ಇತ್ತೀಚಿನ ಸುದ್ದಿ
ಮಲೆ ಮಹದೇಶ್ವರ ಬೆಟ್ಟಕ್ಕೆ ಸಾರ್ವಜನಿಕರ ಪ್ರವೇಶ ನಿರ್ಬಂಧ
October 25, 2020, 8:57 AM

ಚಾಮರಾಜನಾಗರ(reporterkarnataka news): ರಾಜ್ಯದ ಪ್ರಸಿದ್ದ ಮಲೆ ಮಹದೇಶ್ವರ ಬೆಟ್ಟಕ್ಕೆ ಎರಡು ದಿನಗಳ ಕಾಲ ಪ್ರವೇಶ ನಿರ್ಬಂಧ ವಿಧಿಸಲಾಗಿದೆ. ಕೊರೊನಾ ಹಿನ್ನೆಲೆಯಲ್ಲಿ ಈ ಕ್ರಮ ತೆಗೆದುಕೊಳ್ಳಲಾಗಿದೆ. ದಸರಾ ಹಿನ್ನೆಲೆಯಲ್ಲಿ ಪ್ರತಿ ವರ್ಷ ಸಾವಿರಾರು ಮಂದಿ ಮಲೆ ಮಹದೇಶ್ವರ ಬೆಟ್ಟಕ್ಕೆ ಭೇಟಿ ನೀಡುತ್ತಿದ್ದರು.
ಕೊರೊನಾ ನಿಯಂತ್ರಿಸಲು ಇದು ಅನಿವಾರ್ಯವಾಗಿದೆ ಎಂದು ಚಾಮರಾಜನಗರ ಜಿಲ್ಲಾಡಳಿತ ಹೇಳಿದೆ.