9:25 AM Wednesday27 - January 2021
ಬ್ರೇಕಿಂಗ್ ನ್ಯೂಸ್
ರೇಡಿಯೋ ಸಾರಂಗ್ ಮತ್ತು ಎನ್.ಎಸ್.ಎಸ್. ವಿದ್ಯಾರ್ಥಿಗಳಿಂದ ಬೆಂಗ್ರೆ ಬೀಚ್ ಸ್ವಚ್ಛತೆ ಜಾನಪದ ಕ್ರೀಡೆ ಕಂಬಳ ಜನವರಿ ಅಂತ್ಯದಿಂದ ಪ್ರಾರಂಭ: ಸಂಸದ ನಳಿನ್ ಕುಮಾರ್ ಕಟೀಲ್ ಎಸ್‌ಡಿಪಿಐ ವತಿಯಿಂದ ಗಣರಾಜ್ಯೋತ್ಸವ ಪ್ರಯುಕ್ತ ರೈತ ಐಕ್ಯತಾ ಸಂಗಮ ಬಿಗ್ ಬಾಸ್ ಖ್ಯಾತಿಯ ನಟಿ ಜಯಶ್ರೀ ರಾಮಯ್ಯ ಆತ್ಮಹತ್ಯೆ: ಕುಟುಂಬದ ಸಮಸ್ಯೆ ಕಾರಣ? ಮಂಗಳೂರಿನ ನರ್ಸಿಂಗ್ ಕಾಲೇಜಿನ 4 ಮಂದಿ ವಿದ್ಯಾರ್ಥಿನಿಯರಿಗೆ ಕೊರೊನಾ: ಪಾಲಕರಲ್ಲಿ ಮತ್ತೆ ಭೀತಿ… ಗಣರಾಜ್ಯೋತ್ಸವ ಪರೇಡ್ ಗೆ ಆಯ್ಕೆಯಾದ ಕರ್ನಾಟಕದ ಟ್ಲಾಬ್ಲೊದಲ್ಲಿ ಕನ್ನಡ ಧ್ವಜ ನಾಪತ್ತೆ ಕಟೀಲು ಮೇಳ ಸೇವೆ ಆಟಗಳು:  ಇಂದು ಎಲ್ಲೆಲ್ಲಿ?  ನೀವೇ ನೋಡಿ ಬಡವರನ್ನು ಬೀದಿ ಪಾಲು ಮಾಡಿದರೆ ಜೋಕೆ: ಪಾಲಿಕೆಗೆ ಇಂಟಕ್ ರಾಷ್ಟ್ರೀಯ ಕಾರ್ಯದರ್ಶಿ ರಾಕೇಶ್… ವಿ.ವಿ ಕಾಲೇಜಿನಲ್ಲಿ ಪ್ರೌಢ ಶಾಲಾ ರಾಷ್ಟ್ರೀಯ ಸೇವಾಯೋಜನೆಯ ಯೋಜನಾಧಿಕಾರಿಗಳಿಗೆ ರಾಜ್ಯ ಮಟ್ಟದ ಕಾರ್ಯಾಗಾರ ಬಲ್ಯ ಸಮೀಪ ಕಾರು- ಬೊಲೆರೋ ಅಪಘಾತ:  ಒಬ್ಬ ಸಾವು, 4 ಮಂದಿ ತೀವ್ರ…

ಇತ್ತೀಚಿನ ಸುದ್ದಿ

ಮಂಗಳಮ್ಮನಿಗೆ ಡಿಸೆಂಬರ್ 8ರಂದು ಕಾರ್ತೀಕ ಲಕ್ಷ ದೀಪೋತ್ಸವ: ಗುರ್ಜಿ ದೀಪಾಲಂಕಾರ

December 4, 2020, 10:03 PM

ಮಂಗಳೂರು(reporterkarnataka news):

ಶ್ರೀ ಮಂಗಳಾದೇವಿ ದೇವಸ್ಥಾನದಲ್ಲಿ ಐತಿಹಾಸಿಕವಾಗಿ ನಡೆದುಕೊಂಡು ಬಂದಿರುವಂತೆ ಕಾರ್ತಿಕ ಮಾಸದ ಕೃಷ್ಣ ಪಕ್ಷದ ಬಹುಳ ನವಮಿಯಂದು ಕಾರ್ತೀಕ ದೀಪೋತ್ಸವವು ನಡೆಯಲಿದ್ದು,  ಆ ಪ್ರಯುಕ್ತ ಡಿಸೆಂಬರ್ 8ರ

ಮಂಗಳವಾರದಂದು ವರ್ಷಂಪ್ರತಿಯಂತೆ ಬಹು ವಿಜೃಂಭಣೆಯಿಂದ ಮಂಗಳಮ್ಮನಿಗೆ ಕಾರ್ತೀಕ ಲಕ್ಷ ದೀಪೋತ್ಸವ ನಡೆಯಲಿದೆ.

ವಿಶೇಷವಾಗಿ ಮಂಗಳಾದೇವಿಯಲ್ಲಿನ ಸಾಂಪ್ರದಾಯಿಕ ಆಚರಣೆಗಳಲ್ಲೊಂದಾದ ಗುರ್ಜಿ ದೀಪಾಲಂಕಾರದ  ವೈಶಿಷ್ಟ್ಯತೆಯೇ ಇಲ್ಲಿನ ದೀಪೋತ್ಸವದ ಪ್ರಧಾನ ಸೊಬಗು. ಇದು ಬರೀ ಮಂಗಳೂರಿಗೆ ಮಾತ್ರವಲ್ಲ ಇಡೀ ರಾಜ್ಯಕ್ಕೆ ಅಪೂರ್ವ ಜತೆಯಲ್ಲಿ ಪ್ರಪ್ರಥಮ ಎನ್ನಬಹುದು. ಪ್ರತಿ ವರ್ಷ ಕಾರ್ತಿಕ ದೀಪೋತ್ಸವದ ಸಮಯದಲ್ಲಿ ಮಂಗಳೂರಿನ ಶ್ರೀಮಂಗಳಾದೇವಿ ದೇವಳದ ತಿರುಗುವ ಗುರ್ಜಿಯಂತೂ ಬಹಳಷ್ಟು ಅಪರೂಪದ ಇತಿಹಾಸವನ್ನು ಹೊಂದಿದೆ. 

ಇತ್ತೀಚಿನ ಸುದ್ದಿ

ಜಾಹೀರಾತು