9:47 AM Wednesday20 - January 2021
ಬ್ರೇಕಿಂಗ್ ನ್ಯೂಸ್
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ. ಎಸ್. ಈಶ್ವರಪ್ಪ 29ರಂದು ಮಂಗಳೂರಿಗೆ ಮಂಗಳೂರು ನಗರದ ಹಲವೆಡೆ ನಾಳೆ, ನಾಳಿದ್ದು ನೀರಿಲ್ಲ: ಯಾವೆಲ್ಲ ಪ್ರದೇಶವೆಂದು ನೀವೇ ಓದಿ ಬೈಕಿಗೆ ಸೈಡ್ ಕೊಡದ ನೆಪದಲ್ಲಿ ಸಿಟಿ ಬಸ್ ಚಾಲಕನಿಗೆ  ಪೆಟ್ರೋಲ್ ಸುರಿದು ಬೆಂಕಿ… ಬಿಲ್ಲವ ಮಹಿಳೆಯರಿಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ ಸೌಲಭ್ಯಕ್ಕೆ ಬಜೆಟ್ ನಲ್ಲಿ 50… ಜನವರಿ 27, 28 ರಂದು ನಡೆಯಲಿರುವ ಕೋಲಾರ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಆಹ್ವಾನ… ಮಂಗಳೂರಿನಲ್ಲಿ ಮತ್ತೆ ಸದ್ದು ಮಾಡಿದ ಹನಿಟ್ರ್ಯಾಪ್ : ಇಬ್ಬರು ಯುವತಿಯರು ಸೇರಿದಂತೆ 4… ಹಳ್ಳಿ ಹಳ್ಳಿಗೂ ಬಿಜೆಪಿ ಬೇರು ವ್ಯಾಪಿಸಿರುವುದು ಗ್ರಾಮ ಪಂಚಾಯಿತಿ ಚುನಾವಣೆಯಿಂದ ಸಾಬೀತು: ನಳಿನ್… ರಾಜ್ಯವೇ ಬೆಚ್ಚಿ ಬೀಳುವ ರೀತಿಯಲ್ಲಿ ಕಾಂಗ್ರೆಸ್ – ಜೆಡಿಎಸ್ ನೆಲಸಮ: ಬೆಳಗಾವಿ ಸಮಾವೇಶದಲ್ಲಿ… ಮೋದಿ- ಬಿಎಸ್ ವೈ ಜೋಡಿಗೆ ಜನರ ಆಶೀರ್ವಾದ: ಬೆಳಗಾವಿಯಲ್ಲಿ ಗೃಹ ಸಚಿವ ಅಮಿತ್… ವೆನ್ಲಾಕ್ ಆಸ್ಪತ್ರೆಯಲ್ಲಿ ಎಂ ಫ್ರೆಂಡ್ಸ್ ನ ಕಾರುಣ್ಯ ಯೋಜನೆಗೆ ಜಾಗತಿಕ ಬಂಟರ ಸಂಘಗಳ…

ಇತ್ತೀಚಿನ ಸುದ್ದಿ

ಮಂಗಳೂರು ಏರ್ಪೋರ್ಟ್‌ಗೆ ಕೋಟಿ ಚೆನ್ನಯ ಹೆಸರಿಡುವಂತೆ ಆಗ್ರಹಿಸಿ ಡಿ.7ರಂದು ಬೈಕ್ ಜಾಥಾ

December 2, 2020, 7:26 PM

ಮಂಗಳೂರು(Reporter Karnataka News)
ಮಂಗಳೂರು ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯ ಎಂದು ಹೆಸರಿಡುವಂತೆ ಆಗ್ರಹಿಸಿ ಡಿ.೭ ರಂದು ಬೆಳಿಗ್ಗೆ ೧೦ ಗಂಟೆಗೆ ಮಂಗಳೂರು ಕುದ್ರೋಳಿ ದೇವಸ್ಥಾನದಿಂದ ಮಂಗಳೂರು ವಿಮಾನ ನಿಲ್ದಾಣದ ತನಕ ೫೦೦ ಬೈಕ್‌ಗಳಲ್ಲಿ ಜಾಥಾ ನಡೆಯಲಿದೆ ಎಂದು ಕೋಟಿ ಚೆನ್ನಯ ಸಂಚಲನ ಸಮಿತಿಯ ಅಧ್ಯಕ್ಷ ಸತ್ಯಜೀತ್ ಸುರತ್ಕಲ್ ತಿಳಿಸಿದರು.
ಅವರು ಮಂಗಳವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾತನಾಡಿ, ಹಾವೇರಿ ರೈಲ್ವೆ ನಿಲ್ದಾಣಕ್ಕೆ ಮೈಲಾರ ಮಹಾದೇವ ಎಂದು ಹೆಸರಿಟ್ಟಿದ್ದು, ಇದರ ಹೆಸರಿಡಲು ಕಡತವನ್ನು ಗ್ರಾ.ಪಂ.ನಿಂದ ನಿರ್ಣಯಗೊಂಡು ರಾಜ್ಯ ಸರ್ಕಾರಕ್ಕೆ ಕಳುಹಿಸಿದ್ದು ಅಲ್ಲಿ ಯಾವುದೇ ಆಕ್ಷೇಪ ಇಲ್ಲ ಎಂದು ಕೇಂದ್ರ ಸರ್ಕಾರಕ್ಕೆ ಕಳುಹಿಸಿದರಿಂದ ಅಲ್ಲಿಗೆ ಮೈಲಾರ ಮಹದೇವ ಎಂಬ ಹೆಸರನ್ನು ಇಡಲಾಯಿತು. ದ.ಕ. ಜಿಲ್ಲೆಯಲ್ಲಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯ ಎಂಬ ಹೆಸರಿಡುವಂತೆ ಜಿ.ಪಂ. ಸಾಮಾನ್ಯ ಸಭೆಯಲ್ಲಿ ನಿರ್ಣಯ ಕೈಗೊಂಡು ರಾಜ್ಯ ಸರ್ಕಾರಕ್ಕೆ ಕಳುಹಿಸಲಾಗಿದ್ದು, ಅದು ತಿರಸ್ಕಾರಗೊಂಡು ಮತ್ತೆ ಇಲ್ಲಿಗೆ ಬಂದಿದ್ದು, ಅದನ್ನು ಮತ್ತೆ ಕಳುಹಿಸಲಾಗಿದೆ ಎಂದರು.
ಕೋಟಿ ಚೆನ್ನಯ ಕೇವಲ ಒಂದು ಸಮುದಾಯಕ್ಕೆ ಸೇರಿದವರಲ್ಲ. ಅವರು ಸಾಮಾನ್ಯ ಜನರಂತೆ ಜೀವಿಸಿ ಅನ್ಯಾಯದ ವಿರುದ್ಧ ಹೋರಾಡಿ, ಪವಾಡ ಪುರುಷರಾಗಿದ್ದಾರೆ. ಅವರನ್ನು ಎಲ್ಲಾ ಸಮುದಾಯಕ್ಕೆ ಸೇರಿದವರು. ಈಗಾಗಲೇ ಬಂಟ ಸಂಘದ ಅಧ್ಯಕ್ಷ ಅಜೀತ್ ಕುಮಾರ್ ಮಲಾಡಿ ಅವರು ಪತ್ರದ ಮೂಲಕ ಬೆಂಬಲವನ್ನು ಸೂಚಿಸಿದ್ದಾರೆ. ಎಲ್ಲಾ ಸಮುದಾಯದವರು ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯರ ಹೆಸರಿಡಲು ಬೆಂಬಲವನ್ನು ಸೂಚಿಸುತ್ತಿದ್ದಾರೆ ಎಂದರು.
ಅದಾನಿ ಅವರು ಮಂಗಳೂರು ವಿಮಾನ ನಿಲ್ದಾಣವನ್ನು ಕೊಂಡುಕೊಂಡಿಲ್ಲ. ಕೇವಲ ನಿರ್ವಾಹಣೆಗೆ ಮಾತ್ರ ತೆಗೆದುಕೊಂಡಿದ್ದಾರೆ. ಮಂಗಳೂರು ವಿಮಾನಿ ನಿಲ್ದಾಣ ಈಗಲೂ ಕೇಂದ್ರ ಸರ್ಕಾರದ ಒಡೆತನದಲ್ಲಿದೆ. ಅದಾನಿಯವರಿಗೆ ಯಾವುದೇ ರೀತಿಯಲ್ಲಿಯೂ ಹೆಸರನ್ನು ಬದಲಾಯಿಸಲು ಅಧಿಕಾರವಿಲ್ಲ ಎಂದು ಹೇಳಿದರು.
ಕೋಟಿ ಚೆನ್ನಯ ಸಂಚಲನ ಸಮಿತಿಯ ಪ್ರಮುಖರಾದ ಸೂರಾಜ್ ಕಲ್ಯಾಣ್, ಜೀವನ್ ಪೂಜಾರಿ, ಪ್ರಕಾಶ್ ಸಾಲಿಯನ್ ಪಾಣೆಮಂಗಳೂರು, ಅಶ್ವತ್, ಅವಿನಾಶ್ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು