10:01 PM Monday25 - January 2021
ಬ್ರೇಕಿಂಗ್ ನ್ಯೂಸ್
ಬಿಗ್ ಬಾಸ್ ಖ್ಯಾತಿಯ ನಟಿ ಜಯಶ್ರೀ ರಾಮಯ್ಯ ಆತ್ಮಹತ್ಯೆ: ಕುಟುಂಬದ ಸಮಸ್ಯೆ ಕಾರಣ? ಮಂಗಳೂರಿನ ನರ್ಸಿಂಗ್ ಕಾಲೇಜಿನ 4 ಮಂದಿ ವಿದ್ಯಾರ್ಥಿನಿಯರಿಗೆ ಕೊರೊನಾ: ಪಾಲಕರಲ್ಲಿ ಮತ್ತೆ ಭೀತಿ… ಗಣರಾಜ್ಯೋತ್ಸವ ಪರೇಡ್ ಗೆ ಆಯ್ಕೆಯಾದ ಕರ್ನಾಟಕದ ಟ್ಲಾಬ್ಲೊದಲ್ಲಿ ಕನ್ನಡ ಧ್ವಜ ನಾಪತ್ತೆ ಕಟೀಲು ಮೇಳ ಸೇವೆ ಆಟಗಳು:  ಇಂದು ಎಲ್ಲೆಲ್ಲಿ?  ನೀವೇ ನೋಡಿ ಬಡವರನ್ನು ಬೀದಿ ಪಾಲು ಮಾಡಿದರೆ ಜೋಕೆ: ಪಾಲಿಕೆಗೆ ಇಂಟಕ್ ರಾಷ್ಟ್ರೀಯ ಕಾರ್ಯದರ್ಶಿ ರಾಕೇಶ್… ವಿ.ವಿ ಕಾಲೇಜಿನಲ್ಲಿ ಪ್ರೌಢ ಶಾಲಾ ರಾಷ್ಟ್ರೀಯ ಸೇವಾಯೋಜನೆಯ ಯೋಜನಾಧಿಕಾರಿಗಳಿಗೆ ರಾಜ್ಯ ಮಟ್ಟದ ಕಾರ್ಯಾಗಾರ ಬಲ್ಯ ಸಮೀಪ ಕಾರು- ಬೊಲೆರೋ ಅಪಘಾತ:  ಒಬ್ಬ ಸಾವು, 4 ಮಂದಿ ತೀವ್ರ… ಕಾಸರಗೋಡು: ಮೆಡಿಕಲ್ ಶಾಪ್ ಗೆ ಔಷಧ ಖರೀದಿಸಲು ಬಂದ ವ್ಯಕ್ತಿಯನ್ನು ಗುಂಪೊಂದು ಥಳಿಸಿ… ಕಾಳು ಹಾಕಿ ಕೋಳಿ ಕದಿಯುವ ಭಿಕ್ಷುಕರಿದ್ದಾರೆ ಎಚ್ಚರಿಕೆ: ನಿಮ್ಮ ಮನೆಗೂ ಬಂದಾರು ಜೋಕೆ!… ವಿವಾದಾತ್ಮಕ ವಾಟ್ಸಾಪ್ ಚಾಟ್ : ಮಹಾರಾಷ್ಟ್ರ ಸರಕಾರದಿಂದ ಅರ್ನಾಬ್ ಮತ್ತೆ ಬಂಧನ ಸಾಧ್ಯತೆ

ಇತ್ತೀಚಿನ ಸುದ್ದಿ

ಮಂಗಳೂರು ಪುರಭವನದಲ್ಲಿ ಜಿಲ್ಲಾಮಟ್ಟದ ಪಿಎಂ ಸ್ವನಿಧಿ ಬೃಹತ್ ಸಾಲ ಉತ್ಸವ ಉದ್ಘಾಟನೆ

December 1, 2020, 11:28 AM

ಮಂಗಳೂರು(reporterkarnataka news):

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ’ಪ್ರಧಾನಮಂತ್ರಿ ಬೀದಿಬದಿ ವ್ಯಾಪಾರಿಗಳ ಆತ್ಮನಿರ್ಭರ್ ನಿಧಿ’ (ಪಿಎಂ ಸ್ವನಿಧಿ) ದಕ್ಷಿಣ ಕನ್ನಡ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸುವ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಬೃಹತ್ ’ಪಿಎಂ ಸ್ವನಿಧಿ ಸಾಲ-ಉತ್ಸವ ಹಾಗೂ ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಮಾಹಿತಿ ಕಾರ್ಯ ಕ್ರಮವನ್ನು ಮಂಗಳವಾರ ನಗರದ ಪುರಭವನದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಉದ್ಘಾಟಿಸಿದರು.

ಉತ್ಸವದಲ್ಲಿ ಬೀದಿಬದಿ ವ್ಯಾಪಾರಿಗಳಿಗೆ ಸ್ಥಳದಲ್ಲಿಯೇ ಸಾಲ ಮಂಜೂರು ಮಾಡುವುದು, ವಿವಿಧ ನಗರ ಸ್ಥಳೀಯ ಸಂಸ್ಥೆಗಳ ಬೀದಿಬದಿ ವ್ಯಾಪಾರಿಗಳಿಗೆ ಹಾಗೂ ಕಿಸಾನ್ ಕ್ರೆಡಿಟ್ ಕಾರ್ಡ್ ಮೀನುಗಾರಿಕಾ ಮತ್ತು ಹೈನುಗಾರಿಕೆಯ ಫಲಾನುಭವಿಗಳಿಗೆ ಸಾಂಕೇತಿಕವಾಗಿ ಸಾಲ ಮಂಜೂರಾತಿ ಪತ್ರಗಳನ್ನು ವಿತರಿಸುವುದು, ಸಾಲ ಮಂಜೂರಾತಿಗೆ ಸಂಬಂಧಿಸಿದ ಸಮಸ್ಯೆಗಳನ್ನ ಪರಿಹರಿಸುವುದು, ಕೇಂದ್ರ ಸರ್ಕಾರದ ವಿವಿಧ ಜನಪರ ಯೋಜನೆಗಳಾದ ಮುದ್ರ, ಪಿಎಂಇಜಿಪಿ, ಪಿಎಂಎವೈ ಮುಂತಾದವುಗಳ ಬಗ್ಗೆ ಮಾಹಿತಿ ನೀಡುವುದು ಮುಂತಾದ ಕಾರ್ಯಕ್ರಮಗಳು ಏಕಕಾಲದಲ್ಲಿ ಮಂಗಳವಾರ ಸಂಜೆ ತನಕ ನಡೆಯಲಿದೆ.

ಜಿಲ್ಲೆಯಾದ್ಯಂತ ಕಾರ್ಯಾಚರಿಸುತ್ತಿರುವ ವಿವಿಧ 

ರಾಷ್ಟ್ರೀಕೃತ ಹಾಗೂ ಖಾಸಗಿ ರಂಗದ ಅಗ್ರಗಣ್ಯ 

ಬ್ಯಾಂಕುಗಳು ತಮ್ಮ ಕೌಂಟರ್‌ಗಳನ್ನು ತೆರೆದಿದ್ದವು.

ಸ್ಥಳದಲ್ಲಿಯೇ ಸಾಲ ಮಂಜೂರಾತಿಗೆ ಕ್ರಮಕೈಗೊಂಡಿವೆ.

 ಬೀದಿಬದಿವ್ಯಾಪಾರಿಗಳು ಡಿಜಿಟಲ್ ಪಾವತಿಗಾಗಿ QR code/UPID ಸೌಲಭ್ಯವನ್ನು ಮೊಬೈಲ್ ಫೋನ್‌ಗಳಲ್ಲಿ ಅಳವಡಿಸಿಕೊಳ್ಳಲು   ’ಫೋನ್ ಪೇ’ ಹಾಗೂ ’ಏರ್‌ಟೆಲ್ ಪೇಮೆಂಟ್ ಬ್ಯಾಂಕ್’ Payment Aggregators ತಮ್ಮ ಸೇವೆಯನ್ನು ಒದಗಿಸಲಿದ್ದಾರೆ. 

ಮಂಗಳೂರು ಮಹಾನಗರಪಾಲಿಕೆ, ಪುತ್ತೂರು ಹಾಗೂ ಉಳ್ಳಾಲ ನಗರಸಭೆ, ಬಂಟ್ವಾಳ, ಮೂಡಬಿದಿರೆ ಹಾಗೂ ಸೋಮೇಶ್ವರ ಪುರಸಭೆ, ಬೆಳ್ತಂಗಡಿ, ಸುಳ್ಯ, ಮೂಲ್ಕಿ, ಕೋಟೆಕಾರ್, ವಿಟ್ಲ ಹಾಗೂ ಕಡಬ ನಗರ ಪಂಚಾಯತ್ ವ್ಯಾಪ್ತಿಗಳಲ್ಲಿ ಬೀದಿಬದಿವ್ಯಾಪಾರ ಮಾಡುತ್ತಿರುವ ಫಲಾನುಭವಿಗಳಿಗೆ ೭% ಬಡ್ಡಿ ಸಹಾಯಧನದೊಂದಿಗೆ ರೂ.೧೦,೦೦೦/- ತುರ್ತುಬಂಡವಾಳವನ್ನು  ಬ್ಯಾಂಕ್ ಸಾಲದ ರೂಪದಲ್ಲಿ (ಒಂದು ವರ್ಷ ಅವಧಿಗೆ) ೧೨ ಮಾಸಿಕ ಕಂತುಗಳಲ್ಲಿ  ಮರುಪಾವತಿಸುವ ಯೋಜನೆ ಇದಾಗಿದ್ದು, ಜಿಲ್ಲೆಯಲ್ಲಿ ಒಟ್ಟು ೭,೯೨೧ ಬೀದಿಬದಿ ವ್ಯಾಪಾರಿಗಳಿಗೆ ಈ ಯೋಜನೆಯ ಫಲಾನುಭವಿಗಳನ್ನಾಗಿಸಲು ಗುರಿ ನಿಗದಿಪಡಿಸಲಾಗಿದೆ. ಈಗಾಗಲೆ ಸುಮಾರು ೨೮೫೦ ರಷ್ಟು ಬೀದಿಬದಿ ವ್ಯಾಪಾರಿಗಳ ಅರ್ಜಿಗಳನ್ನು ಬ್ಯಾಂಕ್ ಸಾಲಕ್ಕಾಗಿ ಆನ್‌ಲೈನ್‌ನಲ್ಲಿ ಅಪ್ಲೋಡ್ ಮಾಡಲಾಗಿದ್ದು ೧೩೦೦ರಷ್ಟು ಫಲಾನುಭವಿಗಳಿಗೆ ವಿವಿಧ ಬ್ಯಾಂಕುಗಳಿಂದ ಸಾಲ ಮಂಜೂರಾಗಿರುತ್ತದೆ.  ಈ ಯೋಜನೆಯ ಬಗ್ಗೆ  ಇನ್ನೂ ಹೆಚ್ಚಿನ ಜಾಗೃತಿ ಮೂಡಿಸಿ ನಗರಗಳಲ್ಲಿ ಕಾರ್ಯಾಚರಿಸುತ್ತಿರುವ ಹಾಗೂ ಆರ್ಥಿಕವಾಗಿ ಸಂಕಷ್ಟದಲ್ಲಿರುವ ಎಲ್ಲಾ ಬೀದಿಬದಿ ವ್ಯಾಪಾರಿಗಳು ಈ ಯೋಜನೆಯ ಪ್ರಯೋಜನ ಪಡೆಯಲು ಮುಂದೆ ಬರುವಂತೆ ಹಾಗೂ ಜಿಲ್ಲೆಗೆ ನಿಗದಿಪಡಿಸಲಾಗಿರುವ ಗುರಿಯನ್ನು ತಲುಪಲು ಸಾಧ್ಯವಾಗುವಂತೆ ಈ  ಸಮಾವೇಶವನ್ನು ಆಯೋಜಿಸಲಾಗಿದೆ.

ಶಾಸಕರಾದ ಡಿ. ವೇದವ್ಯಾಸ ಕಾಮತ್, ರಾಜೇಶ್ ನಾಯ್ಕ್, ಮೇಯರ್ ದಿವಾಕರ್ ಪಾಂಡೇಶ್ವರ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು