ಇತ್ತೀಚಿನ ಸುದ್ದಿ
ಮಂಗಳೂರು ಸಮಗ್ರ ಅಭಿವೃದ್ಧಿಗೆ 125 ಕೋಟಿ: ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಘೋಷಣೆ
November 5, 2020, 11:53 AM

ಚಿತ್ರಗಳು : ಅನುಷ್ ಪಂಡಿತ್, ಮಂಗಳೂರು
ಮಂಗಳೂರು(reporterkarnataka news): ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆಯಡಿ ಮಂಗಳೂರು ಅಭಿವೃದ್ಧಿಗೆ 125 ಕೋಟಿ ರೂ. ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.

ನಗರದ ನವಭಾರತ ಸರ್ಕಲ್ ಬಳಿಯ ಟಿವಿ ರಮಣ್ ಸಭಾಂಗಣದಲ್ಲಿ ಗುರುವಾರ ನಡೆದ ಬಿಜೆಪಿ ರಾಜ್ಯ ಕಾರ್ಯಕಾರಣಿ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.



ಆಂತರಿಕ ಭದ್ರತೆಯ ದೃಷ್ಟಿಯಿಂದ ಕರಾವಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು. ಕಡಲ ತೀರದ ರಕ್ಷಣೆಗೆ ಎಲ್ಲ ಕ್ರಮಕೈಗೊಳ್ಳಲಾಗುವುದು ಎಂದು ಅವರು ನುಡಿದರು.

ಮತಾಂತರ ತಡೆಗಟ್ಟುವ ನಿಟ್ಟಿನಲ್ಲಿ ಕಾನೂನನ್ನು ಇನ್ನೂ ಬಿಗಿಗೊಳಿಸಲಾಗುವುದು. ಮದುವೆಗಾಗಿ ಮತಾಂತರ ನಡೆಯುವುದನ್ನು ತಡೆಗಟ್ಟಲಾಗುವುದು. ಹೆಣ್ಣು ಮಕ್ಕಳಿಗೆ ಆಸೆ, ಆಮಿಷೆ ತೋರಿಸಿ ಮತಾಂತರ ನಡೆಸುವುದನ್ನು ನಿಲ್ಲಿಸಲಾಗುವುದು ಎಂದು ಅವರು ನುಡಿದರು.





ಪಕ್ಷದ ಸಂಘಟನೆಯ ವಿಚಾರದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ಯಾವಾಗಲೂ ಎತ್ತಿದ ಕೈ ಎಂದು ಹೇಳಿದ ಮುಖ್ಯಮಂತ್ರಿ , ಪಕ್ಷ ಸಂಘಟನೆಯಲ್ಲಿ ಕರಾವಳಿ ಜಿಲ್ಲೆಗಳು ಯಾವಾಗಲೂ ಮುಂದಿರುತ್ತದೆ ಎಂದರು.



ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅಧ್ಯಕ್ಷತೆ ವಹಿಸಿದ್ದರು. ಕೇಂದ್ರ ಹಾಗೂ ರಾಜ್ಯ ಸಚಿವರುಗಳು, ಸಂಸದರು, ಶಾಸಕರು ಉಪಸ್ಥಿತರಿದ್ದರು.