ಇತ್ತೀಚಿನ ಸುದ್ದಿ
ಮಂಗಳೂರು ಏರ್ ಪೋರ್ಟ್ ಗೆ ಕೋಟಿ- ಚೆನ್ನಯ್ಯರ ನಾಮಕರಣ: ಸಿಎಂಗೆ ಕರಾವಳಿ ಶಾಸಕರ ನಿಯೋಗ ಮನವಿ
December 11, 2020, 5:05 PM

ಬೆಂಗಳೂರು(reporterkarnataka news): ತುಳುನಾಡ ವೀರ ಪುರುಷರಾದ ಕೋಟಿ – ಚೆನ್ನಯ್ಯರ ಹೆಸರನ್ನು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ನಾಮಕರಣ ಮಾಡುವ ಪ್ರಸ್ತಾವವನ್ನು ಸಚಿವ ಸಂಪುಟ ಸಭೆಯಲ್ಲಿ ಅನುಮೋದಿಸಿ ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರಿಗೆ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ನೇತೃತ್ವದಲ್ಲಿ ಮನವಿ ಮಾಡಲಾಯಿತು.
ಈ ಸಂದರ್ಭದಲ್ಲಿ ಸರಕಾರದ ಮುಖ್ಯಸಚೇತಕ ಸುನಿಲ್ ಕುಮಾರ್, ಶಾಸಕರಾದ ರಘುಪತಿ ಭಟ್, ಸಂಜೀವ ಮಠಂದೂರು, ರಾಜೇಶ್ ನಾಯ್ಕ್, ಡಾ.ಭರತ್ ಶೆಟ್ಟಿ, ವೇದವ್ಯಾಸ ಕಾಮತ್ ಹಾಗೂ ಹರೀಶ್ ಪೂಂಜಾ ಉಪಸ್ಥಿತರಿದ್ದರು.