ಇತ್ತೀಚಿನ ಸುದ್ದಿ
ಮಂಗಳೂರಿನಲ್ಲಿ ಕರ್ತವ್ಯನಿರತ ಪೊಲೀಸ್ ಹೆಡ್ ಕಾನ್ ಸ್ಟೇಬಲ್ ಮೇಲೆ ತಲವಾರಿನಿಂದ ಹಲ್ಲೆ
December 16, 2020, 7:21 PM

ಮಂಗಳೂರು(reporterkarnataka news): ನಗರದ ನ್ಯೂಚಿತ್ರ ಥಿಯೇಟರ್ ಬಳಿ ಹೆಡ್ ಕಾನ್ ಸ್ಟೇಬಲ್ ವೊಬ್ಬರ ಮೇಲೆ ತಲವಾರಿನಿಂದ ಹಲ್ಲೆ ನಡೆಸಿದ ಘಟನೆ ಬುಧವಾರ ಹಾಡಹಗಲೇ ನಡೆದಿದೆ.
ಬಂದರು ಠಾಣೆಯ ಹೆಡ್ ಕಾನ್ ಸ್ಟೇಬಲ್ ಗಣೇಶ್ ಕಾಮತ್ ಹಾಗೂ ಇತರ ಇಬ್ಬರು ಪೊಲೀಸ್ ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸುತ್ತಿದ್ದಾಗ ಈ ಘಟನೆ ನಡೆದಿದೆ. ಗಣೇಶ್ ಕಾಮತ್ ಅವರು ಸಹೋದ್ಯೋಗಿಗಳ ಜತೆ ಸೇರಿ ವಾಹನಗಳ ತಪಾಸಣೆ ನಿರತರಾಗಿದ್ದರು. ಆ ವೇಳೆ ಬೈಕ್ ನಲ್ಲಿ ಬಂದ ಅಪರಿಚಿತ ವ್ಯಕ್ತಿಯೊಬ್ಬರು ಗಣೇಶ್ ಕಾಮತ್ ಅವರ ಮೇಲೆ ತಲವಾರಿನಿಂದ ಹಲ್ಲೆ ನಡೆಸಿದ್ದಾರೆ. ಕಾಮತ್ ಅವರ ಕೈಗೆ ತಲವಾರಿನ ಏಟು ಬಿದ್ದಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.