8:34 PM Monday18 - January 2021
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲಿ ಮತ್ತೆ ಸದ್ದು ಮಾಡಿದ ಹನಿಟ್ರ್ಯಾಪ್ : ಇಬ್ಬರು ಯುವತಿಯರು ಸೇರಿದಂತೆ 4… ಹಳ್ಳಿ ಹಳ್ಳಿಗೂ ಬಿಜೆಪಿ ಬೇರು ವ್ಯಾಪಿಸಿರುವುದು ಗ್ರಾಮ ಪಂಚಾಯಿತಿ ಚುನಾವಣೆಯಿಂದ ಸಾಬೀತು: ನಳಿನ್… ರಾಜ್ಯವೇ ಬೆಚ್ಚಿ ಬೀಳುವ ರೀತಿಯಲ್ಲಿ ಕಾಂಗ್ರೆಸ್ – ಜೆಡಿಎಸ್ ನೆಲಸಮ: ಬೆಳಗಾವಿ ಸಮಾವೇಶದಲ್ಲಿ… ಮೋದಿ- ಬಿಎಸ್ ವೈ ಜೋಡಿಗೆ ಜನರ ಆಶೀರ್ವಾದ: ಬೆಳಗಾವಿಯಲ್ಲಿ ಗೃಹ ಸಚಿವ ಅಮಿತ್… ವೆನ್ಲಾಕ್ ಆಸ್ಪತ್ರೆಯಲ್ಲಿ ಎಂ ಫ್ರೆಂಡ್ಸ್ ನ ಕಾರುಣ್ಯ ಯೋಜನೆಗೆ ಜಾಗತಿಕ ಬಂಟರ ಸಂಘಗಳ… ಸಚಿವ ಅಂಗಾರ ತವರಿನಲ್ಲಿ ಕಮಲ ಕದನ: ಬಿಜೆಪಿ ಶಕ್ತಿ ಕೇಂದ್ರದಿಂದ ಸುಳ್ಯ ಮಂಡಲ ಸಮಿತಿಗೆ… ಇಟಗಿಹಾಳ: ಮಧ್ಯದಂಗಡಿ ತೆರವಿಗೆ ಆಗ್ರಹಿಸಿ 3ನೇ ಬಾರಿ ಗ್ರಾಮಸ್ಥರಿಂದ ಭಾರಿ ರಸ್ತೆ ತಡೆ… ಕಾಮಾಜೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ವಿವೇಕಾ ಸಂದೇಶ 2021’ ಕಾರ್ಯಕ್ರಮ ರಾಜ್ಯದ ಎಲ್ಲ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರ ನೇಮಕ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ ಭದ್ರಾವತಿ: ಕ್ಷಿಪ್ರ ಕಾರ್ಯಪಡೆ ಕಚೇರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೂಮಿ…

ಇತ್ತೀಚಿನ ಸುದ್ದಿ

ಮಂಗಳೂರು ಸೆಂಟ್ರಲ್ ಮಾರ್ಕೆಟ್ ನಲ್ಲಿ ತೆರೆದುಕೊಂಡ ಬೆರಳೆಣಿಕೆಯ ಅಂಗಡಿಗಳು

August 13, 2020, 12:17 PM

ಮಂಗಳೂರು(reporterkarnataka news): ಮಂಗಳೂರು ಸೆಂಟ್ರಲ್ ಮಾರ್ಕೆಟ್ ವ್ಯಾಪಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನಲ್ಲಿರುವ ಅರ್ಜಿಯನ್ನು ಮಂಗಳೂರು ಮಹಾನಗರ ಪಾಲಿಕೆ ಹಿಂಪಡೆದಿದ್ದು, ಗುರುವಾರ ಮಾರುಕಟ್ಟೆ ಸಂಕೀರ್ಣದ ಹೊರಭಾಗದಲ್ಲಿರುವ ಕೆಲವು ಅಂಗಡಿಗಳು ತೆರೆದಿವೆ.

ಸೆಂಟ್ರಲ್ ಮಾರುಕಟ್ಟೆ ಪ್ರವೇಶ ದ್ವಾರ ತೆರೆದುಕೊಂಡಿದ್ದರೂ ಯಾವುದೇ ತರಕಾರಿ ಹಾಗೂ ಹಣ್ಣಿನ ಅಂಗಡಿಗಳು ತೆರೆದುಕೊಂಡಿರಲಿಲ್ಲ. ಸೆಂಟ್ರಲ್ ಮಾರ್ಕೆಟ್ ನ ಒಂದೆಡೆ ಸ್ವಚ್ಚತಾ ಕೆಲಸವನ್ನು ವ್ಯಾಪಾರಿಗಳು ಮಾಡುತ್ತಿದ್ದರು. ಆದರೆ ಸಂಕೀರ್ಣದ ಹೊರಭಾಗದಲ್ಲಿ ರಸ್ತೆಗೆ ಮುಖ ಮಾಡಿರುವ ಕೆಲವು ಅಂಗಡಿಗಳು ತೆರೆದಿದ್ದವು. 

ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಲು ಸಾಧ್ಯವಿಲ್ಲದ ಕಾರಣ ನೀಡಿ ಪಾಲಿಕೆ ಸೆಂಟ್ರಲ್ ಮಾರುಕಟ್ಟೆ ಮುಚ್ಚಲು ಆದೇಶ ನೀಡಿತ್ತು. ಅಲ್ಲಿನ ಹೋಲ್ ಸೇಲ್ ವ್ಯಾಪಾರಿಗಳನ್ನು ಬೈಕಂಪಾಡಿಯಲ್ಲಿರುವ ಎಪಿಎಂಸಿ ಪ್ರಾಂಗಣಕ್ಕೆ ಸ್ಥಳಾಂತರಿಸಿತ್ತು. ಇದನ್ನು ಪ್ರಶ್ನಿಸಿ ವರ್ತಕರ ಸಂಘ ರಾಜ್ಯ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು