಿ… ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷರಾಗಿ  ದೇರಳಕಟ್ಟೆ ರೆಂಜಡಿಯ ಡಾ. ಅಬ್ದುಲ್ ಶಕೀಲ್ ನೇಮಕ ನೂತನ ಸಚಿವ ಎಸ್. ಅಂಗಾರರಿಗೆ ಸಿಹಿ ತಿನ್ನಿಸಿ ಶುಭ ಹಾರೈಸಿದ ಬಿಜೆಪಿ ಭೀಷ್ಮ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ

ಇತ್ತೀಚಿನ ಸುದ್ದಿ

ಮಾಜಿ ಮೇಯರ್, ಕಾಂಗ್ರೆಸ್ ಹಿರಿಯ ನಾಯಕ, ಸಜ್ಜನ ರಾಜಕಾರಣಿ ಕೆ.ಕೆ. ಮೆಂಡನ್ ಇನ್ನಿಲ್ಲ

December 4, 2020, 8:11 PM

ಮಂಗಳೂರು(reporterkarnataka news):

ಮಂಗಳೂರು ಮಾಜಿ ಮೇಯರ್,ಕಾಂಗ್ರೆಸ್ ಹಿರಿಯ ನಾಯಕ ಮುಖಂಡ, ಸಜ್ಜನ ರಾಜಕಾರಣಿ ಎಂದೇ ಖ್ಯಾತರಾದ ಕೆ.ಕೃಷ್ಣಪ್ಪ ಮೆಂಡನ್ (89) ಶುಕ್ರವಾರ ಮುಂಜಾನೆ ಅಳಪೆ ಸ್ವಗೃಹದಲ್ಲಿ ನಿಧನರಾದರು. 

ಅವರು ನಗರ ಪಾಲಿಕೆ ಕಂಕನಾಡಿ ,ಅಳಪೆ ವಾರ್ಡ್ ನಿಂದ ನಾಲ್ಕು ಬಾರಿ ಕಾರ್ಪೊರೇಟರ್ ಆಗಿ ಆಯ್ಕೆಯಾಗಿದ್ದರು. ಪಾಲಿಕೆ ಸ್ಥಾಯಿ ಸಮಿತಿ ಅಧ್ಯಕ್ಷ ರಾಗಿ, ಮೇಯರ್  ಆಗಿ ಕಾರ್ಯನಿರ್ವಹಿಸಿದ್ದರು.

 ಸಜ್ಜನ ರಾಜಕಾರಣಿಯೆಂದೇ ಗುರುತಿಸಲ್ಪಟ್ಟ ಅವರು, ಅತ್ತಾವರ ಶ್ರೀ ವಿಷ್ಣುಮೂರ್ತಿ ಉಮಾಮಹೇಶ್ವರ  ದೇವಸ್ಥಾನದ ಮೊಕ್ತೇಸರರಾಗಿದ್ದರು. ಅಳಪೆ ಕರ್ಮಾರ್ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾಗಿ, ಕರಾವಳಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು. ದ.ಕ.ಜಿಲ್ಲಾ ಗಾಣಿಗ ಸಂಘದ ಅಧ್ಯಕ್ಷರಾಗಿದ್ದರು.

ಅವರು ಪತ್ನಿ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

ಗಣ್ಯರ ಸಂತಾಪ: ಕೇಂದ್ರ ಮಾಜಿ ಸಚಿವರಾದ ಜನಾರ್ದನ ಪೂಜಾರಿ, ಎಂ.ವೀರಪ್ಪ ಮೊಯಿಲಿ, ಮಾಜಿ ಸಚಿವ ರಮಾನಾಥ ರೈ, ಮಾಜಿ ಶಾಸಕ ಜೆ. ಆರ್ .ಲೋಬೊ, ಮೂಡ ಮಾಜಿ ಅಧ್ಯಕ್ಷ ಸುರೇಶ್ ಬಲ್ಲಾಳ್ ಸಂತಾಪ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು